Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ :  ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ*
ಇತ್ತೀಚಿನ ಸುದ್ದಿಗಳು

*ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ :  ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ*

June 28, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನವದೆಹಲಿ, ಜೂ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748ಂ), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

• ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.

• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.

• ಮೈಸೂರು ರಿಂಗ್‌ ರಸ್ತೆಯಲ್ಲಿ ಓಊ-275ಏ ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

• ಬೆಳಗಾವಿ ನಗರದಲ್ಲಿ ಹಳೆ ಓಊ4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150ಂ ಯ ಒಂದು ಬಾರಿ ಸುಧಾರಣೆ.

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.

• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸ್ಥಗಿತವಾಗಿದ್ದ ಬಸ್ ಸೂರ್ಲಬ್ಬಿ ಗ್ರಾಮಸ್ಥರ ಪ್ರತಿಭಟನೆಯಿಂದ ಪುನರಾರಂಭ*
Next Article *ಮಾಗನೂರು ಬಸಪ್ಪ ದತ್ತಿ ಉಪನ್ಯಾಸ : ಕನ್ನಡ ಭಾಷೆಯ ಬೆಳವಣಿಗೆಗೆ ಶರಣರ ಕೊಡುಗೆ ಅಪಾರ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.