Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕ್ಷಕರು, ಪದವೀಧರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧ : ಸಚಿವ ಮಧು ಬಂಗಾರಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕ್ಷಕರು, ಪದವೀಧರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧ : ಸಚಿವ ಮಧು ಬಂಗಾರಪ್ಪ*

ಮೇ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 29 NEWS DESK : ಶಿಕ್ಷಕರು ಹಾಗೂ ಪದವೀಧರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿಗೆ ಆಗಮಿಸಿದ ಸಚಿವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮತ್ತು ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರುಗಳ ಗೆಲುವಿಗೆ ಪಣ ತೊಡುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯ ಸರಕಾರಿ ಚುನಾವಣೆ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದಿದ್ದು ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ 43 ಸಾವಿರ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಾತ್ರವಲ್ಲದೇ ನೂತನ ಪಿಂಚಣಿ ವ್ಯವಸ್ಥೆಯನ್ನು ಬದಲಿಸಿ ಮತ್ತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೂ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶಿಕ್ಷಕರು ಮತ್ತು ಪದವೀಧರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಮಗೂ ಅರಿವಿದ್ದು, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆ ಹರಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಭಾಗವಾಗಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದ ಎಲ್ಲೆಡೆ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ಕೂಡ ನಿರ್ಧರಿಸಲಾಗಿದೆ. ಇದಕ್ಕಾಗಿ 2 ಸಾವರಿ ಕೋಟಿ ರೂ.ಗಳ ಅಗತ್ಯವಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಕಾರ್ಯ ಕೂಡ ಮುಂದಿನ ವರ್ಷದಿಂದಲೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿದರು. ಒಟ್ಟಿನಲ್ಲಿ ರಾಜ್ಯ ಸರಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ಎಲ್ಲಾ ಯೋಜನೆಗಳನ್ನು ಅನುಷ್ಟಾನಕ್ಕೆ ತರುತ್ತಿದ್ದು, ಪದವೀಧರರಿಗೆ ಯುವ ನಿಧಿ ಮಾದರಿಯಲ್ಲಿ ರಾಷ್ಟ್ರ ಮಟ್ಟದಲ್ಲೇ ಯೋಜನೆ ಜಾರಿಯಾಗಲಿದೆ. ಶಿಕ್ಷಕರು ಮತ್ತು ಪದವೀಧರರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯ ಸರಕಾರಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ, ತಾವು ಕಾರ್ಮಿಕ ಸಂಘಟನೆಯ ಹಿನ್ನೆಲೆಯನ್ನು ಹೊಂದಿದ್ದು, ದುಡಿಯುವ ವರ್ಗದ ಸಮಸ್ಯೆಗಳ ಅರಿವಿದೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ಸದನದಲ್ಲಿ ಪಟ್ಟು ಹಿಡಿದು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿದ್ದೆ. ಇಂತಹ ಪ್ರಕರಣ ದೇಶದಲ್ಲಿಯೇ ಮೊದಲು ಎಂದು ಹೇಳಿದರು. 7ನೇ ವೇತನ ಆಯೋಗದ ಕುರಿತು ನೀತಿ ಸಂಹಿತೆ ಮುಗಿದ ಬಳಿಕ ನಿರ್ಧಾರವಾಗಲಿದೆ ಎಂದು ಹೇಳಿದರು. ಅತಿಥಿ ಉಪನ್ಯಾಸಕರ ವೇತನವನ್ನು 40 ಸಾವಿರಕ್ಕೆ ಏರಿಕೆ ಮಾಡಿರುವುದು, ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಅಘೋಷಿತ ಪ್ರಯಾಣ ಭತ್ಯೆ, ಉಚಿತ ವಿದ್ಯುತ್ ನೀಡುವ ಮೂಲಕ ಕುಟುಂಬದ ಉಳಿತಾಯ ಏರಿಕೆಗೂ ರಾಜ್ಯ ಕಾಂಗ್ರೆಸ್ ಸರಕಾರ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಸರಕಾರದ ಪರವಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 30 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ ಸಂದರ್ಭ ಉತ್ತಮ ಸ್ಪಂದನೆ ಮತ್ತು ಸ್ವಾಗತ ದೊರಕಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಹಣ ಮೀಸಲಿಟ್ಟಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಿ, ರಾಜ್ಯ ಶಿಕ್ಷಣ ನೀತಿ ಜಾರಿಗೂ ಮುನ್ಸೂಚನೆ ಸಿಕ್ಕಿದೆ ಎಂದು ಮಂಜುನಾಥ್ ಕುಮಾರ್ ಹೇಳಿದರು. ಈ ಹಿಂದೆ ಶಿಕ್ಷಕರ ಕೇತ್ರವನ್ನು ಪ್ರತಿನಿಧಿಸಿದ್ದವರು ಗೆದ್ದ ಬಳಿಕ ಕ್ಷೇತ್ರದ ಕಡೆ ತಿರುಗಿಯೂ ನೋಡಲಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೇ ಅವರು ಕೇವಲ ವಿದೂಷಿಯ ಪಾತ್ರ ನಿರ್ವಹಿಸಿದ್ದರು. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಂಜುನಾಥ್ ಕುಮಾರ್ ಹೇಳಿದರು. ಶಿಕ್ಷಕರ ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸಲು ಓರ್ವ ಶಿಕ್ಷಕನಿಂದಲೇ ಸಾಧ್ಯ. ಈ ಹಿನ್ನೆಲೆಯಲ್ಲಿ ಜೂ.3ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪರಾಭವಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಶಾಸಕ ಡಾ. ಮಂತರ್ ಗೌಡ, ಕೆಪಿಸಿಸಿ ಮುಖಂಡರಾದ ಟಿ.ಪಿ.ರಮೇಶ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.