
ಸುಂಟಿಕೊಪ್ಪ ಜೂ.28 NEWS DESK : ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಚೇರಳ-ಶ್ರೀಮಂಗಲದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಫಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ.
ಗ್ರಾಮದ ನಿವಾಸಿ ಹೊಸಮನೆ ಪೂವಯ್ಯ ಅವರ ತೋಟಕ್ಕೆ ನುಗ್ಗಿರುವ 4 ಕಾಡಾನೆಗಳ ಹಿಂಡು ಅಡಿಕೆ, ಕಾಫಿಗಿಡಗಳನ್ನು ಧ್ವಂಸಗೊಳಿಸಿದೆ.
ಪ್ರತೀ ವರ್ಷ ಆನೆದಾಳಿಯಿಂದ ರೈತರು ಕಂಗಾಲಾಗಿದ್ದು, ಕಾಫಿ ತೋಟಗಳಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳು ಭಯಪಡುವಂತಾಗಿದೆ. ಅರಣ್ಯ ಅಧಿಕಾರಿಗಳು ಆನೆಗಳನ್ನು ಕಾಡಿಗಟ್ಟಬೇಕು ಮತ್ತು ಆನೆ ಕಂದಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದ ಗ್ರಾಮಸ್ಥರು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. 







