Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನದ ಆಶಯ ಈಡೇರಬೇಕಾದರೆ ಪತ್ರಕರ್ತರು ಅನಿವಾರ್ಯವಾಗಿದ್ದಾರೆ : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂವಿಧಾನದ ಆಶಯ ಈಡೇರಬೇಕಾದರೆ ಪತ್ರಕರ್ತರು ಅನಿವಾರ್ಯವಾಗಿದ್ದಾರೆ : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*

ಜೂನ್ 2, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.2 NEWS DESK : ಸಂವಿಧಾನದ ಆಶಯ ಈಡೇರಬೇಕಾದರೆ ಪತ್ರಕರ್ತರು ಅನಿವಾರ್ಯವಾಗಿದ್ದಾರೆ. ಸಮಾಜದಲ್ಲಿ ನಡೆಯುವ ವಿದ್ಯಮಾನಗಳನ್ನು ಸಂಬಂಧಪಟ್ಟವರಿಗೆ ತಿಳಿಸುವ ಮೂಲಕ ಸಮಸ್ಯೆಗಳಿದ್ದರೆ ಪರಿಹರಿಸುವುದು, ತಪ್ಪುಗಳಿದ್ದರೆ ತಿದ್ದಿಕೊಳ್ಳುವಂತೆ ಮಾಡಿ ಸದೃಢ ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ “ಪಿಂಜರಿ” ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪತ್ರಕರ್ತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪತ್ರಕರ್ತರ ನಡುವೆ ತನಗೆ ಒಡನಾಟ ಇರುವ ಕಾರಣ ನೋವು- ನಲಿವಿನ ಪೂರ್ಣ ಅರಿವಿದೆ. ಪತ್ರಕರ್ತರು ಸಂಘಟಿತರಾಗಿ ಸರಕಾರದ ಮಟ್ಟದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು. ಸಮಸ್ಯೆ ಪರಿಹಾರಕ್ಕೆ ಎಂದಿಗೂ ಜೊತೆಗಿರುವೆ ಎಂದು ಅಭಯ ನೀಡಿದರು.‌
ರಜತ ಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಪತ್ರಕರ್ತರು ಸಂಭ್ರಮಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಿರುವುದು ಗಮನಾರ್ಹವಾಗಿದೆ. ಪ್ರೆಸ್ ಕ್ಲಬ್ 25 ವರ್ಷಗಳ ಕಾಲ ನಡೆದು ಬಂದ ಹಾದಿಯನ್ನು ಯಾರೂ ಮರೆಯಬಾರದು. ಸ್ಮರಣ ಸಂಚಿಕೆಗಳಿಂದ ಮಾಡಿದ ಕೆಲಸ ದಾಖಲೆಯಾಗಿ ಉಳಿದುಕೊಂಡು ಮುಂದಿನ ಪೀಳಿಗೆಗೆ ದಾರಿದೀಪವಾಗಲಿದೆ. ಕ್ಲಬ್ ಈ ಮಟ್ಟಕ್ಕೆ‌ ಬೆಳೆಯಲು ಹಲವರ ಕೊಡುಗೆ ಇದೆ. ಸಂಘಟನೆ ಮತ್ತಷ್ಟು ಬಲವಾಗಿ‌ ಬೆಳೆಯಲಿ ಎಂದು ಪೊನ್ನಣ್ಣ ಆಶಿಸಿದರು.
ಉದ್ಯಮಿ ನಾಪಂಡ ಮುದ್ದಪ್ಪ ಮಾತನಾಡಿ, ಸಾಂಪ್ರದಾಯಿಕ ಮಾಧ್ಯಮಗಳು ಸಂದಿಗ್ಧತೆಯಲ್ಲಿವೆ. ಸಾಮಾಜಿಕ ಜಾಲತಾಣಗಳಲ್ಲಿ‌ ಶೀಘ್ರ ಸುದ್ದಿ ಹರಡುತ್ತಿದ್ದರೂ, ಅದರ ನೈಜಾಂಶ ಪತ್ರಿಕೆಯ ಮೂಲಕವೇ ಜನರಿಗೆ ತಿಳಿಯುವ ಅನಿವಾರ್ಯತೆ ಇದೆ.
