Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸನ್ನಡತೆ, ಸದ್ಭಾವನೆ, ಶಿಸ್ತು ಬೆಳೆಸಲು ಸ್ಕೌಟ್ಸ್-ಗೈಡ್ಸ್ ಸಹಕಾರಿ : ರಾಣಿ ಮಾಚಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸನ್ನಡತೆ, ಸದ್ಭಾವನೆ, ಶಿಸ್ತು ಬೆಳೆಸಲು ಸ್ಕೌಟ್ಸ್-ಗೈಡ್ಸ್ ಸಹಕಾರಿ : ರಾಣಿ ಮಾಚಯ್ಯ*

ಜೂನ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.13 NEWS DESK : ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಭಾರತದ ಸಂಪನ್ಮೂಲ ವ್ಯಕ್ತಿಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ  ಜಿಲ್ಲಾ ಗೈಡ್ಸ್ ಆಯುಕ್ತರು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳ ಪರಿಚಯ ಕುರಿತು ಹಾಗೂ ವಿಶ್ವ ಬಾಲ ಕಾರ್ಮಿಕರ ದಿನಾಚರಣೆಯ ಮಹತ್ವ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗಿಗಳಾಗುವುದರಿಂದ ಶಿಸ್ತು, ದಕ್ಷತೆ, ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದರು.
ಜೂ.18 ರಿಂದ 24 ರ ವರೆಗೆ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ನವೋದಯ ಶಾಲೆಯಲ್ಲಿ ಶಾಲಾ ಶಿಕ್ಷಕರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಏರ್ಪಡಿಸಿರುವ ಮೂಲ ತರಬೇತಿ ಹಾಗೂ ಅಡ್ವಾನ್ಸ್ಡ್ ತರಬೇತಿಯ ಕುರಿತು ಮಾಹಿತಿ ನೀಡಿ, ಈ ತರಬೇತಿಯಲ್ಲಿ ಶಿಕ್ಷಕರು ಭಾಗವಹಿಸುವ ಮೂಲಕ ಉತ್ತಮ ತರಬೇತಿ ಹೊಂದಬೇಕು ಎಂದರು.
ಹಸಿರು ಪರಿಸರ ಹಾಗೂ ಸ್ವಚ್ಛತೆಯಿಂದ ಕೂಡಿರುವ ಈ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ಮಕ್ಕಳಲ್ಲಿರುವ ಶಿಸ್ತು, ಸಂಯಮದ ಕುರಿತು ಶ್ಲಾಘಿಸಿದ ರಾಣಿ ಮಾಚಯ್ಯ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ವರ್ಷ ಶಾಲೆಗೆ ಶೇ. 100 ಫಲಿತಾಂಶ ಬರುತ್ತಿರುವುದಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್, ಗೈಡ್ಸ್ ನ ಧ್ಯೇಯೋದ್ದೇಶಗಳನ್ನು ಅರಿತುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ತಮ್ಮನ್ನು ನೆಲ- ಜಲ, ಅರಣ್ಯ, ವನ್ಯಜೀವಿಗಳು, ಪರಿಸರ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗೆ ತೊಡಗಿಸಿಕೊಂಡು
ಪರಿಸರ ಸಮತೋಲನ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿ, ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತವಾಗದೆ ಉತ್ತಮ ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಿದೆ ಎಂದರು.
ನಮ್ಮ ಶಾಲೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿ ಮಕ್ಕಳಲ್ಲಿ ಉತ್ತಮ ಕಲಿಕಾ ಪ್ರೇರಣೆ ನೀಡಿರುವುದು ತುಂಬಾ ಸಂತಸದ ಸಂಗತಿ ಎಂದರು.
ಜಿಲ್ಲಾ ಗೈಡ್ಸ್ ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಸೇರಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.
ನಿಲಯ ಪಾಲಕ ಜಗದೀಶ್, ಶಾಲೆಯ ಶಿಕ್ಷಕರಾದ ಎಸ್.ಕೆ.ಚದಂಬರ, ನಾಗೇಂದ್ರ,ಎಚ್.ಬಿ.ದಿನೇಶಾಚಾರಿ, ಗಾನವಿ, ಹರಿಣಾಕ್ಷಿ ಇತರರು ಇದ್ದರು.
ಇದೇ ವೇಳೆಯಲ್ಲಿ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ ಹಾಗೂ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಶಾಲಾವರಣದಲ್ಲಿ ಪರಿಸರ ಸಂಭ್ರಮದ ಅಂಗವಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಗಿಡ ನೆಟ್ಟರು.
ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಘೋಷಣೆಗಳನ್ನು ಕೂಗಿದರು.   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.14 : ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಕುಶಾಲನಗರದ ಖ್ಯಾತ ಜಿ…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.