Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವನ್ಯಜೀವಿಗಳ ಉಪಟಳ ಅತಿರೇಕ : ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೊಡಗು ಜಿಲ್ಲಾಡಳಿತ*
ಇತ್ತೀಚಿನ ಸುದ್ದಿಗಳು

*ವನ್ಯಜೀವಿಗಳ ಉಪಟಳ ಅತಿರೇಕ : ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೊಡಗು ಜಿಲ್ಲಾಡಳಿತ*

June 15, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.15 NEWS DESK : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಾಡಾನೆಗಳ ಉಪಟಳ ನಿಯಂತ್ರಿಸುವಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವೈಜ್ಞಾನಿಕ ಕಾರ್ಯಕ್ರಮ ರೂಪಿಸಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದರು.
ಕಾಡಾನೆ ಹಾವಳಿ ನಿಯಂತ್ರಿಸುವ ಸಂಬಂಧ ಸೋಲಾರ್ ತಂತಿಬೇಲಿ ಅಳವಡಿಸುವುದು, ಟ್ರಂಚ್‍ಗಳ ನಿರ್ಮಾಣ, ರೈಲ್ವೆ ಬ್ಯಾರಿಕೇಡ್ ಸೇರಿದಂತೆ ಹಲವು ಕ್ರಮ ಕೈಗೊಳ್ಳಬಹುದು ಎಂದರು.
ಕೊಡಗು ವನ್ಯಜೀವಿ ಸಂಸ್ಥೆಯ ಮಾಜಿ ಅಧ್ಯಕ್ಷ ಕರ್ನಲ್(ನಿ) ಸಿ.ಪಿ.ಮುತ್ತಣ್ಣ ಮಾತನಾಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಚಲನವಲನಗಳ ಬಗ್ಗೆ ದಿನನಿತ್ಯ ಗಮನಹರಿಸಿ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು.
ಕಾಡಾನೆ ಹಾವಳಿಯಿಂದ ಕೃಷಿಬೆಳೆ ಸಂರಕ್ಷಿಸುವಲ್ಲಿ ಅಗತ್ಯ ಕ್ರಮವಹಿಸಬೇಕಿದೆ. ಹಾಗೆಯೇ ಸ್ಥಳೀಯರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಿ, ಕಾಡಾನೆಗಳಿಂದ ರಕ್ಷಿಸಬೇಕಿದೆ ಎಂದು ಮುತ್ತಣ್ಣ ಸಲಹೆ ಮಾಡಿದರು.
ಹೆಚ್ಚಿನ ತೊಂದರೆ ನೀಡುವ ಕಾಡಾನೆಗಳನ್ನು ಬೇರೆಡೆ ಸ್ಥಳಾಂತರಿಸಬೇಕು. ವನ್ಯಪ್ರಾಣಿಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿನ ಹಾಡಿಗಳಲ್ಲಿ ಶೌಚಾಲಯ ಸೇರಿದಂತೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದು ಅವರು ಮನವಿ ಮಾಡಿದರು.
`ನಾಗರಹೊಳೆ-ಬ್ರಹ್ಮಗಿರಿ ವ್ಯಾಪ್ತಿಯ ಕುಟ್ಟ ಬಳಿ ಆನೆ ಕಾರಿಡಾರ್ ನಿರ್ಮಿಸಿದಲ್ಲಿ ನಾಡಿಗೆ ಬರುವ ಕಾಡಾನೆಗಳನ್ನು ತಡೆಯಬಹುದಾಗಿದೆ ಎಂದು ಕರ್ನಲ್(ನಿ) ಮುತ್ತಣ್ಣ ಅಭಿಪ್ರಾಯಪಟ್ಟರು.’
