Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದಿಂದ 92ನೇ ಪುಸ್ತಕ “ಕೊಯ್ತ ಮುತ್ತ್” ಬಿಡುಗಡೆ : ದಾನಿಗಳ ಸಹಕಾರವಿಲ್ಲದೆ ಸಾಹಿತ್ಯದ ಬೆಳವಣಿಗೆ ಅಸಾಧ್ಯ : ಬೊಳ್ಳಜಿರ ಬಿ.ಅಯ್ಯಪ್ಪ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದಿಂದ 92ನೇ ಪುಸ್ತಕ “ಕೊಯ್ತ ಮುತ್ತ್” ಬಿಡುಗಡೆ : ದಾನಿಗಳ ಸಹಕಾರವಿಲ್ಲದೆ ಸಾಹಿತ್ಯದ ಬೆಳವಣಿಗೆ ಅಸಾಧ್ಯ : ಬೊಳ್ಳಜಿರ ಬಿ.ಅಯ್ಯಪ್ಪ ಅಭಿಮತ*

ಜೂನ್ 6, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಸಾಹಿತ್ಯದ ಬೆಳವಣಿಗೆಗೆ ದಾನಿಗಳ ಸಹಕಾರದ ಅಗತ್ಯವಿದೆ. ಬರಹಗಾರರನ್ನು ಪ್ರೋತ್ಸಾಹಿಸಲು ದಾನಿಗಳು ಸ್ವಯಂ ಪ್ರೇರಿತರಾಗಿ ಮುಂದೆ ಬರಬೇಕು ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಕರೆ ನೀಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಲೇಖಕಿ ಅಮ್ಮಾಟಂಡ ವಿಂದ್ಯಾ ದೇವಯ್ಯ ಅವರು ಬರೆದಿರುವ ಕೊಡವ ಮಕ್ಕಡ ಕೂಟದ 92ನೇ ಪುಸ್ತಕ “ಕೊಯ್ತ ಮುತ್ತ್” ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಉತ್ಸಾಹಿ ಬರಹಗಾರರಿದ್ದಾರೆ, ಇವರುಗಳ ಪುಸ್ತಕಗಳನ್ನು ಹೊರ ತರುವ ಮೂಲಕ ಪ್ರೋತ್ಸಾಹ ನೀಡುವ ಅಗತ್ಯವಿದೆ. ಈ ಕೆಲಸವನ್ನು ಕೊಡವ ಮಕ್ಕಡ ಕೂಟ ಮಾಡಿಕೊಂಡು ಬರುತ್ತಿದ್ದು, ಕೊಡವ ಸೇರಿದಂತೆ ವಿವಿಧ ಭಾಷೆಗಳ 92 ಪುಸ್ತಕಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ತೃಪ್ತಿ ಇದೆ. ಕೂಟದ ನೂರನೇ ಪುಸ್ತಕವನ್ನು ಆ.17 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಹಲವು ದಾಖಲೀಕರಣ ಪುಸ್ತಕ, ಸಾಧಕರ ವಿವರದ ಪುಸ್ತಕ, ಕೊಡಗಿನ ಹಾಗೂ ಕೊಡವ ಆಚಾರ, ವಿಚಾರ ಸಂಬಂಧಪಟ್ಟಂತ ಪುಸ್ತಕ, ಕೊಡಗಿನ ಎರಡು ಮಹಾವೀರ ಚಕ್ರ ಪುರಸ್ಕೃತ ವೀರ ಯೋಧರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಅಲ್ಲದೇ ಕೊಡವ ಮಕ್ಕಡ ಕೂಟ ಪ್ರಕಟಿಸಿರುವ ಪುಸ್ತಕಗಳಲ್ಲಿ ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಚಿಗುರೆಲೆಗಳು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ, ಅಗ್ನಿಯಾತ್ರೆ ಪುಸ್ತಕಕ್ಕೆ “ಗೌರಮ್ಮ ದತ್ತಿ ನಿಧಿ “ಪ್ರಶಸ್ತಿ ಲಭಿಸಿದೆ. ನಾಲ್ಕು ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಮತ್ತಷ್ಟು ಪುಸ್ತಕಗಳನ್ನು ಹೊರ ತರುವ ಮತ್ತು ಬರಹಗಾರರನ್ನು ಪ್ರೋತ್ಸಾಹಿಸುವ ಗುರಿ ಕೊಡವ ಮಕ್ಕಡ ಕೂಟದ ಮುಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ದಾನಿಗಳು ಮುಂದೆ ಬಾರದೆ ಇರುವುದು ಬೇಸರ ತಂದಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಹೇಳಿದರು.
“ಕೊಯ್ತ ಮುತ್ತ್” ಕೊಡವ ಪುಸ್ತಕದ ಲೇಖಕಿ ಅಮ್ಮಾಟಂಡ ವಿಂದ್ಯಾ ದೇವಯ್ಯ ಮಾತನಾಡಿ, ಹೆಣ್ಣುಮಕ್ಕಳಿಗೆ ಸಮಾನ ಅವಕಾಶಗಳನ್ನು ಕಲ್ಪಸಿದಾಗ ಮಾತ್ರ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿವಾಹಿತ ಮಹಿಳೆಯರು ಸಾಧನೆ ತೋರಲು ಪತಿ ಹಾಗೂ ಕುಟುಂಬಸ್ಥರು ಸಹಕಾರ ನೀಡುವ ಅಗತ್ಯವಿದೆ ಎಂದರು.
