Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಳೆವಿಮೆ ಸೇರಿದಂತೆ ಕೃಷಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೆಳೆವಿಮೆ ಸೇರಿದಂತೆ ಕೃಷಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಜೂನ್ 18, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.18 NEWS DESK : ಬೆಳೆವಿಮೆ ಸಂಬಂಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳೆವಿಮೆ ಸೌಲಭ್ಯ ಬಳಸಿಕೊಳ್ಳುವಲ್ಲಿ ರೈತರಿಗೆ ಮತ್ತಷ್ಟು ಮಾಹಿತಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಾಕಷ್ಟು ದಾಸ್ತಾನು ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, 2024ರ ಮುಂಗಾರು ಹಂಗಾಮಿಗೆ 2024 ರ ಮೇ, 20 ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳನ್ನು ಬೆಳೆವಿಮೆ ಯೋಜನೆಯಡಿ ಅಧಿಸೂಚಿತಗೊಂಡಿದೆ ಎಂದು ವಿವರಿಸಿದರು.
ಕೊಡಗು ಜಿಲ್ಲೆಗೆ ಓರಿಯಂಟಲ್ ಸಾಮಾನ್ಯ ವಿಮಾ ಕಂಪನಿಯನ್ನು 2024-25 ಮತ್ತು 2025-26 ನೇ ಸಾಲಿಗೆ ಅನುಷ್ಠಾನ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಭತ್ತದ (ನೀರಾವರಿ ಮತ್ತು ಮಳೆಯಾಶ್ರಿತ) ಬೆಳೆಗೆ ಆಗಸ್ಟ್, 16 ಮತ್ತು ಮುಸುಕಿನ ಜೋಳದ ಬೆಳೆಗೆ ಜುಲೈ, 31 ರವರೆಗೆ ವಿಮೆ ಯೋಜನೆಯಡಿ ರೈತರು ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಈ ಬಾರಿ ಜನವರಿಯಿಂದ ಇದುವರೆಗೆ 454 ಮಿ.ಮೀ. ಮಳೆಯಾಗಿದ್ದು, ಶೇ.5ರಷ್ಟು ಹೆಚ್ಚಾಗಿದೆ. ಆದರೆ ಜೂನ್ ತಿಂಗಳಲ್ಲಿ ವಾಡಿಕೆ ಮಳೆ 190 ಮಿ.ಮಿ. ಆಗಿದ್ದರೆ, 146 ಮಿ.ಮೀ. ಮಾತ್ರ ಮಳೆಯಾಗಿದೆ. ಶೇ.22 ರಷ್ಟು ಮಳೆ ಕೊರತೆ ಕಂಡುಬಂದಿದೆ ಎಂದು ಸೋಮಸುಂದರ ತಿಳಿಸಿದರು.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಈಗ ಉತ್ತಮ ಮಳೆಯಾದಲ್ಲಿ ಸಸಿಮಡಿ ಕಾರ್ಯ ಆರಂಭವಾಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿನ ಕೆರೆಗಳನ್ನು ಅಭಿವೃದ್ಧಿಪಡಿಸಿ ಮೀನುಗಾರಿಕೆಗೆ ಉತ್ತೇಜನ ನೀಡಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಆಡಳಿತಗಳು ಹಾಗೂ ಮೀನುಗಾರಿಕೆ ಇಲಾಖೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮೀನುಗಾರಿಕೆಗೆ ಬೇಡಿಕೆಯಿದ್ದು, ಕೆರೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು. ಈ ಸಂಬಂಧ ತಾ.ಪಂ.ಇಒಗಳು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸುವಂತೆ ಡಾ.ಎನ್.ವಿ.ಪ್ರಸಾದ್ ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿಗತಿ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಷ್ಟು ಶಾಲೆಗಳು ಸೋರುತ್ತಿವೆ ಎಂಬ ಬಗ್ಗೆ ಕೂಡಲೇ ಪಟ್ಟಿ ಮಾಡಿ ವರದಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪಡಿತರ ಪಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಳೆದ ಆರು ತಿಂಗಳಿನಿಂದ ಸತತವಾಗಿ ಬಿಪಿಎಲ್‍ನಡಿ ಆಹಾರ-ಪಡಿತರ ಪಡೆಯದಿರುವವರ ಮಾಹಿತಿಯನ್ನು ಆಹಾರ ಇಲಾಖೆಯ ಆಯುಕ್ತಾಲಯಕ್ಕೆ ಕಳುಹಿಸುವಂತೆ ಸಲಹೆ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಸಂಬಂಧ ಸಮೀಕ್ಷೆ ನಡೆಸಿ ವರದಿ ನೀಡಲಾಗುವುದು ಎಂದು ಹೇಳಿದರು.
