Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಜೂನ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.1 NEWS DESK : ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ನುಡಿದರು.
ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರ ದಾಸ್ತಾನು ಮಾಡಿಕೊಂಡು ಕೃಷಿಕರಿಗೆ ಕಾಲಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ದಾಸ್ತಾನು, ವಿತರಣೆ ಸಂಬಂಧ ಮಾಹಿತಿಯ ಪಟ್ಟಿಯನ್ನು ಪ್ರತೀ ನಿತ್ಯ ಪ್ರಕಟಿಸುವುದರ ಜೊತೆಗೆ ಮಾಧ್ಯಮಗಳಲ್ಲಿಯೂ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ದೂರುಗಳು ಕೇಳಿಬರಬಾರದು ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಗೆ 80,946 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್‍ಎಸ್‍ಪಿಗೆ ಬೇಡಿಕೆ ಇದ್ದು, ಈಗಾಗಲೇ 15,885 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದ್ದು, ಒಟ್ಟಾರೆ 35,062 ಮೆ.ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.
ಮುಂಗಾರು ಸಂದರ್ಭದಲ್ಲಿ ಭತ್ತ ಹಾಗೂ ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಭತ್ತವನ್ನು ನೀರಾವರಿ ಮತ್ತು ಮಳೆಯಾಶ್ರಿತ ಸೇರಿ 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. 3500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ. ಹಾಗೆಯೇ 70 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯುವ ಗುರಿ ಹೊಂದಲಾಗಿದೆ. ಒಟ್ಟು 32,570 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಕೃಷಿ ಮಾಡುವ ಗುರಿ ಇದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಭಿತ್ತನೆ ಬೀಜ ಬೇಡಿಕೆ, ಸರಬರಾಜು, ವಿತರಣೆ ಹಾಗೂ ದಾಸ್ತಾನು ಸಂಬಂಧಿಸಿದಂತೆ ಭತ್ತ ಬಿತ್ತನೆ ಬೀಜ 1514 ಕ್ವಿಂಟಾಲ್ ಪೂರೈಕೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ 1871 ಕ್ವಿಂಟಾಲ್ ಭತ್ತ ಬಿತ್ತನೆ ಬೀಜ ವಿತರಣೆ ಗುರಿ ಹೊಂದಲಾಗಿದೆ.
ಮುಸುಕಿನ ಜೋಳ ಸಂಬಂಧಿಸಿದಂತೆ 3.76 ಕ್ವಿಂಟಾಲ್ ಬಿತ್ತನೆ ಬೀಜ ಪೂರೈಕೆಯಾಗಿದ್ದು, ಅಗತ್ಯ ದಾಸ್ತಾನು ಇದೆ. 2024ರ ಮುಂಗಾರು ಹಂಗಾಮಿನಲ್ಲಿ ಒಟ್ಟಾರೆ 1913 ಕ್ವಿಂಟಾಲ್ ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳ ಬೀಜ ವಿತರಣೆಗೆ ಗುರಿ ನಿಗಧಿಪಡಿಸಲಾಗಿದೆ.
ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳು ಜಿಲ್ಲೆಯ ಪ್ರಮುಖ ಕೃಷಿ ಬೆಳೆಗಳಾಗಿದ್ದು, ಭತ್ತದ ಬಿತ್ತನೆ ಮತ್ತು ನಾಟಿ ಕಾರ್ಯಗಳನ್ನು ಜೂನ್ ಅಂತ್ಯದಿಂದ ಪ್ರಾರಂಭಗೊಂಡು, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ಹಾಗೂ ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಜೂನ್ ಮಾಹೆಯಲ್ಲಿ ಕೈಗೊಳ್ಳಲಾಗುತ್ತದೆ.
ಪ್ರಸ್ತುತ ಜಿಲ್ಲೆಯ 16 ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ವಿವಿಧ ತಳಿಗಳ ಬಿತ್ತನೆ ಬೀಜಗಳನ್ನು ಕೆಎಸ್‍ಎಸ್‍ಸಿ ಮತ್ತು ಎನ್‍ಎಸ್‍ಸಿ ಸಂಸ್ಥೆಗಳಿಂದ ಪಡೆದು, ದಾಸ್ತಾನು ಮಾಡಲಾಗಿದ್ದು, ವಿತರಣೆಗೆ ಕ್ರಮವಹಿಸಲಾಗಿರುತ್ತದೆ. ವಿವಿಧ ಇಲಾಕೆ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.