Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಬದುಕು ರೂಪಿಸಿಕೊಳ್ಳಿ : ಎಸ್ಪಿ ಕೆ.ರಾಮರಾಜನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕೊಡಗು : ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಬದುಕು ರೂಪಿಸಿಕೊಳ್ಳಿ : ಎಸ್ಪಿ ಕೆ.ರಾಮರಾಜನ್ ಕರೆ*

ಜೂನ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK : ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕರೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಕಾವೇರಿ ಹಾಲ್‍ನಲ್ಲಿ ಬುಧವಾರ ನಡೆದ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರುದ್ಧ’ ಅಂತರ ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸಬೆಕು. ಮಾನವನ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಭವಿಷ್ಯದಲ್ಲಿ ಉತ್ತಮ ಗುರಿ ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗಾಬಾರದು. ಮಾದಕ ವಸ್ತುಗಳಿಗೆ ಅವಲಂಬಿತರಾದರೆ ಅದರಿಂದ ಪುನಃ ಹೊರಬರುವುದು ತುಂಬಾ ಕಷ್ಟ ಎಂದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 2023 ರಲ್ಲಿ 101 ಪ್ರಕರಣ ದಾಖಲಾಗಿದೆ. 89.217 ಕೆ.ಜಿ.ಗಾಂಜಾ, 154.26 ಗ್ರಾಂ. ಟ್ಯಾಬ್ಲೆಟ್, ಎಲ್‍ಎಸ್‍ಡಿ 9 ಬ್ಲಾಕ್ಸ್, 3.4 ಗ್ರಾಂ. ಕೊಕೆನ್ ವಶಕ್ಕೆ ಪಡೆಯಲಾಗಿದೆ. 2024 ರಲ್ಲಿ 31 ಪ್ರಕರಣ ದಾಖಲಾಗಿದ್ದು, 8.249 ಕೆ.ಜಿ.ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.
ಅಕ್ರಮವಾಗಿ ಮಾದಕ ವಸ್ತು ಬಳಕೆ, ಸೇವನೆ, ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಆ ನಿಟ್ಟಿನಲ್ಲಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಮಾತನಾಡಿ ಯುವಜನರಲ್ಲಿ ಮಾದಕ ವಸ್ತು ಮತ್ತು ಮಾನವ ಕಳ್ಳಸಾಗಣಿಕೆ ಹೆಚ್ಚುತ್ತಿದ್ದು, ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೇಲೆ ತೀವ್ರ ದುಷ್ಪಾರಿಣಾಮ ಬೀರುತ್ತಿದೆ. ಇವುಗಳನ್ನು ಹತ್ತಿಕ್ಕುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು, ವಿದ್ಯಾರ್ಥಿಗಳಿಗೆ ಈ ಹಂತದಲ್ಲಿ ಶಿಕ್ಷಣ, ಸಮಾಲೋಚನೆ, ಮಾರ್ಗದರ್ಶನ ಅತಿ ಅವಶ್ಯಕವಾಗಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಮಾತನಾಡಿ, ಯುವಜನರು ಮಾದಕ ವಸ್ತುಗಳಿಂದ ದೂರವಿರಲು ಪೋಷಕರೊಂದಿಗೆ ಸಮಾಲೋಚಿಸಬೇಕು. ತಮ್ಮ ಸಹಪಾಠಿಗಳು ಮಾದಕ ವಸ್ತುಗಳ ವ್ಯಸನಿಗಳಾಗಿದ್ದರೆ ಪೋಷಕರಿಗೆ ತಿಳಿಸಬೇಕು ಎಂದರು.
ಡಿವೈಎಸ್‍ಪಿ ಮಹೇಶ್ ಕುಮಾರ್ ಮಾತನಾಡಿ, ಮಾದಕ ವಸ್ತುಗಳ ಸೇವನೆಗೆ ತುತ್ತಾದಲ್ಲಿ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ಯುವ ಜನರು ಮಾದಕ ವಸ್ತು ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಾರೆ. ಈ ಪದಾರ್ಥಗಳನ್ನು ಬಳಸುವುದರಿಂದ ಮಾನಸಿಕ ಖಿನ್ನತೆ, ನಿದ್ರಾಹೀನತೆ ಸೇರಿದಂತೆ ಗಂಭೀರವಾದ ಮಾನಸಿಕ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಯುವಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದುಶ್ಚಟಗಳಿಂದ ದೂರವಿರುವಂತೆ ಸಲಹೆ ನೀಡಿದರು.
ಪೌರಾಯುಕ್ತ ವಿಜಯ್ ಮಾತನಾಡಿ, ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯವನ್ನು ಕುಂಠಿತಗೊಳಿಸುತ್ತದೆ. ಮಾದಕ ವಸ್ತುಗಳ ಬಳಕೆಗೆ ಇಳಿದವರು ದೈನಂದಿನ ಚಟುವಟಿಕೆಗಳಲ್ಲಿ ನಿರಾಸಕ್ತಿ, ಅನವಶ್ಯಕ ವಿವಾದಗಳನ್ನು ಸೃಷ್ಠಿಸುವುದು ಮೊದಲಾದ ಸಮಾಜ ವಿರೋಧಿ ಕಾರ್ಯಗಳಲ್ಲಿ ತೊಡಗುವುದು ಕಂಡು ಬರುತ್ತದೆ. ಆದ್ದರಿಂದ ಮಾದಕ ವಸ್ತುಗಳಿಂದ ದೂರವಿರಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಲಾವಿದ ರಾಜು ಮತ್ತು ತಂಡದವರಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಬೀದಿನಾಟಕ ಪ್ರದರ್ಶಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸದಾಶಿವ ಪಲ್ಲೇದ್, ಅಂಬೆಕಲ್ಲು ನವೀನ್, ರವೀಂದ್ರ ರೈ, ಇತರರು ಇದ್ದರು. ಮಡಿಕೇರಿ ನಗರ ಸಿಪಿಐ ಪಿ.ಕೆ.ರಾಜು ಸ್ವಾಗತಿಸಿದರು. ದೊರೇಶ್ ಬಿ.ಜಿ.ಪ್ರಾರ್ಥಿಸಿದರು. ದಿವ್ಯ ಮಂದಪ್ಪ ನಿರೂಪಿಸಿದರು. ಪಿಎಸ್‍ಐ ಲೋಕೇಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.