Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
  • *ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*
  • *ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*
  • *ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*
  • *15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*
  • *ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ ಮತ್ತು ವಾರ್ಷಿಕೋತ್ಸವ : ನೂತನ ಪದಾಧಿಕಾರಿಗಳ ಆಯ್ಕೆ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ ಮತ್ತು ವಾರ್ಷಿಕೋತ್ಸವ : ನೂತನ ಪದಾಧಿಕಾರಿಗಳ ಆಯ್ಕೆ : ಸಾಧಕರಿಗೆ ಸನ್ಮಾನ*

ಜೂನ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.3 NEWS DESK : ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ 28ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಸಂಭ್ರಮದಿಂದ ನಡೆಯಿತು.
ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘ, ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮನ್ನು ಕಾಸರಗೋಡಿನ ನಿವೃತ್ತ ಹಿರಿಯ ಮಕ್ಕಳ ತಜ್ಞ ಡಾ.ಬಿ.ನಾರಾಯಣ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನ ನೀರನ್ನು ಸೇವಿಸಬೇಕೆಂದು ಸಲಹೆ ನೀಡಿದರು.
ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಯ ಮುಖ್ಯ ವಿಜ್ಞಾನಿ ಎಂ.ಟಿ.ಶೋಭಾವತಿ ಅವರು ಮಾತನಾಡಿ, 85 ಸದಸ್ಯರಿಂದ ಸ್ಥಾಪನೆಯಾದ ಸಂಘದ ಸದಸ್ಯತ್ವವನ್ನು 763ಕ್ಕೆ ಹೆಚ್ಚಿಸಿದ ಆಡಳಿತ ಮಂಡಳಿಯ ಶ್ರಮ ಶ್ಲಾಘನೀಯವೆಂದರು.
ಸಂಘದ ಬೆಳವಣಿಗೆ, ಸಂಘ ಹೊಂದಿರುವ ಆಸ್ತಿ ಮತ್ತು ಕಟ್ಟಡ ನಿರ್ಮಾಣದ ವಿವಿಧ ಹಂತಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಮಾಜದ ಕಟ್ಟಡ ಕಾಮಗಾರಿ ಸಂಪೂರ್ಣಗೊಳ್ಳಲು ಸರ್ವರೂ ಸಹಕರಿಸಬೇಕೆಂದು ಕರೆ ನೀಡಿದರು.
ಸಂಘದ ಹಿರಿಯ ಪದಾಧಿಕಾರಿ ಬಿ.ಎ.ಗಣೇಶ್ ಮಾತನಾಡಿ, ಸಂಘ ಸ್ಥಾಪನೆಯಾದ ರೀತಿಯನ್ನು ಮೆಲುಕು ಹಾಕಿದರು. ಸಂಘ ಸ್ಥಾಪನೆಗೆ ಶ್ರಮಿಸಿದ ಹಿರಿಯರನ್ನ ಸ್ಮರಿಸಬೇಕು. ಸ್ವಜಾತಿ ಸಮಾಜ ಬಾಂಧವರು ಅಂತರ್ಜಾತಿ ವಿವಾಹಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಸಂಘದ ಆಡಳಿತ ಮಂಡಳಿ ಇನ್ನೂ ಹೆಚ್ಚಿನ ಸಮಾಜ ಸೇವಾ ಕಾರ್ಯವನ್ನು ಸಂಘದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ್, ಸಂಘದ ಸ್ಥಿರ ಮತ್ತು ಚರಾಸ್ತಿಗಳನ್ನು ಕಾಪಾಡಿಕೊಳ್ಳಲು ಜನಾಂಗ ಬಾಂಧವರು ಸಹಾಯ ಹಸ್ತ ನೀಡಿ ಅಭಿವೃದ್ಧಿಗೆ ಸಹಕರಿಸಬೇಕು. ಸಂಘದ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಉದ್ಘಾಟನೆ ಕಾರ್ಯಕ್ರಮದಲ್ಲಿ ಜನಾಂಗಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸಂಘದ ಎಲ್ಲಾ ಉಪಸಮಿತಿಯ ಅಧ್ಯಕ್ಷರು ಹಾಗೂ ಸಂಘಟನಾ ಕಾರ್ಯದರ್ಶಿಗಳು ಸಂಘಟನೆಗಾಗಿ ಹೆಚ್ಚಿನ ಶ್ರಮ ವಹಿಸಬೇಕೆಂದ ಅವರು, ಸಂಘದ ಏಳಿಗೆಗಾಗಿ ದುಡಿದ ಹಿರಿಯರನ್ನು ಸ್ಮರಿಸಿ, ಅವರ ಮಾರ್ಗದರ್ಶನದಲ್ಲಿ ಸಂಘವನ್ನು ಮುನ್ನಡೆಸುವುದಾಗಿ ತಿಳಿಸಿದರು.
