Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸೋದ್ಯಮ ಅಭಿವೃಧ್ಧಿ ಕುರಿತು ಸಚಿವರೊಂದಿಗೆ ಸಮಾಲೋಚನೆ : ಶಾಸಕ ಡಾ.ಮಂತರ್ ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರವಾಸೋದ್ಯಮ ಅಭಿವೃಧ್ಧಿ ಕುರಿತು ಸಚಿವರೊಂದಿಗೆ ಸಮಾಲೋಚನೆ : ಶಾಸಕ ಡಾ.ಮಂತರ್ ಗೌಡ ಭರವಸೆ*

ಜೂನ್ 13, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.13 NEWS DESK : ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಕುರಿತು ಪ್ರವಾಸೋದ್ಯಮ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃಧ್ಧಿ ಪಡಿಸಬೇಕು. ಮೂಲಸೌಲಭ್ಯಗಳನ್ನು ಕಲ್ಪಿಸಬೇಕು, ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ಬಳಕೆ ಹಾಗೂ ಗೃಹ ಬಳಕೆ ವಿದ್ಯುತ್ ಶುಲ್ಕ ಸಂಬಂಧ ಒಂದೇ ರೀತಿಯ ಡೆಫಿನೇಶನ್ ಇರಬೇಕು. ವಿದ್ಯುತ್ ಶುಲ್ಕ ಸಂಬಂಧ ಪ್ರವಾಸೋದ್ಯಮ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಆರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮದ ಆಕರ್ಷಣೆಗೆ ಸ್ವಚ್ಛತೆ ಕಾಪಾಡುವುದು ಅಗತ್ಯ, ಎಲ್ಲೆಂದರಲ್ಲಿ ಕಸ ಹಾಕಬಾರದು. ಪ್ಲಾಸ್ಟಿಕ್‌ನ್ನು ಕಡ್ಡಾಯವಾಗಿ ಬಳಸಬಾರದು. ಹಸಿಕಸ ಮತ್ತು ಒಣಕಸವನ್ನು ಬೇರ್ಪಡಿಸಿ ನೀಡಬೇಕು. ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅವರು ಸಲಹೆ ನೀಡಿದರು.
ಈ ಸಂದರ್ಭ ಮಾತನಾಡಿದ ಹೋಂ ಸ್ಟೇ ಅಸೋಷಿಯೇಷನ್‌ನ ಪ್ರತಿನಿಧಿಗಳು ನೋಂದಾಯಿತ ಹೋಂಸ್ಟೇ ಅವರು ಮನೆಯಲ್ಲಿ ಪ್ರವಾಸಿಗರಿಗೆ ವಾಸ್ತವ್ಯಕ್ಕೆ ಅವಕಾಶ ಮಾಡುತ್ತಾರೆ. ಅದನ್ನು ಬಿಟ್ಟು ಹೋಟೆಲ್ ಮಾದರಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಆದ್ದರಿಂದ ಗೃಹ ಬಳಕೆಯಂತೆ ವಿದ್ಯುತ್ ನ್ನು ನೀಡಬೇಕು ಎಂದು ಅವರು ಕೋರಿದರು.
ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಮಂಡಳಿ ಎಂಜಿನಿಯರ್‌ಗಳು ತಪಾಸಣೆ ಕೈಗೊಂಡು ವಾಣಿಜ್ಯ ಬಳಕೆಯಂತೆ ವಿದ್ಯುತ್ ದರ ನಿಗಧಿ ಮಾಡುತ್ತಾರೆ. ಇದರಿಂದ ಹೋಂಸ್ಟೇ ನಡೆಸುವವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೋಂಸ್ಟೇ ಪ್ರತಿನಿಧಿಗಳು ಶಾಸಕರ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ ಅವರು ಪ್ರವಾಸೋದ್ಯಮ ನೀತಿಯಡಿ ಹೋಂ ಸ್ಟೇ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ವಿದ್ಯುತ್‌ಚ್ಛಕ್ತಿ ಮಂಡಳಿಯ ಎಂಜಿನಿಯರ್ ಮಾತನಾಡಿ ವಿದ್ಯುತ್ ನಿಗಮದಿಂದ ವಾಣಿಜ್ಯ ಮತ್ತು ಗೃಹ ಬಳಕೆ ಸಂಬಂಧಿಸಿದಂತೆ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶಗಳನ್ನು ಪಾಲಿಸಲಾಗುತ್ತಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಿದೆ. ಇದರಿಂದ ಉದ್ಯೋಗ ಸೃಷ್ಟಿ ಮಾಡಲು ಸಹಕಾರಿಯಾಗಲಿದೆ ಎಂದು ಹೋಂಸ್ಟೇ ಅಸೋಷಿಯೇಷನ್ ಮಾಜಿ ಅಧ್ಯಕ್ಷ ಕರುಂಬಯ್ಯ ಅವರು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಸಂಬಂಧಿಸಿದಂತೆ ವೆಬ್‌ಸೈಟ್‌ನಲ್ಲಿ ಪವಿತ್ರ ದೇವಾಲಯಗಳು ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಮಾಹಿತಿ ಒದಗಿಸಲು ಮತ್ತಷ್ಟು ಕ್ರಮವಹಿಸಬೇಕಿದೆ ಎಂದರು.
