Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ರಕ್ತದಾನಿಗಳ ದಿನಾಚರಣೆ : ಕಾಲೇಜುಗಳಲ್ಲಿ ರಕ್ತದಾನ ಶಿಬಿರ ಆಯೋಜನೆ : ಕುಲಪತಿ ಪ್ರೊ.ಅಶೋಕ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ರಕ್ತದಾನಿಗಳ ದಿನಾಚರಣೆ : ಕಾಲೇಜುಗಳಲ್ಲಿ ರಕ್ತದಾನ ಶಿಬಿರ ಆಯೋಜನೆ : ಕುಲಪತಿ ಪ್ರೊ.ಅಶೋಕ ಆಲೂರ*

ಜೂನ್ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.14 NEWS DESK : ರಕ್ತದಾನ ಮಹಾದಾನವಾಗಿದ್ದು, ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಡುವ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್‌ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಿಂದಾಗುವ ಲಾಭಗಳ ಕುರಿತು ಅರಿವು ಮೂಡಿಸಿಕೊಳ್ಳುವುದು ಮುಖ್ಯ. ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಕಳೆದ 20 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನಿರಂತರವಾಗಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ರಕ್ತದ ಅವಶ್ಯಕತೆ ಇರುವ ಬಗ್ಗೆ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಇರುವ ಕಾರಣ ರಕ್ತ ಹಾಗೂ ಪ್ಲೇಟ್‌ಲೇಟ್‌ಗಳ ಅವಶ್ಯಕತೆ ತುಂಬಾ ಇದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಹೇಳಿದರು. ರಕ್ತದ ಅವಶ್ಯಕತೆ ಹಾಗೂ ರಕ್ತದಾನದ ಮಹತ್ವ ಮತ್ತು ಉಪಯೋಗಗಳ ಕುರಿತು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಅರಿವು ಮೂಡಿಸಿದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಸೀನಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ರಕ್ತದ ಕೊರತೆಯಾಗಬಾರದು. ರಕ್ತದ ಅವಶ್ಯಕತೆ ಇದ್ದಾಗ ತಾವು ಕೈಜೋಡಿಸುವುದಾಗಿ ತಿಳಿಸಿದರು. ಕುಲಸಚಿವರಾದ ಡಾ.ಸೀನಪ್ಪ ಅವರು ರಕ್ತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ದಿನ ಅತಿ ಹೆಚ್ಚು ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸಿದ ದಾನಿಗಳು ಶ್ರೇಷ್ಠರು. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತಿ ಹೆಚ್ಚು ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನಿತಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ, ಮುತ್ತಮ್ಮ, ಐಸಿಟಿಸಿ ಆಪ್ತ ಸಮಾಲೋಚಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು. ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳು ರಕ್ತದಾನ ಮಾಡಿದರು. ಎಂ.ಎ.ವಿದ್ಯಾರ್ಥಿ ಅಮೃತ್‌ರಾಜ್ ಅವರು ಪ್ರಾರ್ಥಿಸಿದರು. ಕೊಡಗು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಜಮೀರ್ ಅಹಮದ್ ಅವರು ಸ್ವಾಗತಿಸಿದರು. ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಸುದರ್ಶನ್ ಕುಮಾರ್ ಅವರು ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.