“ಕೊಯ್ತ ಮುತ್ತ್” ಪುಸ್ತಕದಲ್ಲಿ, ಸಮಾಜದಲ್ಲಿ ನಡೆಯುವ ದೈನಂದಿನ ವಿಚಾರಗಳ ಕುರಿತು ತಮ್ಮ ಚಿಂತನೆಗಳನ್ನು ಕವನಗಳ ರೂಪದಲ್ಲಿ ರಚಿಸಿ ಪುಸ್ತಕವಾಗಿ ಹೊರತರಲಾಗಿದೆ. ಇದನ್ನು ಓದಿದವರು ತಮ್ಮ ಜೀವನದಲ್ಲಿ ಸ್ವಲ್ಪವಾದರೂ ಬದಲಾವಣೆ ಕಾಣುವರು ಎಂಬ ನಿರೀಕ್ಷೆ ನನ್ನದು ಎಂದರು.
ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 92 ಕೃತಿಗಳು ಬಿಡುಗಡೆಯಾಗಿರುವುದು ಶ್ಲಾಘನೀಯವೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಮಾಜ ಸೇವಕಿ ಅಮ್ಮಂಡ ಕಿಟ್ಟಿ ಬೆಳ್ಯಪ್ಪ, ಹೊಸ ಬರಹಗಾರರನ್ನು ಗುರುತಿಸಿ, ಪ್ರೋತ್ಸಾಹಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡಗೆ ನೀಡುತ್ತಿರುವ ಕೊಡವ ಮಕ್ಕಡ ಕೂಟ ಇದೀಗ 100ನೇ ಪುಸ್ತಕ ಬಿಡುಗಡೆಗೆ ತಯಾರಿ ನಡೆಸಿರುವುದು ಹೆಮ್ಮೆಯ ವಿಚಾರವೆಂದರು.
ಸಮಾಜ ಸೇವಕಿ ಬೈರೆಟ್ಟಿರ ಗಿರಿಜಾ ಅಯ್ಯಪ್ಪ ಪುಸ್ತಕ ಬಿಡುಗಡೆಗೊಳಿಸಿ, ಶುಭಹಾರೈಸಿದರು. ಸಮಾಜ ಸೇವಕರಾದ ಕೇಕಡ ಯಶೋಧ ಕಾವೇರಿಯಪ್ಪ ಹಾಗೂ ನೆರವಂಡ ಅನಿತಾ ಚರ್ಮಣ್ಣ ಉಪಸ್ಥಿತರಿದ್ದರು.
:: ಅಮ್ಮಾಟಂಡ ವಿಂದ್ಯಾ ದೇವಯ್ಯ ಪರಿಚಯ ::
ಅಮ್ಮಾಟಂಡ ವಿಂದ್ಯಾ ದೇವಯ್ಯ ಹುದಿಕೇರಿ ಗ್ರಾಮದವರಾದ ಕಿರಿಯಮಾಡ ದತ್ತ ಹಾಗೂ ರಾಣಿ (ತಾಮನೆ-ನೂರೆರ) ದಂಪತಿಯ ಪುತ್ರಿ. ಅಮ್ಮಾಟಂಡ ಮುತ್ತಪ್ಪ ಹಾಗೂ ಪಾರ್ವತಿ (ತಾಮನೆ -ಚೇರಂಡ) ದಂಪತಿಯ ಹಿರಿಯ ಪುತ್ರ ದೇವಯ್ಯ ಅವರನ್ನು ವಿವಾಹವಾಗಿದ್ದಾರೆ.
ಇವರಿಗೆ ಪ್ರಾಪ್ತಿ ಪೊನ್ನಮ್ಮ ಮತ್ತು ಮ್ಯಾಕ್ ಮಂದಣ್ಣ ಇಬ್ಬರು ಮಕ್ಕಳಿದ್ದಾರೆ. ಮೈಸೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಎಂ.ಬಿ.ಎ ಪದವಿ ಪಡೆದಿರುವ ವಿಂದ್ಯಾ ದೇವಯ್ಯ, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಪ್ರಸ್ತುತ ಮಡಿಕೇರಿಯ ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ಕಾಲೇಜಿನಲ್ಲಿ ಉಪಾನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಈಗಾಗಲೇ ನಾಲ್ಕು ಕೊಡವ ಚಲನಚಿತ್ರದಲ್ಲಿ ನಟನೆ ಮಾಡಿದ್ದು, ಮಡಿಕೇರಿ ಆಕಾಶವಾಣಿಯಲ್ಲಿ ಕಾರ್ಯಕ್ರಮವನ್ನು ನೀಡುತ್ತಿದ್ದಾರೆ. ಇವರು ಮೂರು ಬೇರೆ ಬೇರೆ ಕೊಡವ ಕೂಟದಲ್ಲಿ ಕೆಲಸ ಮಾಡುತ್ತಿದ್ದು, ಸಂಸ್ಕೃತಿ ಸಿರಿ ಬಳಗದ ಟ್ರಸ್ಟಿ ಆಗಿಯೂ, ಸಿರಿಗನ್ನಡ ವೇದಿಕೆ ಮಡಿಕೇರಿ ವಿಭಾಗದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡವ ಭಾಷೆ, ಸಾಹಿತ್ಯದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಇವರು, ಕೊಡವಭಾಷಾ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.