ಜಿಲ್ಲೆಯಲ್ಲಿ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲೆಡೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬರೆಸಬೇಕು. ಇದನ್ನು ಚಾಚೂ ತಪ್ಪದೇ ಪಾಲಿಸಬೇಕು. ಇದುವರೆಗೆ ಈ ರೀತಿ ನಾಮಫಲಕ ಬರೆಸದಿದ್ದಲ್ಲಿ ಶೀಘ್ರ ನಾಮಫಲಕಗಳನ್ನು ಬದಲಿಸುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದರು.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹೋಂಸ್ಟೇ ಸಂಬಂಧಿಸಿದಂತೆ ಬೇರೆ ಬೇರೆ ರೀತಿಯ ಶುಲ್ಕ ಪಡೆಯಲಾಗುತ್ತಿದ್ದು, ಒಂದೇ ರೀತಿಯ ಶುಲ್ಕ ಪಾವತಿಸಿಕೊಳ್ಳಬೇಕು ಎಂದು ಮೋಂತಿ ಗಣೇಶ್ ಅವರು ಮನವಿ ಮಾಡಿದರು.
ಈ ಕುರಿತು ಪ್ರಕ್ರಿಯಿಸಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಗ್ರಾಮ ಪಂಚಾಯಿತಿ ಆಡಳಿತದಲ್ಲಿ ತಮ್ಮದೇ ಆದ ಸದಸ್ಯರನ್ನು ಹೊಂದಿರುವ ಸ್ಥಳೀಯ ಸಂಸ್ಥೆಯಾಗಿದ್ದು, ಸ್ಥಳೀಯ ಸಂಪನ್ಮೂಲವನ್ನು ಗಮನಿಸಿಕೊಂಡು ತೆರಿಗೆ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ. ಆ ನಿಟ್ಟಿನಲ್ಲಿ ಜಿ.ಪಂ.ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಹೋಂ ಸ್ಟೇ ಸಂಬಂಧಿಸಿದಂತೆ ಮಾಹಿತಿ ನೀಡಲಾಗಿದೆ. ಒಂದು ಮನೆಯಲ್ಲಿ 6 ರಿಂದ 8 ಕೊಠಡಿಯಲ್ಲಿ ಹೋಂಸ್ಟೇ ನಡೆಸಬಹುದಾಗಿದೆ ಎಂದರು.
ಹೋಂಸ್ಟೇ ನಡೆಸಲು ಪ್ರವಾಸೋದ್ಯಮ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಂಡು ಸ್ಥಳೀಯ ಸಂಸ್ಥೆಗಳಲ್ಲಿ ಅನುಮತಿ ಪಡೆಯಬೇಕಿದೆ. ಪೊಲೀಸ್ ಇಲಾಖೆಯಿಂದ ಎನ್‌ಒಸಿ ಪಡೆಯಬೇಕಿದೆ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿ ಐ.ಪಿ.ಮೇದಪ್ಪ ಅವರು ಮಾತನಾಡಿ ಸಿಸಿಟಿವಿ ಇರಬೇಕು. ವಾಹನ ನಿಲುಗಡೆ ಜಾಗ ಇರಬೇಕು. ಹತ್ತಿರದವರಿಂದ ಯಾವುದೇ ರೀತಿಯ ಆಕ್ಷೇಪಣೆ ಇಲ್ಲದಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಹೋಂಸ್ಟೇ ನಡೆಸುವ ಮಾಲೀಕರ ವಿರುದ್ದ ಪೊಲೀಸ್ ಇಲಾಖೆಯಲ್ಲಿ ಯಾವುದೇ ದೂರು ಇರಬಾರದು. ಅಂತವರಿಗೆ 10 ದಿನದೊಳಗೆ ಎನ್‌ಒಸಿ ನೀಡಲಾಗುತ್ತದೆ ಎಂದು ತಿಳಿಸಿದರು.
ಹೋಂಸ್ಟೇ ಅಸೋಷಿಯೇಷನ್‌ನ ಅಮರನಾಥ್ ಬಿ., ನಳಿನಿ ಅಚ್ಚಯ್ಯ, ಉಷಾ ಗಣಪತಿ, ಸಿ.ಸಿ.ತಿಮ್ಮಯ್ಯ, ಎನ್.ಕೆ.ಚಂಗಪ್ಪ, ಮಿಕ್ಕಿ ಕಾಳಪ್ಪ, ಕೆ.ಎಂ.ಕರುಂಬಯ್ಯ, ಎಂ.ಮೀನಾ ಕಾರ್ಯಪ್ಪ, ಪಿ.ಕೆ.ಹೆಮಾ ಮಾದಪ್ಪ, ಬಿ.ಎ.ಅಚ್ಚಯ್ಯ, ಸತೀಶ್ ರೈ, ಬಿ.ಪಿ.ಗಣಪತಿ, ಎ.ಎಸ್.ಮಲ್ಲೇಶ್ ಅವರು ಹಲವು ವಿಷಯ ಪ್ರಸ್ತಾಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.