Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಶಸ್ತಿಗಾಗಿ ವರದಿಗಳ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಶಸ್ತಿಗಾಗಿ ವರದಿಗಳ ಆಹ್ವಾನ*

ಜೂನ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.5 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ಜೂ.20 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ.ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ.

ವರದಿಗಳು 2023 ರ ಜನವರಿಯಿಂದ 2023 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಹಾಕುವವರು ಮೂರು ಪ್ರತಿಗಳನ್ನು ಹಾಕಬೇಕು. ದೃಶ್ಯಮಾಧ್ಯಮದವರು ತಮ್ಮ ಚಾನಲ್​ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು.

ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ,  ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ, ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿ, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿ, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿದ ಅರಣ್ಯ ವನ್ಯಜೀವಿ ಪ್ರಶಸ್ತಿ ವರದಿ, ಬೆಳೆಗಾರ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ-ತಾಯಿ ಅಜ್ಜಮಾಡ ಸುಬ್ಬಯ್ಯ ಹಾಗೂ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ವರದಿ ಪ್ರಶಸ್ತಿ, ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜ ಕೋಟೇರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ, ಕೈಬುಲಿರ ಪಾರ್ವತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿ, ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿ, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರಿರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿ, ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಪೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿ ಛಾಯಾಚಿತ್ರ ವರದಿ.

ಸ್ವಸ್ಥ ಸಂಸ್ಥೆ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿ,  ಜಿಲ್ಲಾ ಪಂ.ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಮ್ಮ ತಾಯಿ ಬಲ್ಲಾರಂಡ ಮಾಚಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ರಾಜಕೀಯ ವರದಿ ಪ್ರಶಸ್ತಿ, ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿ,  ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ಮಂಡಿಬೆಲೆ ದ್ಯಾವಮ್ಮ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿ(ಟಿವಿ ಚಾನಲ್ ವರದಿಗೆ), ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮದ ವರದಿ ಪ್ರಶಸ್ತಿ.(ಟಿವಿ ಚಾನಲ್ ವರದಿಗೆ), ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿ. ಟಿ.ಕೆ.ಸುಬ್ರಹ್ಮಣ್ಯಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, ದಿವಂಗತ ಸಣ್ಣುವಂಡ ಎಂ ಶ್ರೀನಿವಾಸ್ ಚಂಗಪ್ಪ ಅವರ ಹೆಸರಿನಲ್ಲಿ ಕೊಡಗಿನ ಪತ್ರಕರ್ತರು ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿ, ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಹೆಸರಾಂತ ಸಾಹಿತಿ ದಿವಂಗತ ಡಿ.ಎನ್.ಕೃಷ್ಣಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕೃತಿಕ ವರದಿ ಪ್ರಶಸ್ತಿ.

ಸೂಚನೆ-ಒಬ್ಬರು ಯಾವುದಾದರೂ ಎರಡು ಪ್ರಶಸ್ತಿಗೆ ಮಾತ್ರ ವರದಿ ಸಲ್ಲಿಸಬಹುದು. ಒಂದು ಪ್ರಶಸ್ತಿಗೆ ಕೇವಲ ಒಂದು ವರದಿಯನ್ನು ಮಾತ್ರ ಕಳುಹಿಸತಕ್ಕದ್ದು. ಒಂದಕ್ಕಿಂತ ಹೆಚ್ಚು ವರದಿಗಳನ್ನು ಸಲ್ಲಿಸಿದರೆ ಅಂತಹ ಸದಸ್ಯರ ವರದಿಗಳನ್ನು ಪರಿಗಣನೆ ಮಾಡಲಾಗುವುದಿಲ್ಲ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.