ಕೊಡವ ಹೆರಿಟೇಜ್ ಸಂಬಂಧಿಸಿದಂತೆ ಮುಂದುವರಿದ ಕಾಮಗಾರಿಗೆ 5 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಸಂಬಂಧ ಅನುದಾನ ಬಿಡುಗಡೆಯಾಗಬೇಕಿದೆ. ಹಾಗೆಯೇ ಕುಶಾಲನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಬೇಕಿದೆ ಎಂದು ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು.
ಜೇನುಕೃಷಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕೊಡಗು ಜೇನಿಗೆ ನಂಜನಗೂಡು ರಸಬಾಳೆ ಮಾದರಿಯಲ್ಲಿ ಪ್ರಾಶಸ್ತ್ಯ ದೊರೆಯುವಂತಾಗಲು ಅಗತ್ಯ ಯೋಜನೆ ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು.

ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಮಹಾತ್ಮ ಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗುರಿ ತಲುಪಲಾಗಿದೆ. ಸ್ವಚ್ಚ ಭಾರತ ಮಿಷನ್ ಅಭಿಯಾನ ಹಾಗೂ ವಸತಿ ಯೋಜನಾ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜೊತೆಗೆ ಚರ್ಚಿಸಲಾಗಿದ್ದು, ಸೋಮವಾರಪೇಟೆ ಮತ್ತು ವಿರಾಜಪೇಟೆಗೆ ಹತ್ತಿರದ ಜಿಲ್ಲೆಯಿಂದ ಮೂವರು ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ ಎಂದು ಡಾ.ಸತೀಶ್ ಕುಮಾರ್ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆಗೆ ಸಂಬಂಧಿಸಿದಂತೆ ಅಂಗನವಾಡಿಗಳಿಗೆ ಕೂಡಲೇ ತಹಶೀಲ್ದಾರರು ಜಾಗ ಒದಗಿಸಬೇಕು. ಆ ನಿಟ್ಟಿನಲ್ಲಿ ಗಮನಹರಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ನಿರ್ದೇಶನ ನೀಡಿದರು.
ಅರಣ್ಯದಲ್ಲಿರುವ ಜಾಗ ಹೊರತುಪಡಿಸಿ ಉಳಿದಂತೆ ಜಾಗ ನೀಡಲು ಆದ್ಯತೆ ಮೇಲೆ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಜಿಲ್ಲೆಯಲ್ಲಿ 883 ಅಂಗನವಾಡಿ ಕೇಂದ್ರಗಳಿದ್ದು, ಇದರಲ್ಲಿ 750 ಕ್ಕೂ ಹೆಚ್ಚು ಅಂಗನವಾಡಿಗಳು ಸರ್ಕಾರಿ ಕಟ್ಟಡದಲ್ಲಿ, 48 ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 15 ಕ್ಕೂ ಹೆಚ್ಚು ಅಂಗನವಾಡಿಗಳ ಕಟ್ಟಡಗಳು ಪ್ರಗತಿಯಲ್ಲಿದೆ. ಉಳಿದಂತೆ 22 ಅಂಗನವಾಡಿಗಳಿಗೆ ನಿವೇಶನ ಬೇಕಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಸಭೆಯಲ್ಲಿ ನೀಡಲಾಗಿರುವ ನಿರ್ದೇಶನವನ್ನು ಚಾಚೂ ತಪ್ಪದೇ ಅಧಿಕಾರಿಗಳು ಪಾಲಿಸಬೇಕು. ಮುಂದಿನ ಸಭೆಯಲ್ಲಿ ಕೆಲಸಗಳು ಆಗಿರಬೇಕು ಎಂದು ಸೂಚಿಸಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿವೇಶನ ಬೇಕಿದ್ದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಮಾಡುವಂತೆ ನಿರ್ದೇಶನ ನೀಡಿದರು.
ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಗಮನಹರಿಸಬೇಕು. ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ, ಸೆಸ್ಕ್ ಇಇ ಅನಿತಾ ಬಾಯಿ, ಜಿ.ಪಂ.ಎಂಜಿನಿಯರ್‍ಗಳಾದ ಸುರೇಶ್ ಕುಮರ್, ಮುತ್ತುರಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗಿಶ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ, ನವೀನ್ ಕುಮಾರ್, ಮೋಹನ್ ಕುಮಾರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾದೇವಿ ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.