Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ: ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
  • *ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*224 ಶಾಸಕರಲ್ಲಿ ಮೊದಲ 10 ಸ್ಥಾನಗಳಲ್ಲಿ ಎ.ಎಸ್.ಪೊನ್ನಣ್ಣ ಇದ್ದಾರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*224 ಶಾಸಕರಲ್ಲಿ ಮೊದಲ 10 ಸ್ಥಾನಗಳಲ್ಲಿ ಎ.ಎಸ್.ಪೊನ್ನಣ್ಣ ಇದ್ದಾರೆ*

ಜೂನ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.25 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ 57 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಆದರೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಕೇವಲ 500 ಕೋಟಿ ರೂ. ಆದಾಯ ಕ್ರೋಢೀಕರಣವಾಗುತ್ತದೆ. ಬಿಜೆಪಿ ವಿನಾಕಾರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ಮತ್ತು ಪ್ರತಿಭಟನೆ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ 22 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದಾಗ ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇರಲಿಲ್ಲವೇ, ಇವುಗಳ ಬೆಲೆಯನ್ನು ನೂರರ ಗಡಿ ದಾಟಿಸಿದವರು ಯಾರು ಎಂದು ಪ್ರಶ್ನಿಸಿದರು. ಅಂತರರಾಷ್ಟ್ರೀಯ ಬೆಲೆಯನ್ನು ಆಧರಿಸಿ ಕೇಂದ್ರ ಸರ್ಕಾರ ಪೆಟ್ರೋಲ್ ದರ ಲೀಟರ್ ಗೆ 50 ರೂ. ಮತ್ತು ಡೀಸೆಲ್ ಗೆ 45 ರೂ. ಎಂದು ನಿಗಧಿ ಮಾಡಬಹುದಾಗಿದೆ. ಆದರೆ ಕೆಲವು ಹೊರ ದೇಶಗಳಿಗೆ ಭಾರತ ರೂ.32 ಕ್ಕೆ ಪೆಟ್ರೋಲ್ ಸರಬರಾಜು ಮಾಡುತ್ತಿದೆ. ವಿದೇಶಿಯರ ಮೇಲೆ ಇರುವ ಕರುಣೆ ದೇಶದ ಜನರ ಮೇಲೆ ಯಾಕಿಲ್ಲ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ ಬೆಲೆ ಏರಿಕೆ ಮಾಡುತ್ತಿದೆ ಎಂದು ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. 2023 ರಲ್ಲೇ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ, ಕಾಂಗ್ರೆಸ್ ಪಕ್ಷ ಜನರಿಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದಿದೆಯೇ ಹೊರತು ರಾಜಕೀಯಕ್ಕಾಗಿ ಅಲ್ಲ. 2028 ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಲಕ್ಷ್ಮಣ್ ವಿಶ್ವಾಸ ವ್ಯಕ್ತಪಡಿಸಿದರು. ಸೋತ ನಂತರ ಒಂದು ವರ್ಷ ಬಿಲ ಸೇರಿಕೊಂಡಿದ್ದ ಕೊಡಗಿನ ಬಿಜೆಪಿ ಮಂದಿ ಈಗ ಹೊರ ಬರಲು ಆರಂಭಿಸಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಮೊದಲ 10 ಸ್ಥಾನಗಳಲ್ಲಿ ಪೊನ್ನಣ್ಣ ಅವರು ಇದ್ದಾರೆ. ಬೇಕಿದ್ದರೆ ಬಿಜೆಪಿಯವರು ಕೇಂದ್ರದ ಮೂಲಕ ಸಮೀಕ್ಷೆ ಮಾಡಿಸಲಿ. ಅಭಿವೃದ್ಧಿ ಪರ ಚಿಂತನೆಯ ಜನಪ್ರಿಯ ಶಾಸಕರ ಪ್ರತಿಕೃತಿ ದಹಿಸುವ ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲ ಎಂದು ಟೀಕಿಸಿದರು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದರು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಇಲ್ಲಿಯವರೆಗೆ ಚರ್ಚೆ ಆರಂಭಿಸಿಲ್ಲ. ಕನಿಷ್ಠ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಕ್ಕೂ ಬರಲಿಲ್ಲ ಎಂದು ಲಕ್ಷ್ಮಣ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ವಕ್ತಾರ ತೆನ್ನಿರ ಮೈನಾ, ಡಿಸಿಸಿ ಸದಸ್ಯ ಪುಷ್ಪಾ ಪೂಣಚ್ಚ, ಪ್ರಮುಖರಾದ ಮಹೇಶ್ ಮೈಸೂರು ಹಾಗೂ ಬಿ.ಎಂ.ರಾಮು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ: ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.27 NEWS DESK : ಪ್ರವಾಸಿಗರ ಕೇಂದ್ರ ಬಿಂದು ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ…

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.