ಪ್ರಜಾಪ್ರಭುತ್ವವನ್ಮು ಆರೋಗ್ಯಯುತವಾಗಿ‌ ಮುನ್ನಡೆಸುವ ಜವಾಬ್ದಾರಿ ಪತ್ರಕರ್ತರ ಮೇಲಿದ್ದು, ಧರ್ಮ, ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವ ಕೆಲಸಗಳು ಕೆಲ ಪತ್ರಕರ್ತರಿಂದ ನಡೆಯುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಆಚರಣಾ ಸಮಿತಿ ಮಹಾಪೋಷಕರಾದ ಜಿ. ರಾಜೇಂದ್ರ ಮಾತನಾಡಿ, ಎಲ್ಲಾ ಕ್ಷೇತ್ರದವರನ್ನು ಭಾಗಿಗೊಳಿಸಿಕೊಂಡು, ಕೇವಲ ಪ್ರಚಾರಕ್ಕಲ್ಲದೆ, ಪ್ರಯೋಜನಕ್ಕಾಗಿ ಕ್ಲಬ್ ರಜತ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ
ಪ್ರಯೋಜನಕಾರಿಯಾಗಿ ಆಚರಿಸಿದೆ. ಸ್ಮರಣ ಸಂಚಿಕೆ ಸಂಘಟನೆ ಕಾರ್ಯಚಟುವಟಿಕೆಯ ದಾಖಲೆಯಾಗಿ ಉಳಿಯಲಿದೆ. ಪ್ರೆಸ್ ಕ್ಲಬ್ ಮೂಲಕ ಸಹಕಾರಿ ಸಂಘ ಸ್ಥಾಪನೆ ಮಾಡುತ್ತಿರುವುದು ಪ್ರಶಂಸನೀಯ. ಇದರಲ್ಲಿ ಯಾವುದೇ ಕುಂದು-ಕೊರತೆ ಬಾರದಂತೆ ನಿಗಾವಹಿಸಿ ಆರ್ಥಿಕ ಶಿಸ್ತು ಕಾಯ್ದುಕೊಂಡು ಸದಸ್ಯರಿಗೆ ಸಹಕಾರಿಯಾಗುವಂತೆ ಮುನ್ನಡೆಯಲಿ ಎಂದು‌ ಆಶಿಸಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ನೇತೃತ್ವದಲ್ಲಿ ಬೆಳ್ಳಿಮಹೋತ್ಸವ ಅಂಗವಾಗಿ ಮಾಡಿದ ಕಾರ್ಯಕ್ರಮಗಳು ಇತರೆ ಸಂಘಟನೆಗಳಿಗೆ ಮಾದರಿಯಾಗಿವೆ.‌ ವೃತ್ತಿ ಒತ್ತಡದಲ್ಲಿರುವ ಪತ್ರಕರ್ತರ ಮನೋಲ್ಲಾಸಕ್ಕೆ ಹತ್ತುಹಲವು ಕಾರ್ಯಕ್ರಮ ಮಾಡಿರುವುದು ಶ್ಲಾಘನೀಯ. ಹಲವು ಹಿರಿಯರು ಶ್ರಮಿಸಿದ ಫಲವಾಗಿ ಇಂದು ಸಂಘಟನೆ ಭದ್ರವಾಗಿ ನೆಲೆಯೂರಿದೆ. ಪತ್ರಕರ್ತರು ಧಾವಂತವಾಗಿ‌ ಸುದ್ದಿ ನೀಡುವ ಮುನ್ನ ಅದರ ಸತ್ಯಾಸತ್ಯತೆ ಅರಿತುಕೊಳ್ಳುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, 25 ವರ್ಷ ಪೂರ್ಣಗೊಳಿಸಿದ ಹಿನ್ನೆಲೆ ಹಲವಷ್ಟು ಕಾರ್ಯಕ್ರಮಗಳನ್ನು ಮಾಡಿ ರಜತ ಸಂಭ್ರಮವನ್ನು ಆಚರಿಸಿದ್ದೇವೆ. ಸದಸ್ಯರ ಹಿತಾಸಕ್ತಿ ಕಾಪಾಡುವ, ಸಾರ್ವಜನಿಕರನ್ನು ಒಳಗೊಂಡ ಹಲವು ಕಾರ್ಯಕ್ರಮ ಮಾಡಲಾಗಿದೆ ಕಾರ್ಯಕ್ರಮ ಜೀವಂತವಾಗಿಡಲು ಸ್ಮರಣ ಸಂಚಿಕೆಯನ್ನು‌ ಹೊರತರಲಾಗಿದ್ದು, ಕೊಡಗಿನ ವಿವಿಧ ವಿಚಾರಗಳ ಬಗ್ಗೆಗಿನ ಲೇಖನಗಳನ್ನು ಸಂಚಿಕೆ ಒಳಗೊಂಡಿದೆ ಎಂದರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷ ಉಳ್ಳಿಯಡ ಪೂವಯ್ಯ ಅಧ್ಯಕ್ಷತೆ ವಹಿಸಿ‌ ಮಾತನಾಡಿ, ವರ್ಷವಿಡಿ ವೈವಿಧ್ಯಮಯ, ಸಮಾಜ‌ಮುಖಿ ಹಾಗೂ ಜನಸ್ನೇಹಿ ಕಾರ್ಯಕ್ರಮವನ್ನು ಆಚರಿಸಿ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣಗೊಳಿಸಲಾಗಿದೆ. ಸಂಘಟನೆಯ ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಫಲವಾಗಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕೊಡಗು ಜಿಲ್ಲೆಯ ಪತ್ರಕರ್ತರಲ್ಲಿ ಪ್ರಾಮಾಣಿಕತೆ, ಬದ್ಧತೆ ಇದೆ ಎಂದು ಶ್ಲಾಘಿಸಿದರು. ರೇಖಾ ಗಣೇಶ್ ಪ್ರಾರ್ಥಿಸಿ, ಸಂಘಟನಾ ಕಾರ್ಯದರ್ಶಿ ಎಂ.ಎನ್.ಚಂದ್ರಮೋಹನ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್
ನಿರೂಪಿಸಿ, ನವೀನ್ ಡಿಸೋಜ ವಂದಿಸಿದರು.
ವಾರ್ಷಿಕ ಪ್ರಶಸ್ತಿ‌ ಪ್ರದಾನ : ಹಿರಿಯ ಪತ್ರಕರ್ತ ಮಹಂತೇಶ್ ಜ್ಞಾಪಕರ್ಥ ಕೊಡಮಾಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಯನ್ನು ಶಕ್ತಿ ದಿನಪತ್ರಿಕೆಯ ಸಿದ್ದಾಪುರದ ವರದಿಗಾರ ಎ.ಎನ್. ವಾಸು, ಎಂ.ಎನ್. ಚಂದ್ರಮೋಹನ್‌ ತಮ್ಮ ತಂದೆ ಎಂ.ನಾರಾಯಣ, ತಾಯಿ ಪದ್ಮಾವತಿ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ವರದಿ ಪ್ರಶಸ್ತಿಯನ್ನು ಟಿವಿ9 ವಾಹಿನಿ‌ ಜಿಲ್ಲಾ ವರದಿಗಾರ ಐಮಂಡ ಗೋಪಾಲ್ ಸೋಮಯ್ಯ, ಹಿರಿಯ ಪತ್ರಕರ್ತ ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಬಿ.ವಿ. ಚಂದ್ರಶೇಖರ್, ತಾಯಿ ಪುಷ್ಪಲತಾ ಹೆಸರಿನಲ್ಲಿ ಸ್ಥಾಪಿಸಿರುವ ಮಾನವೀಯ ವರದಿ ಪ್ರಶಸ್ತಿಯನ್ನು ಸ್ಟಾರ್ ಆಫ್ ಮೈಸೂರು ಪತ್ರಿಕೆ ವರದಿಗಾರ ಆಕ್ಷಯ್ ಅವರುಗಳಿಗೆ ಪ್ರದಾನ ಮಾಡಲಾಯಿತು.
ಪತ್ರಕರ್ತರ ಸಂಘದ ರಾಜ್ಯ ಪ್ರಶಸ್ತಿಗೆ ಭಾಜನರಾದ ಜಗದೀಶ್ ಜೋಡುಬೀಟಿ, ಸಣ್ಣುವಂಡ ಕಿಶೋರ್ ನಾಚಪ್ಪ, ಪಿ.ಬಿ. ಅಕ್ಷಯ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಶಸ್ತೆಗೆ ಬಾಜನರಾದ ಇಸ್ಮಾಯಿಲ್ ಕಂಡಕರೆ ಅವರನ್ನು ಸನ್ಮಾನಿಸಲಾಯಿತು.
:: ಮಹಾಸಭೆ ::
ಕಾರ್ಯಕ್ರಮಕ್ಕೂ ಮುನ್ನ ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಿತು. ಖಜಾಂಜಿ ಬೊಳ್ಳಜಿರ ಅಯ್ಯಪ್ಪ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷರುಗಳಾದ ಸುಬ್ರಮಣಿ, ಸಿ.ಪಿ. ತೇಜಸ್, ಸಂಘಟನ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.