
ಮಡಿಕೇರಿ ಜೂ.11 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜೂ.12 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ್ ಕೆ.ನರ್ವಡೆ ಇತರರು ಪಾಲ್ಗೊಳ್ಳಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎ.ಎಂ.ಸೂರಜ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಎಸ್.ಎಲ್.ಹರ್ಷವರ್ಧನ್ ಹಾಗೂ ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಬಗ್ಗೆ ಮಾತನಾಡಲಿದ್ದಾರೆ.







