Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಧಾನ ಪರಿಷತ್ ಸ್ಥಾನಕ್ಕೆ ಕೊಡಗು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಧಾನ ಪರಿಷತ್ ಸ್ಥಾನಕ್ಕೆ ಕೊಡಗು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ*

ಮೇ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 30 NEWS DESK : ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರು ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ವಿಧಾನ ಪರಿಷತ್ ಸ್ಥಾನವನ್ನು ಅಲ್ಪಸಂಖ್ಯಾತರೊಬ್ಬರಿಗೆ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲುವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ವಿಧಾನ ಪರಿಷತ್ ನ 11 ಸದಸ್ಯರುಗಳ ಅಧಿಕಾರಾವಧಿ ಜೂ.17 ರಂದು ಕೊನೆಗೊಳ್ಳಲಿದೆ. ಅಲ್ಪಸಂಖ್ಯಾತ ಆಕಾಂಕ್ಷಿಗಳಲ್ಲಿ ಜಿಲ್ಲೆಯ ಓರ್ವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಇಬ್ಬರು ಶಾಸಕರ ಬಳಿ ಕೋರಲಾಗಿದೆ ಎಂದರು.
ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅವರು ಮಾತನಾಡಿ, ನಾನು ಕೂಡ ವಿಧಾನ ಪರಿಷತ್ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನಮ್ಮ ಬೇಡಿಕೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಒಳಪಡುವ ಜಿಲ್ಲೆಯ ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ಕಾಂಗ್ರೆಸ್ ಪಕ್ಷವನ್ನು ನಿರಂತರವಾಗಿ ಬೆಂಬಲಿಸುತ್ತಲೇ ಬಂದಿದ್ದಾರೆ. ಇವರು ಪಕ್ಷದ ಪ್ರಬಲ ಶಕ್ತಿಯೇ ಆಗಿದ್ದಾರೆ. ಜಿಲ್ಲೆಯ ಶಾಸಕರು ನಮ್ಮ ಈ ಬೇಡಿಕೆಯನ್ನು ಪರಿಗಣಿಸಿ, ವಿಧಾನ ಪರಿಷತ್ ನಲ್ಲಿ ಸ್ಥಾನ ಒದಗಿಸಲು ಕಾಂಗ್ರೆಸ್ ವರಿಷ್ಠರಿಗೆ ಶಿಫಾರಸ್ಸು ಮಾಡಬೇಕೆಂದು ಹೇಳಿದರು.
ಈ ಹಿಂದಿನಿಂದಲು ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಒಪ್ಪಿ ಆ ಪಕ್ಷವನ್ನು ಅಲ್ಪಸಂಖ್ಯಾತರು ಬೆಂಬಲಿಸುತ್ತಾ ಬಂದಿದ್ದಾರೆ. ಆದ್ದರಿಂದ ಈ ಬಾರಿ ನಮಗೆ ರಾಜಕೀಯ ಸ್ಥಾನಮಾನ ನೀಡಲು ಪಕ್ಷದ ಪ್ರಮುಖರು ಮುಂದಾಗಬೇಕು. ನಾನು ಸೇರಿದಂತೆ ಕೆ.ಎಂ.ಲತೀಫ್, ಸುರಯ್ಯ ಅಬ್ರಾರ್, ಪಿ.ಎ.ಹನೀಫ್, ಅಬ್ದುಲ್ ರೆಹಮಾನ್, ಅಬ್ದುಲ್ ಸಲಾಂ ಅವರು ಆಕಾಂಕ್ಷಿಗಳಾಗಿರುವುದಾಗಿ ತಿಳಿಸಿದರು.
ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರಯ್ಯ ಅಬ್ರಾರ್ ಮಾತನಾಡಿ, ಕಳೆದ ಎರಡೂವರೆ ದಶಕಗಳಿಂದ ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಈ ಸಂದಿಗ್ಧ ಅವಧಿಯಲ್ಲಿ ಕೂಡ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ಕೈ ಬಿಟ್ಟಿಲ್ಲ. ಈ ಹಿಂದೆ ಟಿ.ಜಾನ್ ಅವರು ವಿಧಾನ ಪರಿಷತ್ ಸದಸ್ಯರಾದ ಬಳಿಕ ಅಲ್ಪಸಂಖ್ಯಾತರಿಗೆ ವಿಧಾನ ಪರಿಷತ್‍ನಲ್ಲಿ ಅವಕಾಶಗಳು ದೊರೆತಿಲ್ಲ. ನಾನು ಕೂಡ ಈ ಬಾರಿಯ ಎಂಎಲ್‍ಸಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದರು.
ಹಿಂದೆ ಜಿಲ್ಲೆಯ ವೀಣಾ ಅಚ್ಚಯ್ಯ ಅವರಿಗೆ ವಿಧಾನ ಪರಿಷತ್ ಸ್ಥಾನವನ್ನು ನೀಡಿದ್ದರೆ, ತಾರಾ ಅಯ್ಯಮ್ಮ ಅವರಿಗೆ ನಿಗಮದಲ್ಲಿ ಅವಕಾಶ ಒದಗಿಸಲಾಗಿತ್ತು. ಸುಮಾವಸಂತ್ ಅವರು ಶಾಸಕರಾಗಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ನಾನೂ ಕೂಡ ಆಕಾಂಕ್ಷಿಯಾಗಿದ್ದು, ಕೊಡಗಿನ ಅಲ್ಪಸಂಖ್ಯಾತರನ್ನು ಪರಿಗಣಿಸಿ ವಿಧಾನ ಪರಿಷತ್ ನಲ್ಲಿ ಅವಕಾಶ ಕಲ್ಪಿಸಬೇಕು. ಮಹಿಳೆಯರಿಗೆ ಸ್ಥಾನ ನೀಡಿದರೆ ಇನ್ನೂ ಉತ್ತಮ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಹಾಗೂ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಬಾವ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.