Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿಯ ‘ಅಭಿವೃದ್ಧಿ ಶೂನ್ಯ’ ಟೀಕೆ ಅರ್ಥಹೀನ : ಕಾಂಗ್ರೆಸ್ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿಯ ‘ಅಭಿವೃದ್ಧಿ ಶೂನ್ಯ’ ಟೀಕೆ ಅರ್ಥಹೀನ : ಕಾಂಗ್ರೆಸ್ ಅಸಮಾಧಾನ*

ಜೂನ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ಜಿಲ್ಲೆಯ ಇಬ್ಬರು ಶಾಸಕರು ಕೇವಲ ಒಂದು ವರ್ಷದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 200 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯ ‘ಅಭಿವೃದ್ಧಿ ಶೂನ್ಯ’ ಟೀಕೆ ಅರ್ಥಹೀನವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆಯ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿರುವುದು ಬೇಸರದ ವಿಚಾರ. ಆರ್ಥಿಕ ಕ್ರೋಢೀಕರಣಕ್ಕೆ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ದರ ಹೆಚ್ಚಳ ಮಾಡುವುದು ಸರ್ವೇ ಸಾಮಾನ್ಯವೆಂದು ಅಭಿಪ್ರಾಯಪಟ್ಟರು.
ಚುನಾವಣೆ ಸಮೀಪಿಸುತ್ತಿರುವ ಹಂತಗಳಲ್ಲಿಯೂ ಇಂಧನ ದರ ಹೆಚ್ಚಳ ನಡೆದಿದೆ. ಕೇಂದ್ರ ಸರ್ಕಾರ ಸುಮಾರು 70 ರೂ. ಇದ್ದ ಇಂಧನ ದರ 100 ರೂ.ಗಳ ಗಡಿ ದಾಟಿಸಿದ ಹಂತದಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರತಿಕೃತಿ ದಹಿಸುವಂತಹ ಕಾರ್ಯಕ್ಕೆ ಮುಂದಾಗಿಲ್ಲವೆAದು ಸ್ಪಷ್ಟಪಡಿಸಿದರು.
ಜಿಲ್ಲೆಯ ನೂತನ ಶಾಸಕರಿಂದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಇಬ್ಬರು ಶಾಸಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಬೇಕು ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ. ಉದಾಹರಣೆಯಾಗಿ ತೆಗೆದುಕೊಳ್ಳುವುದಾದರೆ ಮದೆನಾಡು ವಿಭಾಗದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ರಸ್ತೆ ಕಾಮಗಾರಿಗೆ ನಾಲ್ಕು ಬಾರಿ ಭೂಮಿಪೂಜೆ ನಡೆದಿದ್ದರು ಕಾಮಗಾರಿ ಆರಂಭಗೊAಡಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 68 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆದಿರುವುದಾಗಿ ತಿಳಿಸಿದರು.
ಭಾಗಮಂಡಲ ಮೇಲುಸೇತುವೆ ಆರಂಭಕ್ಕೆ ಕಾರಣರಾದವರು ಮತ್ತು ಅದಕ್ಕೆ ಅಗತ್ಯ ನೆರವು ಒದಗಿಸಿದವರು ಅಂದು ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರು. ಯಾವುದೇ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಂತದಲ್ಲಿ ಯಾರು ಅಧಿಕಾರದಲ್ಲಿ ಇರುತ್ತಾರೋ ಅವರು ಅದರ ಉದ್ಘಾಟನೆ ಮಾಡುವುದು ಸಾಮಾನ್ಯವೆಂದರು. ಶಾಸಕರ ಪ್ರತಿಕೃತಿ ದಹಿಸಿದವರಿಗೆ ಒಳ್ಳೆಯ ಬುದ್ಧಿ ನೀಡುವಂತೆ ಭಾಗಮಂಡಲದಲ್ಲಿ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಿರುವುದಾಗಿ ಕೊಲ್ಯದ ಗಿರೀಶ್ ಇದೇ ಸಂದರ್ಭ ತಿಳಿಸಿದರು. ಕಾಂಗ್ರೆಸ್ ವೃತ್ತಿ ಘಟಕದ ಅಧ್ಯಕ್ಷ ನವೀನ್ ಅಂಬೆಕಲ್ಲು ಅವರು ಮಾತನಾಡಿ, ಕಾಂಗ್ರೆಸ್‌ನಿAದ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಆರೋಪಿಸುವ ಬಿಜೆಪಿಯೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸಿದ್ಧವಿದೆ ಎಂದರು.
ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪ್ರಮುಖ ಸುರೇಶ್ ಸಂಪಾಜೆ ಮಾತನಾಡಿ, ಇಬ್ಬರು ಶಾಸಕರ ಅಭಿವೃದ್ಧಿ ಕಾರ್ಯ ಮತ್ತು ಜನಪ್ರಿಯತೆಯನ್ನು ಸಹಿಸದ ಬಿಜೆಪಿಗರು ಪ್ರತಿಕೃತಿ ದಹನ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್ ದಾಸ್ ಹಾಗೂ ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.