Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಳಿಬೀಡು ನವೋದಯ ಶಾಲೆಯಲ್ಲಿ ಪರಿಸರ ಸಂಭ್ರಮ : ಜೀವನದಿ ಕಾವೇರಿ ಸಂರಕ್ಷಣೆ ನಮ್ಮ ಹೊಣೆ : ಪಿ.ಜಿ.ಆರ್.ಸಿಂಧ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಳಿಬೀಡು ನವೋದಯ ಶಾಲೆಯಲ್ಲಿ ಪರಿಸರ ಸಂಭ್ರಮ : ಜೀವನದಿ ಕಾವೇರಿ ಸಂರಕ್ಷಣೆ ನಮ್ಮ ಹೊಣೆ : ಪಿ.ಜಿ.ಆರ್.ಸಿಂಧ್ಯ*

ಜೂನ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಜೂ.24 NEWS DESK : ಉತ್ತಮ ಪರಿಸರ ಸಂರಕ್ಷಣೆ ಹಾಗೂ ಜೀವ ಸಂಕುಲದ ಉಳಿವಿಗೆ ಬೇಕಾದ ಶುದ್ಧ ಆಮ್ಲಜನಕ ಒದಗಿಸಿ ಪರಿಸರ ಸಮತೋಲನ ಕಾಪಾಡಿಕೊಂಡು ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದರು.
ಮಡಿಕೇರಿ ತಾಲ್ಲೂಕಿನ‌ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಅರಣ್ಯ ಇಲಾಖೆಯ ಮಡಿಕೇರಿ ವಲಯ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ
ಏರ್ಪಡಿಸಿದ್ದ ಪರಿಸರ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಸಸಿ ನೆಡುವ ಮೂಲಕ ವನ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊಡಗಿನಲ್ಲಿ ಉತ್ತಮ ಮಳೆ ಬಿದ್ದು ಜೀವನದಿ ಕಾವೇರಿ ತುಂಬಿ ಹರಿದರೆ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ನಾಡಿನ ಜನತೆಯ ನೀರಿನ ಬವಣೆ ಸಾಧ್ಯ. ಈ ದಿಸೆಯಲ್ಲಿ ಉತ್ತಮ ಮಳೆ ಪಡೆಯುವ ಸಲುವಾಗಿ ನಾವು ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಕೊಡಗಿನ ಅರಣ್ಯ, ಪರಿಸರ ಹಾಗೂ ಕಾವೇರಿ ನದಿಯನ್ನು ಸಂರಕ್ಷಿಸುವ ಮೂಲಕ ಇಡೀ ಜೀವ ಸಂಕುಲವನ್ನು ಸಂರಕ್ಷಿಸಬೇಕಿದೆ ಎಂದರು.
ಪ್ರಾಕೃತಿಕ ಸಂಪನ್ಮೂಲಗಳು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಹೊಣೆಯಾಗಿದೆ.
ಪ್ರತಿಯೊಬ್ಬರೂ ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತಮ್ಮನ್ನು ತೊಡಗಬೇಕು ಎಂದು ಪಿ.ಜಿ.ಆರ್.ಸಿಂಧ್ಯ ಮನವಿ ಮಾಡಿದರು.
ವಿದ್ಯಾರ್ಥಿ ಸಮುದಾಯ ಹಾಗೂ ಯುವ ಜನಾಂಗಕ್ಕೆ ಅರಣ್ಯ ಮತ್ತು ಪರಿಸರದ ಉಳಿವು ಹಾಗೂ ಅದರ ಮಹತ್ವವನ್ನು ತಿಳಿಸುವ ಸಲುವಾಗಿ ಇಂತಹ ಪರಿಸರ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದೆ ಎಂದರು.
ಪರಿಸರ ಜಾಗೃತಿ ಆಂದೋಲನದ ಕುರಿತು ಮಾತನಾಡಿ ಪರಿಸರ ಪ್ರತಿಜ್ಞೆ ಬೋಧಿಸಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ
ರಾಷ್ಟ್ರೀಯ ಹಸಿರು ಪಡೆಯ ಇಕೋ-ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮ ಕುಮಾರ್, ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವಿ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಶಾಲೆಯಲ್ಲಿ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ದಿಸೆಯಲ್ಲಿ ಸಂಘಟಿತ ಪ್ರಯತ್ನ ಅಗತ್ಯ ಎಂದರು.
ಪಶ್ಚಿಮಘಟ್ಟ ಪ್ರದೇಶದಲ್ಲಿನ ಜೀವ ವೈವಿಧ್ಯ ಸೂಕ್ಷ್ಮ ತಾಣಗಳಲ್ಲಿ ಅಪರೂಪದ ಸಸ್ಯ ಹಾಗೂ ಪ್ರಾಣಿ ವೈವಿಧ್ಯವಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರೂ ‌ಸಂಘಟಿತ ಪ್ರಯತ್ನ ಪಡಬೇಕು‌‌.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಕರು ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು.
ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್, ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆಯೂ ಆಗಿರುವ ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ, ಜಿಲ್ಲಾ ಸ್ಕೌಟ್ಸ್ ನ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ,ಸಂಸ್ಥೆಯ ಬೊಳ್ಳಜಿರ ಬಿ.ಅಯ್ಯಪ್ಪ,
ಗೈಡ್ಸ್ ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ,ಮಡಿಕೇರಿ ವಲಯದ ಡಿ ಆರ್ ಎಫ್ ಓ ಸುನಿಲ್ ಗುನಗಾ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ,ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಅಲೀಮ, ಉಷಾರಾಣಿ, ಶಿವಶಂಕರಪ್ಪ,ಟಿ.ಬಿ. ಕುಮಾರಸ್ವಾಮಿ, ಮೈಥಿಲಿರಾವ್, ಕೆ.ಯು.ರಂಜಿತ್, ವಾಮನ, ಸಿ.ಎಂ.ಸುಲೋಚನಾ, ಭೋಜಮ್ಮ, ವೀಣಾ , ಗಣೇಶ್, ಭೀಮಯ್ಯ, ಗ್ರಾ.ಪಂ.ಸದಸ್ಯ ಡೀನ್ ಬೋಪಣ್ಣ, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ.ಧನಂಜಯ, ಇತರರು ಇದ್ದರು.
ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ ಸುನಿಲ್ ಗುನಗಾ, ಅರಣ್ಯ ವೀಕ್ಷಕರಾದ ವಾಸುದೇವ್, ಮಹೇಶ್, ರವಿ ಶಿಕ್ಷಕರೊಂದಿಗೆ ಜತೆಗೂಡಿ 30 ಕ್ಕೂ
ನೆಡುವ ಕಾರ್ಯಕ್ರಮಕ್ಕೆ ಸಹಕರಿಸಿದರು.
ತರಬೇತಿ ನಿರತ ಶಿಕ್ಷಕರು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಪರಿಸರ ಘೋಷಣೆಗಳ ಫಲಕಗಳನ್ನು ಹಿಡಿದು ಪರಿಸರ ಘೋಷಣೆಗಳನ್ನು ಕೂಗಿದರು. ಹಸಿರೇ ಉಸಿರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪಶ್ಚಿಮಘಟ್ಟಗಳ ಸಂರಕ್ಷಣೆ ಎಲ್ಲರ ಹೊಣೆ, ಬೈಸಿಕಲ್ ಬಳಸಿ ಮಾಲಿನ್ಯ ತಡೆಯಿರಿ, ಜೀವನದಿ ಕಾವೇರಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.