Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಚೆಟ್ಟಳ್ಳಿಯಲ್ಲಿ ಬೆಣ್ಣೆಹಣ್ಣು ಕ್ಷೇತ್ರೋತ್ಸವ : ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಿರಿ : ಡಾ.ಎಸ್.ಕೆ.ಸಿಂಗ್ ಸಲಹೆ
Uncategorized

ಚೆಟ್ಟಳ್ಳಿಯಲ್ಲಿ ಬೆಣ್ಣೆಹಣ್ಣು ಕ್ಷೇತ್ರೋತ್ಸವ : ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಿರಿ : ಡಾ.ಎಸ್.ಕೆ.ಸಿಂಗ್ ಸಲಹೆ

ಜೂನ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.16 NEWS DESK : ಭಾರತ ಮುಂದಿನ 15 ವರ್ಷಗಳಲ್ಲಿ ಫುಡ್ ಹಬ್ ಆಗಿ ಬದಲಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಅಧಿಕ ಮೌಲ್ಯವಿರುವ ಹಣ್ಣುಗಳನ್ನು ಬೆಳೆಯಲು ಬೆಳೆಗಾರರು ಮುಂದಾಗಬೇಕು. ಆ ಮೂಲಕ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ನವದೆಹಲಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮಹಾ ನಿರ್ದೇಶಕ ಡಾ.ಎಸ್.ಕೆ.ಸಿಂಗ್ ತಿಳಿಸಿದ್ದಾರೆ. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆದ ಬೆಣ್ಣೆಹಣ್ಣು ಕ್ಷೇತ್ರೋತ್ಸವ ಹಾಗೂ ವೈವಿಧ್ಯತೆ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘವನ್ನು ಆರಂಭಿಸಲಾಗಿದ್ದು, ಬೆಳೆಗಾರರು ಸಂಘದಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರೈತರು ನೇರವಾಗಿ ಹಣ್ಣಿನ ಗಿಡಗಳನ್ನು ಖರೀದಿ ಮಾಡಿದರೆ ಹೆಚ್ಚು ವೆಚ್ಚವಾಗುತ್ತದೆ. ಸಂಘದ ಮೂಲಕ ಎಲ್ಲರೂ ಒಗ್ಗೂಡಿ ಖರೀದಿಸಿದಾಗ ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಇದರಿಂದ ಇತರೆ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಕೊಡಗು ಸೇರಿದಂತೆ ರಾಜ್ಯದ ಪ್ರಮುಖ ಆಯ್ದ ಭಾಗದಲ್ಲಿ ಆಫ್ ಸೀಸನ್ ಲಿಚ್ಚಿ, ಬಟರ್ ಫ್ರೂಟ್ ಸೇರಿದಂತೆ ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಬಹುದಾಗಿದೆ. ಹೆಚ್ಚು ಬೇಡಿಕೆ ಇರುವ ಹಣ್ಣುಗಳನ್ನು ಬೆಳೆಯಲು ರೈತರು ಉತ್ಸುಕತೆ ತೋರಬೇಕೆಂದು ಸಲಹೆ ನೀಡಿದರು. ಭಾರತ ಸರ್ಕಾರದ ತೋಟಗಾರಿಕಾ ಸಮಗ್ರ ಅಭಿವೃದ್ಧಿ ಮಿಷನ್ ನ ನಿರ್ದೇಶಕ ಕೆ.ಎನ್.