Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಬೃಹತ್ ಜನಸ್ಪಂದನಾ ಸಭೆ : ಶಾಸಕ ಎ.ಎಸ್.ಪೊನ್ನಣ್ಣ ಪ್ರಾಮಾಣಿಕ ಸ್ಪಂದನೆ : ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಡೆಸಲು ಚಿಂತನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಬೃಹತ್ ಜನಸ್ಪಂದನಾ ಸಭೆ : ಶಾಸಕ ಎ.ಎಸ್.ಪೊನ್ನಣ್ಣ ಪ್ರಾಮಾಣಿಕ ಸ್ಪಂದನೆ : ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಡೆಸಲು ಚಿಂತನೆ*

ಜೂನ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ ಎಂದರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ತಲುಪಿದಲ್ಲಿ ಸಾರ್ಥಕವಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಯಾವುದೇ ರೀತಿಯ ಕುಂದುಕೊರತೆ ಇದ್ದಲ್ಲಿ ಮನವಿ ಮಾಡುವಂತಾಗಬೇಕು. ಬಗೆಹರಿಸುವಂತಹಗಳನ್ನು ಸ್ಥಳದಲ್ಲಿಯೇ ತಿಳಿಸಲಾಗುವುದು. ಇಲ್ಲದಿದ್ದಲ್ಲಿ 15 ದಿನದೊಳಗೆ ಬಗೆಹರಿಸಲಾಗುವುದು ಎಂದರು. ಸಾರ್ವಜನಿಕರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಜನಸ್ಪಂದನ ಸಭೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಐಟಿಡಿಪಿ, ಲೀಡ್ ಬ್ಯಾಂಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಂಚಾಯತ್ ರಾಜ್, ಪಶುಪಾಲನೆ ಸೇರಿದಂತೆ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಮಳಿಗೆ ನಿರ್ಮಾಣ ಮಾಡಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ವಿರಾಜಪೇಟೆ ಪಟ್ಟಣದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಸುಮಾರು 126 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.
ವಿರಾಜಪೇಟೆ ಪುರಸಭೆಗೆ ಸಂಬಂಧಿಸಿದಂತೆ 55 ಅರ್ಜಿಗಳು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 25 ಅರ್ಜಿಗಳು, ಗ್ರಾಮ ಪಂಚಾಯಿತಿ ಸಂಬಂಧಿಸಿದಂತೆ 10 ಅರ್ಜಿಗಳು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 8 ಅರ್ಜಿಗಳು, ಭೂ ದಾಖಲೆಗಳ ಇಲಾಖೆಗೆ ಸಂಬಂಧಿಸಿದಂತೆ 7 ಅರ್ಜಿಗಳು, ಅರಣ್ಯ ಇಲಾಖೆ ಹಾಗೂ ಸೆಸ್ಕ್ ಸಂಬಂಧಿಸಿದಂತೆ ತಲಾ 3 ಅರ್ಜಿಗಳು, ಜಿ.ಪಂ., ಕೆಎಸ್‌ಆರ್‌ಟಿಸಿ ಪೊಲೀಸ್ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ತಲಾ 2 ಅರ್ಜಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಲೀಡ್ ಬ್ಯಾಂಕ್, ಕಂದಾಯ ಮತ್ತು ಅರಣ್ಯ, ಪ್ರಾದೇಶಿಕ ಸಾರಿಗೆ, ಪ್ರವಾಸೋದ್ಯಮ ತಲಾ 1 ಅರ್ಜಿಗಳು ಸೇರಿದಂತೆ ಒಟ್ಟು 126 ಅರ್ಜಿಗಳು ಸಲ್ಲಿಕೆಯಾದವು.
ಅಹವಾಲು ಸ್ವೀಕಾರ ಸಂದರ್ಭದಲ್ಲಿ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕುಂದುಕೊರತೆಯನ್ನು ಪರಿಹರಿಸುವಂತೆ ಎ.ಎಸ್.ಪೊನ್ನಣ್ಣ ಅವರು ಸ್ಪಷ್ಟ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರ ಶ್ರೇಯೋಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವತ್ತ ಗಮನಹರಿಸಬೇಕು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದರು.
ಸರ್ಕಾರ ಎಲ್ಲಾ ಜನರ ಏಳಿಗೆಗೆ ಒಂದಲ್ಲ ಒಂದು ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಯಾರೂ ಸಹ ಮುಖ್ಯವಾಹಿನಿಯಿಂದ ದೂರ ಇರಬಾರದು. ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಮುನ್ನಡೆಯಬೇಕು ಎಂದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಪುರಸಭೆ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.