ಸಂಘದ ಉಪಾಧ್ಯಕ್ಷರಾದ ಜಿ.ಆರ್.ದೇವಕಿ ನಾಯ್ಕ್, ಯುವ ವೇದಿಕೆ ಅಧ್ಯಕ್ಷ ಎಂ.ಆರ್.ಮೋಹನ, ಮಹಿಳಾ ವೇದಿಕೆ ಅಧ್ಯಕ್ಷರಾದ ರತ್ನಮಂಜರಿ ನರಸಿಂಹ, ಕಟ್ಟಡ ಸಮಿತಿ ಅಧ್ಯಕ್ಷ ಎಂ.ಟಿ.ಗುರುವಪ್ಪ, 2ನೇ ಮೊಣ್ಣಂಗೇರಿ ಉಪಸಮಿತಿ ಅಧ್ಯಕ್ಷ ಎಂ.ಎಸ್.ವೆಂಕಪ್ಪ ಉಪಸ್ಥಿತರಿದ್ದರು. ಹರ್ಷಿತಾ ಮಂಜುನಾಥ್ ಪ್ರಾರ್ಥಿಸಿ, ಸಂಘದ ಸಹ ಕಾರ್ಯದರ್ಶಿ ಎ.ಎಂ.ನರಸಿಂಹ ಸ್ವಾಗತಿಸಿ, ಯುವ ವೇದಿಕೆ ಅಧ್ಯಕ್ಷ ಎಂ.ಆರ್.ಮೋಹನ ವಂದಿಸಿದರು.
ಸಂಘದ ಹಂಗಾಮಿ ಕಾರ್ಯದರ್ಶಿ ಹೂವಮ್ಮ 2023-24ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಮಂಡಿಸಿದರು. ಸಭೆಯ ಅನುಮೋದನೆಯ ಬಳಿಕ ಸಂಘದ ಯುವ ವೇದಿಕೆ ಕಾರ್ಯದರ್ಶಿ ಎಂ.ಕೆ.ಸಂತೋಷ್ ಯುವ ವೇದಿಕೆಯ 2023-24ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಮಂಡನೆ ಮಾಡಿದರು.
:: ಸನ್ಮಾನ ::
ಕಾರ್ಯಕ್ರಮದಲ್ಲಿ 7ನೇ ತರಗತಿ, ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಪದವಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ನಂತರ ಸಂಘದ ಹಿರಿಯ ಪದಾಧಿಕಾರಿಗಳಾದ ಬಿ.ಎ.ಗಣೇಶ್, ಬಾಲಕೃಷ್ಣ, ಪಿ.ಎಸ್.ತಿಮ್ಮಪ್ಪ ನಾಯ್ಕ್ ಹಾಗೂ ವಿಶೇಷ ಪ್ರತಿಭೆ ನಾಗರಾಜು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
::: ನೂತನ ಪದಾಧಿಕಾರಿಗಳ ಆಯ್ಕೆ :::
2024-25ರ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಎಂ.ಎಂ.ಪರಮೇಶ್ವರ್, ಉಪಾಧ್ಯಕ್ಷರಾಗಿ ಜಿ.ಆರ್.ದೇವಕಿ ನಾಯ್ಕ್, ಕಾರ್ಯದರ್ಶಿಯಾಗಿ ಹೂವಮ್ಮ, ಖಜಾಂಚಿಯಾಗಿ ಎಂ.ಎಸ್.ಕಾಂತಿ ಹಾಗೂ ಸಹಕಾರ್ಯದರ್ಶಿಯಾಗಿ ಎಂ.ಪಿ.ನವೀನ್ ಆಯ್ಕೆಯಾದರು. ನಾಲ್ವರು ಸಂಘಟನಾ ಕಾರ್ಯದರ್ಶಿಗಳು ಹಾಗೂ 12 ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಸಮಾಜ ಬಾಂಧವರಿಂದ ರೂ.25 ಸಾವಿರ ಕಟ್ಟಡ ನಿಧಿಯನ್ನು ಸ್ವೀಕರಿಸಲಾಯಿತು. ಮೂವರು ಅಜೀವ ಸದಸ್ಯರನ್ನು ನೋಂದಾಯಿಸಿಕೊಳ್ಳಲಾಯಿತು.
ಸಂತಾಪ :: ಮೃತಪಟ್ಟ ಸಮಾಜ ಬಾಂಧವರಾದ ಲೋಕೇಶ್, ಜ್ಯೋತಿ ಸೋಮಯ್ಯ, ಗೌರಮ್ಮ, ಹೊಸೂರು ಬಾಬು, ವೇದ ಕುಮಾರ, ಎಂ.ಸಿ.ಸೋಮಶೇಖರ, ಗಂಗಮ್ಮ, ದೇವಪ್ಪ, ಕೃಷ್ಣಪ್ಪ ಹೆಗ್ಗಳ, ದೇವಪ್ಪ ವಾಲ್ನೂರು, ಮೋಟಯ್ಯ, ಕಿಟ್ಟನಾಯಕ್, ರತ್ನ, ಸುಬ್ರಾಯ, ಸುನಿಲ್ ಅವರಿಗೆ ಮೌನಚಾರಣೆಯ ಮೂಲಕ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.
ಕ್ರೀಡಾಕೂಟ :: ಯುವ ವೇದಿಕೆ ಅಧ್ಯಕ್ಷ ಎಂ.ಆರ್.ಮೋಹನ ಹಾಗೂ ಕಾರ್ಯದರ್ಶಿ ಎಂ.ಕೆ.ಸಂತೋಷ್ ಮುಂದಾಳತ್ವದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು, ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ಸಂಜೆ ಸಮಾಜ ಬಾಂಧವರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಣೀಯವಾಗಿ ಮೂಡಿ ಬಂತು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪ, ಚೆನ್ನಂಗೊಲ್ಲಿ, ಕಾನೂರು, ಹುಲಿತಾಳ ಮತ್ತು 2ನೇ ಮೊಣ್ಣಂಗೇರಿ ಗ್ರಾಮದ ಮಕ್ಕಳು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ…

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*

ಏಪ್ರಿಲ್ 29, 2026

*ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*

ಏಪ್ರಿಲ್ 29, 2026

*15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 29, 2026

*ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*

ಏಪ್ರಿಲ್ 29, 2026

*ಮೇ 5ರಂದು ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.