Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಾಮಾಜಿಕ ನ್ಯಾಯ ನೀಡದ ಬಿಜೆಪಿ : ಎಂ.ಲಕ್ಷ್ಮಣ್ ಟೀಕೆ : ನನ್ನ ಸೋಲಿಗೆ ದುರಾದೃಷ್ಟ ಕಾರಣ : ಬೇಸರ*
ಇತ್ತೀಚಿನ ಸುದ್ದಿಗಳು

*ಸಾಮಾಜಿಕ ನ್ಯಾಯ ನೀಡದ ಬಿಜೆಪಿ : ಎಂ.ಲಕ್ಷ್ಮಣ್ ಟೀಕೆ : ನನ್ನ ಸೋಲಿಗೆ ದುರಾದೃಷ್ಟ ಕಾರಣ : ಬೇಸರ*

June 11, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.11 NEWS DESK : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಸರಕಾರದ ಸಚಿವ ಸಂಪುಟದಲ್ಲಿ ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದೆ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಚಿವ ಸಂಪುಟದಲ್ಲಿ 72 ಸಚಿವರ ಪೈಕಿ ಒಂದೇ ಸಮುದಾಯದ 25 ಮಂದಿಗೆ ಸ್ಥಾನ ನೀಡಲಾಗಿದೆ. ಶೇ.2 ರಷ್ಟು ಇರುವ ಬ್ರಾಹ್ಮಣರು ಸಂಪುಟದಲ್ಲಿ ಶೇ.35 ರಷ್ಟು ಸ್ಥಾನ ಪಡೆದುಕೊಂಡಿದ್ದಾರೆ. ಬೇರೆ ಸಮುದಾಯದವರು ಬಿಜೆಪಿಗೆ ಮತದಾನ ಮಾಡಿಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟದಲ್ಲಿ 17 ಬಿಜೆಪಿ ಸಂಸದರಿದ್ದು, ಐವರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ. ಲಿಂಗಾಯಿತ ಸಮುದಾಯದ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸ್ಥಾನ ನೀಡಲಾಗಿದೆ. ನಿಜವಾಗಿಯೂ ಬಿಜೆಪಿ ಬಳಿ ಸಾಮಾಜಿಕ ನ್ಯಾಯ ಇದೆಯೇ ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಕೇವಲ ಕಾಂಗ್ರೆಸ್ ಪಕ್ಷ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡದೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಬಗೆ ಹರಿಸಲು ಬದ್ಧರಾಗಿರಬೇಕಾಗುತ್ತದೆ ಎಂದರು. ಕಾವೇರಿ ವಿವಾದ, ಮೇಕೆದಾಟು ಯೋಜನೆ, ಕಳಸಬಂಡೂರಿ ಯೋಜನೆ, ಕಸ್ತೂರಿ ರಂಗನ್ ವಿವಾದ, ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಮತ್ತು ಬರ ಪರಿಹಾರ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸ್ಪಂದಿಸಿದರೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.
ಹಳೇ ಮೈಸೂರು ಭಾಗ ಸೇರಿದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಚೆನ್ನಾಗಿ ಕೆಲಸ ಮಾಡಿದೆ. ಇದರ ಪರಿಣಾಮ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನನ್ನ ಸೋಲಾಗಿದೆ. ನಾನು ಕೇವಲ ಸೋತ್ತಿದ್ದೇನೆ ಅಷ್ಟೆ ಸತ್ತಿಲ್ಲ. ನನಗೆ ಮತ ಹಾಕಿದವರ ಮತ್ತು ಹಾಕದವರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ಧವಿದ್ದೇವೆ. ನನ್ನ ಮೊಬೈಲ್ 24 ಗಂಟೆಯೂ ಚಾಲ್ತಿಯಲ್ಲಿರುತ್ತದೆ, ಯಾರು, ಯಾವಾಗ ಬೇಕಾದರು ನನಗೆ ಕರೆ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ. ಕೊಡಗಿನ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲು ಮಡಿಕೇರಿಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ವಾರಕ್ಕೆ ಒಂದು ಬಾರಿ ಬೆಳಗ್ಗೆಯಿಂದ ಸಂಜೆಯವರೆಗೆ ಲಭ್ಯವಿರುತ್ತೇನೆ ಎಂದು ಲಕ್ಷ್ಮಣ್ ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಹಿಂದಿನ ಸಂಸದ ಪ್ರತಾಪ್ ಸಿಂಹ ಅವರು ಕೊಡಗು ಜಿಲ್ಲೆಗೆ ಯಾವುದೇ ಕೊಡುಗೆಯನ್ನು ನೀಡಿಲ್ಲ. ಇದೀಗ ನೂತನವಾಗಿ ಆಯ್ಕೆಯಾಗಿರುವ ಸಂಸದ ಯದುವೀರ್ ಅವರಾದರು ಅಭಿವೃದ್ಧಿ ಕಾರ್ಯಗಳನ್ನು ತರಲಿ ಎಂದರು.
