ಮಡಿಕೇರಿ ಜೂ.4 : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ಗೆಲುವಿಗಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಕಷ್ಟು ಪರಿಶ್ರಮ ಪಟ್ಟರೂ ಗೆಲುವು ಸಾಧ್ಯವಾಗಿಲ್ಲ. ಜನರ ತೀರ್ಪಿಗೆ ತಲೆ ಬಾಗುತ್ತೇವೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಎಷ್ಟು ಶ್ರಮ ವಹಿಸಿದ್ದೆವೋ ಅಷ್ಟೇ ಶ್ರಮ ಈ ಬಾರಿಯೂ ಪಟ್ಟಿದ್ದೇವೆ. ಆದರೆ ಕಾಂಗ್ರೆಸ್‌ಗೆ ಗೆಲುವು ಸಾಧ್ಯವಾಗದಿರುವುದು ನಿರಾಶೆ ಮೂಡಿಸಿದೆ. ಬಿಜೆಪಿಯ ಸಾಂಪ್ರದಾಯಿಕ ಮತಗಳು ಪರಿವರ್ತನೆಯಾಗಿಲ್ಲ. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದರು.







