Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
  • *ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*
  • *ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*
  • *ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*
  • *15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*
  • *ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ*

ಜೂನ್ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.10 NEWS DESK : ಕೊಡಗು ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ಆಧಾರದಲ್ಲಿ ನೀಡುವ ಆದೇಶ ಹಿಂಪಡೆಯಬೇಕು, ಅಪಾಯಕಾರಿ ಜಾಗದಲ್ಲಿರುವ ಬಡ ಕುಟುಂಬಗಳಿಗೆ ನಿವೇಶನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಎಂ) ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನೆಲ್ಲಿಹುದಿಕೇರಿ ಗ್ರಾ.ಪಂ ಎದುರು ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬಡವರ, ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಸಿಪಿಐಎಂ ಕಾರ್ಯದರ್ಶಿ ಪಿ.ಆರ್.ಭರತ್, ಉಳ್ಳವರ ಪರವಾದ ನಿಯಮಗಳನ್ನು ತಕ್ಷಣ ರೂಪಿಸುವ ಸರಕಾರಗಳು ಬಡವರು ಹಾಗೂ ಕೂಲಿ ಕಾರ್ಮಿಕರನ್ನು ನಿರ್ಲಕ್ಷಿಸುತ್ತಲೇ ಬರುತ್ತಿವೆ. ಬಡವರಿಗೆ ವಾಸವಿರಲು ನಿವೇಶನ ಅಥವಾ ವಸತಿಯನ್ನು ನೀಡಿ ಎಂದು ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಸಿಪಿಐಎಂ ಪಕ್ಷ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ಟೀಕಿಸಿದರು.
ನೆಲ್ಲಿಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಕಡು ಬಡತನದಲ್ಲಿರುವ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಸೇರಿದಂತೆ ಇತರ ಕೆಲಸಗಳನ್ನು ಮಾಡುವ ಬಡ ಕುಟುಂಬಗಳು ಹುಟ್ಟಿನಿಂದಲೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. ತೋಟದ ಲೈನ್ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ನದಿದಡ, ಬೆಟ್ಟಗುಡ್ಡಗಳ ಮೇಲೆ ಅಪಾಯಕಾರಿ ಸ್ಥಳಗಳಲ್ಲಿ ಬದುಕು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಜೀತ ವ್ಯವಸ್ಥೆ ಜೀವಂತವಾಗಿದೆ, ಸರಕಾರ ನಿಗದಿ ಮಾಡಿರುವ ಕನಿಷ್ಟ ವೇತನ ಮತ್ತು ಮೂಲಭೂತ ಸೌಲಭ್ಯಗಳನ್ನು ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ 2019ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಲು ನಿಗದಿಪಡಿಸಿರುವ ವಾಲ್ನೂರು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ 8.5 ಏಕರೆ ಜಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳು ತಲಾ ರೂ.10 ಲಕ್ಷ ನೀಡಬೇಕು, ನಿರಾಶ್ರಿತರ ಪಟ್ಟಿಯನ್ನು ಬದಲಾಯಿಸಿ ಹೊಸಪಟ್ಟಿಯನ್ನು ತಯಾರಿಸಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, 94 ಸಿ ಮೂಲಕ ಹಕ್ಕು ಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ವನ್ಯಜೀವಿಗಳ ದಾಳಿಯಿಂದ ಮನುಷ್ಯರನ್ನು ಮತ್ತು ಕೃಷಿಯನ್ನು ರಕ್ಷಿಸಬೇಕು, ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳನ್ನು ಡಾಂಬರು ಅಥವಾ ಕಾಂಕ್ರಿಟೀಕರಣಗೊಳಿಸಬೇಕು, ರಸ್ತೆಗಳಿಗೆ ತಕ್ಷಣ ಚರಂಡಿ ನಿರ್ಮಾಣ ಮಾಡಬೇಕು, ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು, ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಬಿಡಿಸಿ ನಿವೇಶನ ರಹಿತ ಬಡವರಿಗೆ ಹಾಗೂ ಆದಿವಾಸಿ ಕುಟುಂಬಗಳಿಗೆ ನೀಡಬೇಕು ಮತ್ತು ಮನೆ ನಿರ್ಮಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್, ಸದಸ್ಯರಾದ ಎ.ಕೆ.ಚಂದ್ರನ್, ಕೆ.ಶಿವರಾಮನ್, ವೈ.ರವಿ, ಬೋಜಿ, ಡಿ.ಟಿ.ಉದಯನ್, ಲಲಿತಮ್ಮ, ಯೂಸೂಫ್, ಅಬಿಬ್, ಕಾವೇರಿ, ಸೌಕತ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು.
ನಂತರ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿವೇಶನದ ಬೇಡಿಕೆ, ವಿವಿಧ ಸಮಸ್ಯೆಗಳು ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಕ ಸಂತೋಷ್, ಅರಣ್ಯ ವಲಯಾಧಿಕಾರಿ ರತನ್, ಅರಣ್ಯಾಧಿಕಾರಿ ಸುಬ್ಬರಾಯ, ಪಿಡಿಓ ನಂಜುಂಡ ಸ್ವಾಮಿ, ಗ್ರಾ.ಪಂ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷೆ ಪ್ರಮೀಳಾ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ…

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*

ಏಪ್ರಿಲ್ 29, 2026

*ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*

ಏಪ್ರಿಲ್ 29, 2026

*15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 29, 2026

*ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*

ಏಪ್ರಿಲ್ 29, 2026

*ಮೇ 5ರಂದು ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.