Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
  • *ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಿ : ಬಡವರಿಗೆ ನಿವೇಶನ ಒದಗಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಿ : ಬಡವರಿಗೆ ನಿವೇಶನ ಒದಗಿಸಿ*

ಜೂನ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.11 NEWS DESK : ಕಳೆದ ಅನೇಕ ವರ್ಷಗಳಿಂದ ಲೈನ್ ಮನೆಗಳು ಮತ್ತು ಬಾಡಿಗೆ ಮನೆಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿರುವ ಬಡ ಕೂಲಿ ಕಾರ್ಮಿಕ ವರ್ಗಕ್ಕೆ ಸರಕಾರ ಶೀಘ್ರ ನಿವೇಶನ ಅಥವಾ ವಸತಿ ಸೌಲಭ್ಯ ಕಲ್ಪಿಸಬೇಕು. ವನ್ಯಜೀವಿ ದಾಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಎಐಟಿಯುಸಿ ಸಂಘಟನೆ ಒತ್ತಾಯಿಸಿದೆ.
ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಕೃಷಿ ಕಾರ್ಮಿಕರು ಸ್ವಂತ ನಿವೇಶನ ಮತ್ತು ಮನೆ ಇಲ್ಲದೆ ಲೈನ್ ಮನೆಗಳು ಮತ್ತಿತರೆಡೆ ಬಾಡಿಗೆ ಮನೆ, ಗುಡಿಸಲುಗಳಲ್ಲಿ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಸ್ವಂತ ಮನೆಯನ್ನು ಒದಗಿಸಿಕೊಡಿ ಎಂದು ಕಳೆದ ಅನೇಕ ವರ್ಷಗಳಿಂದ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ ಇಲ್ಲಿಯವರೆಗೆ ಯಾವುದೇ ಸರಕಾರಗಳು ಬಡವರ ಕೂಗಿಗೆ ಸ್ಪಂದಿಸಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಸರಕಾರಿ ಪೈಸಾರಿ ಭೂಮಿ ಇದ್ದರೂ ಇದು ಉಳ್ಳವರ ಪಾಲಾಗುತ್ತಿದೆಯೇ ಹೊರತು ಬಡ ಕೂಲಿ ಕಾರ್ಮಿಕರಿಗೆ ಹಂಚಿಕೆ ಮಾಡುವ ಕಾಳಜಿಯನ್ನು ಜನಪ್ರತಿನಿಧಿಗಳು ತೋರುತ್ತಿಲ್ಲ ಎಂದು ಆರೋಪಿಸಿದರು.
ಕಳೆದ 25 ವರ್ಷಗಳಿಂದ ಜಿಲ್ಲೆಯಲ್ಲಿದ್ದ ಶಾಸಕರುಗಳು ಬಡವರಿಗೆ ನಿವೇಶನ ಅಥವಾ ವಸತಿ ಕಲ್ಪಿಸಲು ಯಾವುದೇ ಕಾಳಜಿ ತೋರಿರಲಿಲ್ಲ. ಆದರೆ ಪ್ರಸ್ತುತ ಬಂದಿರುವ ಕಾಂಗ್ರೆಸ್ ಶಾಸಕರುಗಳಾದರೂ ನಮ್ಮ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸವಿದೆ. ನಮ್ಮ ವಿಶ್ವಾಸ ಸುಳ್ಳಾದರೆ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಕಾರ್ಮಿಕ ವರ್ಗ ತಕ್ಕ ಪಾಠ ಕಲಿಸಲು ನಿರ್ಧರಿಸಿದೆ. ಆದ್ದರಿಂದ ಜಿಲ್ಲೆಯ ಶಾಸಕರುಗಳು ಆದಷ್ಟು ಶೀಘ್ರ ಬಡ ಕೃಷಿ ಕಾರ್ಮಿಕರಿಗೆ ಸ್ವಂತ ನಿವೇಶನ ಅಥವಾ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
::: ವನ್ಯಜೀವಿ ಹಾವಳಿ :::
ಕೊಡಗಿನ ಕಾಫಿ ತೋಟಗಳಲ್ಲಿ ಸಾವಿರಾರು ಕಾರ್ಮಿಕರು ದುಡಿಯುತ್ತಿದ್ದಾರೆ. ಇವರುಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಕಾಡಾನೆ ಮತ್ತು ಹುಲಿಗಳ ದಾಳಿಯಾಗುತ್ತಿದೆ. ಕಾಡುಪ್ರಾಣಿಗಳ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ಈ ಸಮಸ್ಯೆಯನ್ನು ಯಾವುದೇ ಸರಕಾರಗಳು ಗಂಭೀರವಾಗಿ ಪರಿಗಣಿಸಿಲ್ಲ. ಕಾಡಾನೆಗಳ ಉಪಟಳದ ಅತಿರೇಕಕ್ಕೆ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ಅರಣ್ಯ ಇಲಾಖೆಯ ಅಸಡ್ಡೆಯೇ ಪ್ರಮುಖ ಕಾರಣ. ದೈತ್ಯ ಕಾಡಾನೆಗಳು ದೊಡ್ಡ ಸಂಖ್ಯೆಯಲ್ಲಿ ತೋಟಗಳ ನಾಶದಲ್ಲಿ ತೊಡಗಿವೆ. ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದ ಅಸಹಾಯಕ ಪರಿಸ್ಥಿತಿಯಲ್ಲಿದ್ದಾರೆ.
