Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.15 ಮತ್ತು 16 ರಂದು ‘ದಕ್ಷಿಣ ಭಾರತ ಉತ್ಸವ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.15 ಮತ್ತು 16 ರಂದು ‘ದಕ್ಷಿಣ ಭಾರತ ಉತ್ಸವ’*

ಜೂನ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.8 NEWS DESK : ದಕ್ಷಿಣ ಭಾರತದ ಆರು ರಾಜ್ಯಗಳನ್ನು ಒಳಗೊಂಡಂತೆ, ‘ಪ್ರವಾಸೋದ್ಯಮ’ವನ್ನು ಕೇಂದ್ರವಾಗಿರಿಸಿಕೊಂಡ ವಿವಿಧ ಉದ್ಯಮಗಳಲ್ಲಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಪ್ರಮುಖ ಚಿಂತನೆಯಡಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂ.15 ಮತ್ತು 16 ರಂದು ‘ದಕ್ಷಿಣ ಭಾರತ ಉತ್ಸವ’ ನಡೆಯಲಿದೆಯೆಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್(ಎಫ್‍ಕೆಸಿಸಿಐ), ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ ಪುದುಚೇರಿ, ತಮಿಳುನಾಡು ಮತ್ತು ಲಕ್ಷ ದ್ವೀಪಗಳಿಗೆ ಸಂಬಂಧಿಸಿದಂತೆ ದಕ್ಷಿಣ ಭಾರತ ಉತ್ಸವವನ್ನು ಆಯೋಜಿಸಲಾಗಿದೆ. ಈ ಉತ್ಸವದ ಮೂಲಕ ಕರ್ನಾಟಕಕ್ಕೆ ಸೀಮಿತವಾಗಿ 1 ಸಾವಿರ ಕೋಟಿ ಬಂಡವಾಳ ಹೂಡಿಕೆಯನ್ನು ನಿರೀಕ್ಷಿಸಲಾಗಿದೆಯೆಂದು ಮಾಹಿತಿಯನ್ನಿತ್ತರು.
ದಕ್ಷಿಣ ಭಾರತ ಉತ್ಸವಕ್ಕೆ ಆರಂಭಿಕ ದಿನದಂದು ಬೆಳಗ್ಗೆ 10.30 ಗಂಟೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಪ್ರವಾಸೋದ್ಯಮ ಇಲಾಖಾ ಸಚಿವರಾದ ಹೆಚ್.ಕೆ.ಪಾಟೀಲ್ ಮತ್ತು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಉತ್ಸವ ಪ್ರವಾಸೋದ್ಯಮ ಕೇಂದ್ರಿತವಾಗಿದ್ದರು, ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿವಿಧ ಉದ್ದಿಮೆಗಳ ಆರಂಭಕ್ಕೆ ಉತ್ಸಾಹ ತೋರುವ ಹೂಡಿಕೆದಾರರಿಗೂ ಅವಕಾಶವನ್ನು ಕಲ್ಪಿಸಲಾಗಿದೆಯೆಂದು ತಿಳಿಸಿದರು.
ಏಕ ಗವಾಕ್ಷಿ ಸೌಲಭ್ಯ : ದಕ್ಷಿಣ ಭಾರತ ಉತ್ಸವದಲ್ಲಿ ಪಾಲ್ಗೊಳ್ಳುವ ಹೂಡಿಕೆದಾರರಿಗೆ, ಅವರ ಉದ್ಯಮಗಳ ಆರಂಭಕ್ಕೆ ಅಗತ್ಯವಾದ ಸರ್ಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ಒದಗಿಸುವುದು, ಅಗತ್ಯ ಸೌಲಭ್ಯಗಳ ಪೂರೈಕೆ ಮೊದಲಾದವುಗಳಿಗೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆಂದು ನಾಗೇಂದ್ರ ಪ್ರಸಾದ್ ತಿಳಿಸಿದರು.
ದಕ್ಷಿಣ ಭಾರತ ಉತ್ಸವದ ಮೂಲಕ ಪ್ರವಾಸೋದ್ಯಮದ ವಿವಿಧ ವಿಭಾಗಗಳಲ್ಲಿ ಆಸಕ್ತಿ ಹೊಂದಿರುವ, 2 ರಿಂದ 5 ಕೊಟಿ ರೂ.ಗಳನ್ನು ಹೂಡಿಕೆ ಮಾಡಲು ಆಸಕ್ತರಾಗಿರುವ ಹೂಡಿಕೆದಾರರನ್ನು ಗುರುತಿಸಿ, ಅವರಿಗೆ ಅಗತ್ಯ ನೆರವನ್ನು ಒದಗಿಸುವುದು ಉತ್ಸವದ ಉದ್ದೇಶವಾಗಿದೆ. ಉತ್ಸವದಲ್ಲಿ ವಿವಿಧ ವಿಷಯಗಳ ವಿಚಾರ ಸಂಕಿರಣ, ಮಳಿಗೆಗಳು ಇರಲಿದೆಯೆಂದು ಮಾಹಿತಿಯನನ್ನಿತ್ತರು.
ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಉತ್ತೇಜನ :: ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಲ್ಲಿ ಧೈರ್ಯ ತುಂಬುವ, ಅವರ ಉದ್ಯಮಕ್ಕೆ ಅಗತ್ಯ ನೆರವನ್ನು ಒದಗಿಸುವ ಉದ್ದೇಶ ದಕ್ಷಿಣ ಭಾರತ ಉತ್ಸವದ್ದಾಗಿದೆ. ಇದರಲ್ಲಿ ಪಾಲ್ಗೊಳ್ಳುವ ಹೂಡಿಕೆದಾದರು ತಮಗಿಷ್ಟ ಬಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೂಡಿಕೆ ಮಾಡಲು ಅವಕಾಶವಿದೆ. ಉತ್ಸವದಲ್ಲಿ ಪಾಲ್ಗೊಳ್ಳುವವರಿಗೆ ತಲಾ 2500 ರೂ. ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಹೀಗಿದ್ದೂ ಕೊಡಗಿನ ಹೂಡಿಕೆದಾರರಿಗೆ ಉತ್ಸವದಲ್ಲಿ ಪ್ರವೇಶ ಶುಲ್ಕವಿಲ್ಲದೆ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆಯೆಂದು ತಿಳಿಸಿದರು.
ರಸ್ತೆ ತೆರಿಗೆಯ ಮಾರ್ಪಾಡು :: ದಕ್ಷಿಣ ಭಾರತ ಉತ್ಸವದಲ್ಲಿ ಪ್ರಮುಖವಾಗಿ, ದಕ್ಷಿಣ ಭಾರತದ ರಾಜ್ಯಗಳಿಗೆ ಭೇಟಿ ನಿಡುವ ಪ್ರವಾಸಿಗರ ಅನುಕೂಲಕ್ಕೆ ಪೂರಕವಾಗಿ ಒಮ್ಮೆ ಒಂದು ವಾಹನಕ್ಕೆ ರಸ್ತೆ ತೆರಿಗೆ ವಿಧಿಸಿದಲ್ಲಿ, ಆ ವಾಹನಕ್ಕೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಸಂಚರಿಸಲು ಅವಕಾಶ ನೀಡಬೇಕೆನ್ನುವ ವಿಚಾರ ಚರ್ಚೆಗೆ ಒಳಪಡಲಿದೆ. ಇದರೊಂದಿಗೆ ಮೈಸೂರು ದಸರಾ ಸಂದರ್ಭ ಮೈಸೂರು ವಿಭಾಗದಲ್ಲಿ ರಸ್ತೆ ತೆರಿಗೆಗೆ ವಿನಾಯಿತಿ ನೀಡುವ ರೀತಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿನ ವಿಶೇಷ ಸಂದರ್ಭಗಳಲ್ಲಿ ಇಂತಹ ಅವಕಾಶ ಕಲ್ಪಿಸುವ ಬಗೆಗಿನ ಸಾಧ್ಯಾಸಾಧ್ಯತೆಗಳ ಬಗ್ಗೆ ದಕ್ಷಿಣ ಭಾರತ ಉತ್ಸವದಲ್ಲಿ ಚರ್ಚೆಗಳು ನಡೆಯಲಿದೆಯೆಂದು ವಿವರಿಸಿದರು.
ಕಾಫಿ ಉತ್ಪನ್ನಗಳ ಉತ್ತೇಜನಕ್ಕೆ ಒತ್ತು :: ಎಫ್‍ಕೆಸಿಸಿಐ ನಿರ್ದೇಶಕ ಗರೀಶ್ ಗಣಪತಿ ಮಾತನಾಡಿ, ದಕ್ಷಿಣ ಭಾರತ ಉತ್ಸವದಲ್ಲಿ ಕೊಡಗಿನ ಕಾಫಿಯ ವಿವಿಧ ಉತ್ಪನ್ನಗಳ ಉತ್ಮಿಗಳಿಗೆ, ಅವರ ಉತ್ಪನ್ನಗಳ ಉತ್ತೇಜನಕ್ಕೆ ಅವಕಾಶವನ್ನು ಒದಗಿಸಲಾಗುತ್ತದೆಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷರಾದ ನವೀನ್ ಅಂಬೆಕಲ್, ಚೇಂಬರ್‍ನ ಪೂರ್ವಾಧ್ಯಕ್ಷರಾದ ಬಿ.ಎಂ. ಪ್ರಕಾಶ್, ಕಾರ್ಯಾಧ್ಯಕ್ಷರಾದ ಮೊಂತಿ ಗಣೇಶ್, ಜಾಹೀರ್ ಅಹಮ್ಮದ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.26 : ಜಿಲ್ಲಾ ಕೇಂದ್ರ ಮಡಿಕೇರಿಯ ಸಮೀಪದ ಇಬ್ನಿವಳವಾಡಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಪತ್ತೆಗಾಗಿ…

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.