Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ : ಅವ್ಯವಹಾರದ ತನಿಖೆಗೆ ಕೊಡಗು ಬಿಜೆಪಿ ಎಸ್‍ಸಿ ಮೋರ್ಚಾ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ : ಅವ್ಯವಹಾರದ ತನಿಖೆಗೆ ಕೊಡಗು ಬಿಜೆಪಿ ಎಸ್‍ಸಿ ಮೋರ್ಚಾ ಒತ್ತಾಯ*

ಮೇ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 28 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಿಗಮದ ಅನುದಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲವು ಪ್ರಭಾವಿಗಳ ಹೆಸರು ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಖಂಡನೀಯ ಮತ್ತು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಒತ್ತಡ ಹೇರಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿರುವುದನ್ನು ಗಮನಿಸಿದರೆ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸ್ಪಷ್ಟವಾಗುತ್ತದೆ. ಇದೇ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಟಿತಗೊಂಡಿದೆ ಎಂದು ಆರೋಪಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಇಲಾಖೆಯಲ್ಲಿನ ವ್ಯವಹಾರಗಳ ಕುರಿತು ಸೂಕ್ತ ತನಿಖೆ ನಡೆಸಬೇಕು. ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಇಲಾಖೆಗಳು ಕೇವಲ ಕಮಿಷನ್ ದಂಧೆಗಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಚಂದ್ರಶೇಖರ್ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡ ಇರುವುದರಿಂದ ರಾಜ್ಯದ ಎಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಇಲಾಖೆ, ನಿಗಮ ಮಂಡಳಿಗಳಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯಬೇಕು ಹಾಗೂ ಅಧಿಕಾರಿ ಚಂದ್ರಶೇಖರ್ ಸಾವಿನ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ಸತ್ಯಾಂಶವನ್ನು ರಾಜ್ಯದ ಜನತೆಗೆ ತಿಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸುತ್ತಿರುವ ಬಗ್ಗೆ ಎದ್ದಿರುವ ಸಂಶಯಗಳನ್ನು ನಿವಾರಿಸಬೇಕು. ತಪ್ಪಿದಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾದಿಂದ ರಾಜ್ಯವ್ಯಾಪಿ ಹೋರಾಟ ನಡೆಸಬೇಕಾಗುತ್ತದೆ ಎಂದು ಪಿ.ಎಂ.ರವಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.