Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
  • *ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*
  • *ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*
  • *ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*
  • *15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*
  • *ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳ ಸಂಭ್ರಮ : ಎತ್ತಿನ ಗಾಡಿಯಲ್ಲಿ ಬಂದ ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳ ಸಂಭ್ರಮ : ಎತ್ತಿನ ಗಾಡಿಯಲ್ಲಿ ಬಂದ ವಿದ್ಯಾರ್ಥಿಗಳು*

ಮೇ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 31 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಉಭಯ ಶಾಲೆಗಳ ಮಕ್ಕಳು ವಿನೂತನ ರೀತಿಯಲ್ಲಿ ಶಾಲೆಗೆ ಆಗಮಿಸಿದ್ದು, ಗ್ರಾಮಸ್ಥರು ಗಮನ ಸೆಳೆಯಿತು.
ಗ್ರಾಮಸ್ಥರು ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾದರು. ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಕೂಡ್ಲೂರು ಗ್ರಾಮದಲ್ಲಿ ಉಭಯ ಶಾಲೆಯ ವತಿಯಿಂದ ಜಂಟಿಯಾಗಿ ಏರ್ಪಡಿಸಿದ್ದ ಎತ್ತಿನ ಗಾಡಿಯ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹೂವು ಹಾಗೂ ಸಿಹಿ ವಿತರಿಸಿ ಸ್ವಾಗತಿಸಿ ಶಾಲೆಗೆ ಬರಮಾಡಿಕೊಂಡರು.
ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, ‘ಶಿಕ್ಷಣವೇ ಶಕ್ತಿ’ ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿಂದ ಶಾಲೆಗೆ ಆಗಮಿಸಿದರು.
ಗ್ರಾಮದ ಬಸವೇಶ್ವರ ದೇವಸ್ಥಾನ ಬಳಿಯ ಮುಖ್ಯರಸ್ತೆ ಬಳಿಯಿಂದ ಆರಂಭಗೊಂಡ ಮಕ್ಕಳ ಎತ್ತಿನ ಗಾಡಿಗೆ ಚಾಲನೆ ನೀಡಿದ ಗ್ರಾಮದ ಹಿರಿಯ ನಾಗರಿಕರು ಹಾಗೂ ಕೃಷಿಕ ಕೆ.ಎಸ್.ರಾಜಾಚಾರಿ, ಪೋಷಕರು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.
ಮಕ್ಕಳು ಏರಿದ ಅಲಂಕೃತ ಎತ್ತಿನ ಗಾಡಿಯನ್ನು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮುನ್ನಡೆಸಿದರು. ಗ್ರಾಮದ ಕೃಷಿಕ ಕೆ.ಆರ್.ನಾಗರಾಜ್ ಅವರ ಎತ್ತಿನ ಗಾಡಿಯಲ್ಲಿ ಸಾಗಿದ ಮಕ್ಕಳಿಗೆ ದಾರಿಮಧ್ಯೆ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.
ಎತ್ತಿನ ಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳಿಗೆ ಶಿಕ್ಷಕಿಯರು ಸಾಂಪ್ರದಾಯಿಕ ಆರತಿ ಬೆಳಗಿಸಿದರು. ಪ್ರೌಢಶಾಲಾ ಅಂಗಳಕ್ಕೆ ಎತ್ತಿನ ಗಾಡಿಯ ಮೂಲಕ ಆಗಮಿಸಿದ ಮಕ್ಕಳಿಗೆ ಶಿಕ್ಷಕ ವೃಂದ ಹೂವು, ಸಿಹಿ ಹಾಗೂ ಪುಸ್ತಕ ನೀಡುವ ಮೂಲಕ ಸ್ವಾಗತಿಸಿದರು.
ಪ್ರಸಕ್ತ ಸಾಲಿನ ಶಿಕ್ಷಣ ಇಲಾಖೆಯ ಧ್ಯೇಯವಾಕ್ಯ “ಶೈಕ್ಷಣಿಕ ಬಲವರ್ಧನೆ” ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೌಲಭ್ಯದೊಂದಿಗೆ ವಿವಿಧ ಸವಲತ್ತುಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಮನವಿ ಮಾಡಿದರು.
ಪಠ್ಯ ಪುಸ್ತಕ ವಿತರಣೆಗೆ ಚಾಲನೆ ನೀಡಿದ ಜಾನಪದ ಕಲಾವಿದ ಭರಮಣ್ಣ ಬೆಟ್ಟಗೇರಿ, ಗ್ರಾಮಾಂತರ ಪ್ರದೇಶದ ಈ ಸರ್ಕಾರಿ ಪ್ರೌಢಶಾಲೆಗೆ ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದ್ದು, ಮಕ್ಕಳು ಉತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದ ಅವರು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು, ಎತ್ತಿನ ಗಾಡಿಯ ಮೂಲಕ ಮಕ್ಕಳನ್ನು ಶಾಲೆಗೆ ಕರೆತಂದ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರ ವಿಶೇಷ ಕಾಳಜಿಯು ಅನುಕರಣೀಯವಾದುದು ಎಂದರು.
ಎಸ್‍ಡಿಎಂಸಿ ಮಾಜಿ ಸದಸ್ಯ ಎಂ.ನಾಗರಾಜ್ ಹಾಗೂ ದಾನಿ ಕೆ.ಎನ್.ಸೋಮಶೇಖರ್ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ, ರೇಖಾ, ಕೆ.ಟಿ.ಸೌಮ್ಯ, ಪೋಷಕರು ಇದ್ದರು.
ಮಕ್ಕಳಿಗೆ ಸಿಹಿ ವಿತರಣೆ : ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಸಿಹಿಯೊಂದಿಗೆ ಬಿಸಿಯೂಟ ವಿತರಿಸಲಾಯಿತು. ಮಕ್ಕಳು ಶಾಲಾ ಪ್ರಾರಂಭೋತ್ಸವದಲ್ಲಿ ಸಂಭ್ರಮಿಸಿದರು. ಸಮುದಾಯ ಭಾಗವಹಿಸುವಿಕೆ ಎತ್ತಿನ ಗಾಡಿ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಗ್ರಾಮದ ಸಮುದಾಯದೊಂದಿಗೆ ಪ್ರೌಢಶಾಲಾ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಕೆ.ಕೆ.ಭೋಗಪ್ಪ, ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗಿರಿಪ್ರಸಾದ್, ಉಪಾಧ್ಯಕ್ಷೆ ಶಾಹಿದಾ, ಸದಸ್ಯೆ ಸುಮತಿ, ಮುಖ್ಯ ಶಿಕ್ಷಕಿ ಹೆಚ್.ಎಂ.ಸುಜಾತ, ಶಿಕ್ಷಕರು, ವಿದ್ಯಾರ್ಥಿಗಳು, ದೇವಾಲಯ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ…

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*

ಏಪ್ರಿಲ್ 29, 2026

*ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*

ಏಪ್ರಿಲ್ 29, 2026

*15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 29, 2026

*ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*

ಏಪ್ರಿಲ್ 29, 2026

*ಮೇ 5ರಂದು ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.