ವಯಸ್ಸಾದ ಹಾಗೂ ಗಾಯಗೊಂಡಿರುವ ಹುಲಿಗಳನ್ನು ಗುರುತಿಸಿ ಅಂತಹ ಹುಲಿಗಳಿಗೆ ಕಾಲರ್‍ಗಳನ್ನು ಅಳವಡಿಸುವಂತಾಗಬೇಕು. ಇದರಿಂದ ಜನ-ಜಾನುವಾರುಗಳ ರಕ್ಷಣೆ ಮಾಡಬಹುದಾಗಿದೆ ಎಂದು ಸಲಹೆ ಮಾಡಿದರು.
ಅರಣ್ಯ ಪ್ರದೇಶದಲ್ಲಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ಅರಣ್ಯ ನಾಶದಿಂದ ವರ್ಷದಿಂದ ವರ್ಷಕ್ಕೆ ಮಳೆ ಕಡಿಮೆಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಇಲ್ಲದಿದ್ದಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ವನ್ಯಜೀವಿ ತಜ್ಞರಾದ ಸಂಜಯ್ ಗುಬ್ಬಿ ಮಾತನಾಡಿ, ಮಲೆನಾಡು ಭಾಗದಲ್ಲಿ ಆನೆಗಳ ಚಲನವಲನಗಳ ಬಗ್ಗೆ ಮಾಹಿತಿ ನೀಡಿದರು.
ವನ್ಯ ಪ್ರಾಣಿಗಳಿಗೆ ಕುಡಿಯುವ ನೀರು ಮತ್ತು ಮೇವು ಅತೀ ಮುಖ್ಯ. ಆದ್ದರಿಂದ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಮೇವು ಮತ್ತು ಕುಡಿಯುವ ನೀರು ಲಭ್ಯವಾಗುವಂತೆ ಮಾಡಬೇಕು. ಆನೆಗಳು 200 ಕಿ.ಮೀ.ವರೆಗೆ ಸಂಚಾರ ಮಾಡುತ್ತವೆ ಎಂದು ಸಂಜಯ್ ಗುಬ್ಬಿ ಹೇಳಿದರು.
ನಾಗರಹೊಳೆ ಹುಲಿಯೋಜನೆ ನಿರ್ದೇಶಕರಾದ ಹರ್ಷಕುಮಾರ್ ಮಾತನಾಡಿ, ಕಾಡಾನೆ ಹಾವಳಿ ತಪ್ಪಿಸುವಲ್ಲಿ ಅರಣ್ಯ ಇಲಾಖೆಯಿಂದ ಸಾಕಷ್ಟು ಪ್ರಯತ್ನ ನಡೆದಿದೆ. ಆ ನಿಟ್ಟಿನಲ್ಲಿ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾತನಾಡಿ, ಕಾಡಾನೆಗಳು ಸಂಚರಿಸುವ ಮಾರ್ಗದಲ್ಲಿ ಬೆಳಗಿನ ಜಾವದಲ್ಲಿ ಮತ್ತು ಹೆಚ್ಚಿನ ಮಂಜು ಆವರಿಸುವ ಸಂದರ್ಭದಲ್ಲಿ ಸಾರ್ವಜನಿಕರು ಓಡಾಡುವುದನ್ನು ತಪ್ಪಿಸಬೇಕು. ಇದರಿಂದ ಸಾಕಷ್ಟು ಸುರಕ್ಷತೆ ಕಾಪಾಡಬಹುದಾಗಿದೆ ಎಂದು ಹೇಳಿದರು.
ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ್ ಅವರು ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರಿಗೆ ಇಲಾಖೆಯಿಂದ ಸೋಲಾರ್ ಲೈಟ್ ಮತ್ತಿತರ ಸೌಲಭ್ಯ ಕಲ್ಪಿಸಬಹುದಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕಾಡಾನೆ ಸೇರಿದಂತೆ ವನ್ಯಪ್ರಾಣಿಗಳ ಹಾವಳಿಯು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇವುಗಳ ನಿಯಂತ್ರಣ ಅಗತ್ಯ ಎಂದು ಕೂರ್ಗ್ ವೈಲ್ಡ್ ಲೈಪ್ ಸೊಸೈಟಿಯ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ*
Next Article *ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.