Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಡಗೋಲು ಕಣರೋಗದ ಕುರಿತು ಜಾಗೃತಿ ಅಗತ್ಯ : ಎಂ.ಪಿ.ಸುಜಾ ಕುಶಾಲಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಡಗೋಲು ಕಣರೋಗದ ಕುರಿತು ಜಾಗೃತಿ ಅಗತ್ಯ : ಎಂ.ಪಿ.ಸುಜಾ ಕುಶಾಲಪ್ಪ*

ಜೂನ್ 20, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.20 NEWS DESK : ಕುಡಗೋಲು ಕಣದ ರೋಗದ ಬಗ್ಗೆ ಸಾರ್ವಜನಿಕರು ಹಾಗೂ ಗಿರಿಜನರು ಅರಿವು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ, ಮಡಿಕೇರಿ, ಬೆಂಗಳೂರು ಭಾರತೀಯ ತೈಲ ನಿಗಮ ಭಾರತೀಯ ವಿಜ್ಞಾನ ಸಂಸ್ಥೆ, ಪ್ರಾಜೆಕ್ಟ್ ಚಂದನ, ರಾಜ್ಯ ರಕ್ತಕೋಶ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿಶ್ವ ಕುಡಗೋಲು ಕಣ ರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ಹಾಗೂ ಗಿರಿಜನರು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು. ಇದಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಅತೀ ಮುಖ್ಯ ಎಂದು ತಿಳಿಸಿದರು.
ಜಿಲ್ಲಾ ಸಿಕಲ್‍ಸೆಲ್ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ಕುಡಗೋಲು ಕಣ ರೋಗವು ಅನುವಂಶಿಕ ಕಾಯಿಲೆಯಾಗಿದ್ದು, ಇದರಲ್ಲಿ ಕೆಂಪು ರಕ್ತಕಣಗಳು ಕುಡಗೋಲು ಆಕಾರದ ರೂಪವನ್ನು ಪಡೆದು ದೇಹದಲ್ಲಿ ರಕ್ತದ ಚಲನೆಯನ್ನು ನಿಧಾನಗೊಳಿಸಿ, ನಿರ್ಭಂಧಿಸಿ, ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಈ ಕಾಯಿಲೆಯು ಹುಟ್ಟಿನಿಂದ ಸಾಯುವವರಗೆ ಕಾಡುವ ರೋಗವಾಗಿದ್ದು, ಈ ರೋಗ ಹೊಂದಿದವರ ಜೀವಿತಾವಧಿ ಇನ್ನಿತರ ಜನಸಾಮಾನ್ಯರಿಗಿಂತ ಕಡಿಮೆ. ಸರಾಸರಿ 42 ರಿಂದ 48 ವರ್ಷ ಬದುಕಬಹುದು ಎಂದು ತಿಳಿಸಿದರು.
ಆಯಾಸ, ಬ್ಯಾಕ್ಟೀರಿಯಾದ ಸೋಂಕುಗಳು, ಪಾಶ್ರ್ವವಾಯು, ಕಣ್ಣಿನ ಹಾನಿ, ಉರಿಯೂತ, ವಾಸಿಯಾಗದ ಕಾಲಿನ ಹುಣ್ಣು, ತೀವ್ರ ಮೂಳೆನೋವು, ಪದೇಪದೇ ಜ್ವರ, ರಕ್ತಹೀನತೆ, ವಿಳಂಬಿತ ಬೆಳವಣಿಗೆ ಅಥವಾ ಪ್ರೌಢಾವಸ್ಥೆ ಈ ಕಾಯಿಲೆಯ ಲಕ್ಷಣಗಳು ಎಂದು ತಿಳಿಸುತ್ತಾ, ಕಾಯಿಲೆಯು ಹರಡುವ ಬಗೆಯನ್ನು ಸವಿವರವಾಗಿ ತಿಳಿಸಿಕೊಟ್ಟರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‍ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 58 ಸಾವಿರಕ್ಕೂ ಹೆಚ್ಚು ಗಿರಿಜನರಿದ್ದು, ಕೊಡಗು ಜಿಲ್ಲೆಯಲ್ಲಿ ಆದಿವಾಸಿ ಬುಡಕಟ್ಟು ಜನಾಂಗದ 10,263 ಜನರನ್ನು ನೋಂದಣಿ ಮಾಡಿದ್ದು, ಇವರಲ್ಲಿ 10,224 ಜನರನ್ನು ತಪಾಸಣೆ ಮಾಡಲಾಗಿದೆ. ಇವರಲ್ಲಿ 453 ಕ್ಯಾರಿಯರ್‍ಗಳು ಕಂಡುಬಂದಿದ್ದು, 34 ಪ್ರಕರಣಗಳು ಕುಡುಗೋಲು ಕಣದ ಕಾಯಿಲೆ ಪ್ರಕರಣಗಳೆಂದು ದೃಢಪಟ್ಟಿರುತ್ತವೆ ಎಂದರು.