ಕಾಡಾನೆಗಳು ಮನುಷ್ಯರ ಮೇಲಿನ ದಾಳಿಯನ್ನು ಮುಂದುವರೆಸಿವೆ. ಅರಣ್ಯ ಇಲಾಖೆ ಪರಿಹಾರದ ಚೆಕ್ ನೀಡಿ ಕೈತೊಳೆದುಕೊಳ್ಳುತ್ತಿದೆಯೇ ಹೊರತು ನಾಳಿನ ಅಪಾಯದ ಬಗ್ಗೆ ಅದಕ್ಕೆ ಚಿಂತೆ ಇಲ್ಲದಾಗಿದೆ. ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ಶಾಶ್ವತವಾಗಿ ತಡೆಯಲು ಉನ್ನತ ಮಟ್ಟದ ತಜ್ಞರ ವರದಿ ತರಿಸಿಕೊಂಡು ಆನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ನೀಡಿದ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ 4 ತಿಂಗಳಿನಲ್ಲಿ ಜಿಲ್ಲೆಯಲ್ಲಿ ಕಾಡಾನೆಗಳು ಮಾಡಿದ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ಕೃಷಿ ಫಸಲುಗಳು ನಾಶವಾಗಿವೆ. ಹಾಡಹಗಲೇ ಮುಖ್ಯ ರಸ್ತೆಗಳಲ್ಲಿ ಸಂಚರಿಸುತ್ತಿರುವ ಕಾಡಾನೆಗಳು ಜೀವಭಯ ಮೂಡಿಸುತ್ತಿವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಎನ್ನುವ ಆತಂಕ ಪೋಷಕರನ್ನು ಕಾಡುತ್ತಿದೆ.
ಭಯದಿಂದ ಕಾರ್ಮಿಕರು ತೋಟಗಳಿಗೆ ತೆರಳುತ್ತಿಲ್ಲ. ಬದುಕಿಗಾಗಿ ಕೂಲಿ ಕೆಲಸವನ್ನು ಅವಲಂಬಿಸಿರುವ ಬಡ ಕಾರ್ಮಿಕರು ಕಾಡಾನೆಗಳ ದಾಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದಾರೆ ಎಂದು ಗಮನ ಸೆಳೆದರು.
ಕಾಡಾನೆ ಹಾವಳಿಯ ನೈಜತೆಯನ್ನು ಅಧ್ಯಯನ ಮಾಡಬೇಕು, ಕಾಡಾನೆ ದಾಳಿಗೆ ತುತ್ತಾಗಿ ಗಾಯಗೊಂಡವರನ್ನು ನಿರ್ಲಕ್ಷಿಸದೆ ಅವರು ಗುಣಮುಖರಾಗುವವರೆಗಿನ ಸಂಪೂರ್ಣ ಖರ್ಚುವೆಚ್ಚವನ್ನು ಅರಣ್ಯ ಇಲಾಖೆಯೇ ಭರಿಸಬೇಕು ಮತ್ತು ಶಾಶ್ವತವಾದ ವೈಜ್ಞಾನಿಕ ರೂಪದ ಬೃಹತ್ ಯೋಜನೆಯೊಂದನ್ನು ರೂಪಿಸಬೇಕು ಎಂದು ಒತ್ತಾಯಿಸಿ ಜೂ.13 ರಂದು ಸೋಮವಾರಪೇಟೆಯಲ್ಲಿ ಎಐಟಿಯುಸಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸೋಮಪ್ಪ ತಿಳಿಸಿದರು.
ಈ ಪ್ರತಿಭಟನೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾ ವ್ಯಾಪಿ ಕಾರ್ಮಿಕರನ್ನು ಒಗ್ಗೂಡಿಸಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ಪಿ.ಸುಂದರ, ತಾಲ್ಲೂಕು ಸಂಚಾಲಕ ಶೇಷಪ್ಪ, ಪ್ರಮುಖರಾದ ಕೆ.ಎಂ.ಮಂಜುನಾಥ್ ಹಾಗೂ ಶಬಾನ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ ಮಾ.26 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ಕೂಡಿಗೆ…

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.