::: ಸೋಲಿಗೆ ದುರಾದೃಷ್ಟ ಕಾರಣ :::
ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ನನ್ನ ಪರವಾಗಿ ಸಾಕಷ್ಟು ಶ್ರಮಿಸಿದ ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ನಾನು ಸೋತು ನಿರಾಶೆ ಉಂಟು ಮಾಡಿದ್ದೇನೆ. ಅವರ ಬಳಿ ಕ್ಷಮೆ ಕೋರುತ್ತೇನೆ, ನನ್ನ ಸೋಲಿಗೆ ನನ್ನ ದುರಾದೃಷ್ಟ ಕಾರಣವೇ ಹೊರತು ಬೇರೆ ಯಾರೂ ಅಲ್ಲ, ನಾನು ನಿರಂತರವಾಗಿ ಸೋಲುತ್ತಾ ಬಂದಿದ್ದೇನೆ. ಸೋಲಿನ ಬಗ್ಗೆ ಪಕ್ಷದ ಸಭೆಯಲ್ಲಿ ಆತ್ಮಾವಲೋಕನ ನಡೆಸುತ್ತೇವೆ ಎಂದು ಲಕ್ಷ್ಮಣ್ ಬೇಸರ ವ್ಯಕ್ತಪಡಿಸಿದರು.
ನಾನು ಎಲ್ಲೂ ಮತದಾರರನ್ನು ಸ್ಯಾಡಿಸ್ಟ್ ಎಂದು ಹೇಳಿಲ್ಲ, ಇಡೀ ವ್ಯವಸ್ಥೆ ಸ್ಯಾಡಿಸ್ಟ್ ಆಗಿದೆ ಎಂದು ಹೇಳಿದ್ದೇನೆ. ಬೇಕಿದ್ದರೆ ವಿಡಿಯೋದ ತುಣುಕುಗಳನ್ನು ನೋಡಬಹುದು. ಕಾಂಗ್ರೆಸ್ ಪಕ್ಷ ರಾಜ್ಯದ 8 ಕ್ಷೇತ್ರಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಸ್ಪರ್ಧಿಸಲು ಅವಕಾಶ ನೀಡಿತ್ತು. ಆದರೆ ಹಾಸನ ಕ್ಷೇತ್ರವನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಇಂದು ಜಾತಿ ಧ್ರುವೀಕರಣವಾಗುತ್ತಿದೆ ಎಂದು ಅವರು ವಿಶ್ಲೇಷಿಸಿದರು.
::: ಭಾಗ್ಯಗಳಲ್ಲಿ ನ್ಯೂನತೆ :::
ಉಚಿತ ವಿದ್ಯುತ್ ಮತ್ತು ಉಚಿತ ಪ್ರಯಾಣದ ಶಕ್ತಿ ಯೋಜನೆಯಲ್ಲಿ ನ್ಯೂನತೆ ಇದ್ದು, ಇದನ್ನು ಸರಿ ಪಡಿಸುವ ಅಗತ್ಯವಿದೆ. ಕೆಲವರು ವಂಚನೆಯ ಮೂಲಕ ಉಚಿತ ವಿದ್ಯುತ್ ಭಾಗ್ಯದ ಲಾಭ ಪಡೆಯುತ್ತಿದ್ದಾರೆ. ಲಕ್ಷ ಲಕ್ಷ ಸಂಬಳ ಇರುವವರು ಕೂಡ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಬಡವರ ಆರ್ಥಿಕ ಸಬಲೀಕರಣದ ಸದುದ್ದೇಶದಿಂದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಭಾಗ್ಯಗಳು ಅರ್ಹರಿಗೆ ಮಾತ್ರ ತಲುಪಬೇಕಾಗಿದೆ. ಇದಕ್ಕಾಗಿ ಪುನರ್ ಪರಿಶೀಲನೆಯ ಅಗತ್ಯವಿದೆ ಎಂದು ಹೇಳಿದೇನೆಯೇ ಹೊರತು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಎಲ್ಲೂ ಹೇಳಿಲ್ಲ ಎಂದು ಲಕ್ಷ್ಮಣ್ ಸ್ಪಷ್ಟಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ ಮೈಸೂರು- ಕೊಡಗು ಲೋಕಸಭಾ ಕೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲು ಸಾಕಷ್ಟು ಶ್ರಮ ಪಟ್ಟಿದ್ದೇವೆ, ಆದರೆ ಸೋಲಾಗಿದೆ. ಜನರು ನೀಡಿದ ತೀರ್ಪಿಗೆ ತಲೆ ಬಾಗುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಟಾಟು ಮೊಣ್ಣಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಡಿಸಿಸಿ ಸದಸ್ಯರುಗಳಾದ ಮುಕ್ಕಾಟಿರ ಸಂದೀಪ್ ಹಾಗೂ ವಿಶು ರಂಜಿತ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಟ್ಟಮುಡಿ ಹೊದವಾಡ ಗ್ರಾಮದಲ್ಲಿ ವಿದ್ಯುತ್ ಕೊರತೆ*
Next Article *ದೇಶಾದ್ಯಂತ ಉದ್ಯೋಗ ಸೃಷ್ಟಿ : ಅಧಿಕಾರ ಸ್ವೀಕರಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.