ಮಕ್ಕಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಸಂಬಂಧಿಕರಿಗೆ ಈ ಕಾಯಿಲೆ ಇದ್ದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಆರೋಗ್ಯ ಸಿಬ್ಬಂಧಿಯವರಿಂದ ರಕ್ತಪರೀಕ್ಷೆ ಮಾಡಿಸಿ ಪತ್ತೆಹಚ್ಚಬಹುದು. ರೋಗ ಕಂಡುಬಂದಲ್ಲಿ ಎಲ್ಲಾ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರನ್ನು ರಕ್ತಪರೀಕ್ಷೆಗೆ ಒಳಪಡಿಸತಕ್ಕದ್ದು. ಕುಡಗೋಲು ಕಣದ ಕಾಯಿಲೆಯನ್ನು ಚಿಕಿತ್ಸೆ ಪಡೆಯಲು ನಿರ್ಲಕ್ಷಿಸಿದಲ್ಲಿ ಜೀವಕ್ಕೆ ಅಪಾಯವಾಗಬಹುದು ಎಂದು ತಿಳಿಸಿದರು.
ಗಿರಿಜನ ಅಭಿವೃದ್ಧಿ ಇಲಾಖೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಮಾತನಾಡಿ, ಜಿಲ್ಲೆಯಲ್ಲಿ 58 ಸಾವಿರಕ್ಕೂ ಹೆಚ್ಚಿನ ಗಿರಿಜನರಿದ್ದು, ಇವರುಗಳಿಗೆ ಕುಡಗೋಲು ಕಣ ರೋಗ ತಪಾಸಣೆ ಮಾಡಿಸಿಕೊಳ್ಳಲು ಸಹಕರಿಸಲು ಗಿರಿಜನ ಮುಖಂಡರಲ್ಲಿ ಮನವಿ ಮಾಡಿದರು ಹಾಗೂ ಇಲಾಖೆ ವತಿಯಿಂದ ಗಿರಿಜನರ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲು ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಸಭೆಗೆ ಆಗಮಿಸಿದ್ದ ಗಿರಿಜನ ಸಮುದಾಯದ ಮುಖಂಡರುಗಳಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಂಕಜಾ, ವನಬನ ವಿಕಾಸ ಕೇಂದ್ರ ಹಾಗೂ ಲ್ಯಾಂಪ್ ನಿರ್ದೇಶಕರಾದ ಪುಷ್ಪ ಜೆ.ಆರ್, ಗಿರಿಜನ ಮುಖಂಡರಾದ ರಾಜೀವ್, ನಿತಿನ್ ಸಭೆಯಲ್ಲಿ ಕುಡಗೋಲು ಕಣ ರೋಗ ತಪಾಸಣೆಗೆ ಸಮುದಾಯದಿಂದ ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ವಿಮಲ ಕೆ.ಜಿ ಅವರು ಮಾತನಾಡಿ ಜಿಲ್ಲೆಯಲ್ಲಿ ವಿಕಲಚೇತನರ ದೃಢೀಕರಣಕ್ಕೆ ಹಾಗೂ ಇಲಾಖೆ ವತಿಯಿಂದ ಲಭಿಸುವ ಸೌಲಭ್ಯಗಳ ಬಗ್ಗೆ ತಿಳಿಸಿದರು.
ಪ್ರಾಜೆಕ್ಟ್ ಚಂದನ ಭಾರತೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಡಾ.ಕಾವೇರಿ ಅವರು ಮಾತನಾಡಿ 5 ವರ್ಷದಿಂದ 45 ವರ್ಷದೊಳಗಿನ ಎಲ್ಲಾ ಗಿರಿಜನರು ತಪ್ಪದೇ ಕುಡುಗೋಲು ಕಣರೋಗದ ತಪಾಸಣೆ ಮಾಡಿಸಿಕೊಳ್ಳಬೇಕು. ಪ್ರಾರಂಭದಲ್ಲಿಯೇ ರೋಗ ಪತ್ತೆಹಚ್ಚಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸುತ್ತಾ, ಚಂದನ ಪ್ರಾಜೆಕ್ಟ್ ಬಗ್ಗೆ ಸವಿವರವಾಗಿ ತಿಳಿಸಿದರು.
ವಿರಾಜಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್, ಆರ್ಜಿ ಗ್ರಾ.ಪಂ.ಅಧ್ಯಕ್ಷರಾದ ಫಾತೀಮಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್. ಪಾಲಾಕ್ಷ, ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ  ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಗೂ 50 ಜನ ಗಿರಿಜನ ಮುಖಂಡರು ಸೇರಿದಂತೆ ಇತರರು ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.23 : ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.…

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.