
ಸೋಮವಾರಪೇಟೆ ಜೂ.2 NEWS DESK : ಸೋಮವಾರಪೇಟೆ ಸಮೀಪದ ನಗರೂರು ಗ್ರಾಮದಲ್ಲಿ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತನ ಕುಟುಂಬಸ್ಥರು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಗರೂರು ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ನ ಕಂಬದಲ್ಲಿ ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಕೆ.ಪಿ.ಲೋಕೇಶ ಹಾಗೂ ಬಿ.ಯು.ಹರ್ಷಿಣಿ ಅವರ ಪುತ್ರ, ಉಲ್ಲಾಸ್ (21) ಎಂಬ ಯುವಕನ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತ ಉಲ್ಲಾಸ್ ನ ತಂದೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಯ ಶವಾಗಾರಕ್ಕೆ ಸಾಗಿಸಲಾಗಿದೆ. ಮೃತನ ತಂದೆ ನೀಡಿದ ದೂರಿನ ಅನ್ವಯ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.