ವರ್ಮ ಮಾತನಾಡಿ ರೈತರಿಗೆ ಉತ್ತಮ ಗುಣಮಟ್ಟದ ಹಣ್ಣಿನ ಗಿಡಗಳನ್ನು ನೀಡುವುದು ಹಾಗೂ ರೈತರ ಆದಾಯವನ್ನು ಹೆಚ್ಚಿಸಲು ಪೂರಕ ಕ್ರಮ ಕೈಗೊಳ್ಳಲಾಗುವುದು. ಎಂಐಡಿಹೆಚ್ ಯೋಜನೆಯಡಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪ್ರಗತಿಪರ ಕೃಷಿಕ ಬೋಸ್ ಮಂದಣ್ಣ ಮಾತನಾಡಿ ಕೊಡಗು ಪ್ರತ್ಯೇಕ ರಾಜ್ಯವಾಗಿದ್ದಾಗ ಚೆಟ್ಟಳ್ಳಿ ಕೇಂದ್ರವನ್ನು ಆರಂಭಿಲಾಗಿತ್ತು. ಕೊಡಗಿನ ಕಿತ್ತಳೆ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಿತ್ತಳೆ ಮರೆಯಾಗಿದೆ. ಆದ್ದರಿಂದ ಚೆಟ್ಟಳ್ಳಿ ಕೇಂದ್ರದಿಂದ ಕೊಡಗಿನ ಕಿತ್ತಳೆ ಪುನಶ್ಚೇತನಕ್ಕೆ ಮೂರು ವರ್ಷಗಳ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಇತ್ತೀಚಿನ ದಿನಗಳಲ್ಲಿ ಕೃಷಿಕರಿಗೆ ಮಾರುಕಟ್ಟೆ ಬಹುದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಚೆಟ್ಟಳ್ಳಿಯಲ್ಲಿ ವಿದೇಶಿ ತೋಟಗಾರಿಕಾ ಬೆಳೆಗಾರರು ಅಭಿವೃದ್ಧಿ ಸಂಘವನ್ನು ಆರಂಭಿಸಿದ್ದು, ಇದರ ಲಾಭವನ್ನು ಬೆಳೆಗಾರರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಐಸಿಎಆರ್ ಹಣ್ಣಿನ ವಿಭಾಗದ ಯೋಜನಾ ಸಹ ಸಂಯೋಜಕ ಪ್ರಕಾಶ್ ಪಾಟೀಲ್ ಮಾತನಾಡಿ ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಮೂಲಕ ಸ್ವದೇಶಿ ವಸ್ತುಗಳ ಉತ್ಪಾದನೆ ಉತ್ತೇಜಿಸುತ್ತಿದೆ. ಅದರಂತೆ ನಾವು ಇಲ್ಲಿನ ಹವಾಗುಣಕ್ಕೆ ಹೊಂದಿಕೊಳ್ಳುವ ತೋಟಗಾರಿಕಾ ಹಣ್ಣುಗಳನ್ನು ಬೆಳೆಯಬೇಕು. ಇದಕ್ಕೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು. ಚೆಟ್ಟಳ್ಳಿ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮುಖ್ಯಸ್ಥ ರಾಜೇಂದಿರನ್ ಮಾತನಾಡಿದರು. ಹಣ್ಣು ವಿಭಾಗದ ವಿಜ್ಞಾನಿ ಡಾ. ಮುರುಳೀಧರ್ ಭಾರತದಲ್ಲಿ ಬೆಣ್ಣೆಹಣ್ಣಿನ ಕೃಷಿ, ನಿರೀಕ್ಷೆಗಳು ಹಾಗೂ ಸಮಸ್ಯೆಗಳ ಬಗ್ಗೆ ವಿಷಯ ಮಂಡಿಸಿದರು. ಕೀಟಶಾಸ್ತ್ರ ವಿಭಾಗದ ವಿಜ್ಞಾನಿ ರಾಣಿ ಬೆಣ್ಣೆಹಣ್ಣಿನಲ್ಲಿ ಪ್ರಮುಖ ಕೀಟ ಮತ್ತು ರೋಗಗಳು ಹಾಗೂ ಅವುಗಳ ನಿರ್ವಹಣೆ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕ ಪ್ರಾಯೋಗಿಕ ಕೇಂದ್ರದಿಂದ ಆರಂಭಿಸಲಾಗಿರುವ ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ…

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.