Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೆ.15 ರ ವರೆಗೆ ‘ಗ್ಲಾಸ್ ಬ್ರಿಡ್ಜ್’ ವೀಕ್ಷಣೆ ಸ್ಥಗಿತಗೊಳಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು

*ಸೆ.15 ರ ವರೆಗೆ ‘ಗ್ಲಾಸ್ ಬ್ರಿಡ್ಜ್’ ವೀಕ್ಷಣೆ ಸ್ಥಗಿತಗೊಳಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

June 29, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.29 NEWS DESK : ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ‘ಗ್ಲಾಸ್ ಬ್ರಿಡ್ಜ್’ಗಳನ್ನು ಸೆಪ್ಟೆಂಬರ್, 15 ರವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆಪ್ಟೆಂಬರ್, 15 ರವರೆಗೆ ಗ್ಲಾಸ್ ಬ್ರಿಡ್ಜ್ ಸ್ಥಗಿತ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ಸುರಕ್ಷತೆ ಇಲ್ಲದೆ ಗ್ಲಾಸ್ ಬ್ರಿಡ್ಜ್‍ಗಳ ನಿರ್ಮಾಣ ಮಾಡಲಾಗಿದೆ. ಸುರಕ್ಷತೆ ಇಲ್ಲದಿರುವ ಗ್ಲಾಸ್ ಬ್ರಿಡ್ಜ್‍ಗಳಿಗೆ ಪಿಡಿಒಗಳು ಹೇಗೆ ಎನ್‍ಒಸಿ ನೀಡುತ್ತಾರೆ. ಸಭೆಯ ನಡಾವಳಿ ಮಾಡಿಕೊಂಡು ಎನ್‍ಒಸಿ ನೀಡಿದರೆ ಸಾಕೆ, ಸುರಕ್ಷತೆ ಬೇಡವೇ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು.
ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ‘ಗ್ಲಾಸ್ ಬ್ರಿಡ್ಜ್’ ವೀಕ್ಷಣೆಗೆ ಭೇಟಿ ನೀಡುವುದರಿಂದ ಏನಾದರೂ ತೊಂದರೆಯಾದಲ್ಲಿ ಯಾರೂ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಪಂಚಾಯತ್ ರಾಜ್ ಅಧಿಕಾರಿಗಳಿಗೆ ಎಚ್ಚರಿಸಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.
ಜುಲೈ ಮೊದಲ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದ್ದು, ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯ ವರದಿಯನ್ನು ಜುಲೈ, 05 ರೊಳಗೆ ನೀಡಬೇಕು. ಬಾಕಿ ಕಾಮಗಾರಿಗಳ ಬಗ್ಗೆ ಅಧ್ಯಯನ ಮಾಡಿಕೊಂಡು ಸಭೆಗೆ ಹಾಜರಾಗಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಶಾಲೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಶಿಥಿಲ ವ್ಯವಸ್ಥೆಯಲ್ಲಿರುವ ಶಾಲೆಗಳ ಮಾಹಿತಿ ನೀಡಬೇಕು. ಈ ಸಂಬಂಧ ಅಗತ್ಯ ಕ್ರಮವಹಿಸುವಂತೆ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ರಸ್ತೆ ಸಾರಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು, ರಸ್ತೆಗಳ ಬಗ್ಗೆ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಂದ ದೂರು ಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಾಕೀತು ಮಾಡಿದರು.
ತಗ್ಗು ಪ್ರದೇಶದಲ್ಲಿ ಹೆಚ್ಚಿನ ಮಳೆಯಿಂದಾಗಿ ಮನೆಗೆ ನೀರು ನುಗ್ಗುವುದು ಸೇರಿದಂತೆ ಮಳೆಯಿಂದ ಉಂಟಾಗುವ ಹಾನಿಯ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು, ನಿಯಮಾನುಸಾರ ಪರಿಹಾರ ನೀಡಬೇಕು ಎಂದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾರೂ ಸಹ ಕೇಂದ್ರ ಸ್ಥಾನದಿಂದ ಹೊರಗೆ ಹೋಗಬಾರದು. ಸಮಸ್ಯೆಗಳಿದ್ದಲ್ಲಿ ಅನುಮತಿ ಪಡೆಯಬೇಕು. ಬೆಂಗಳೂರಿನಲ್ಲಿ ಸಭೆ ಇದೆ ಎಂದು ತೆರಳಬಾರದು. ಈ ಸಂಬಂಧ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿ ವಿನಾಯತಿ ಪಡೆಯಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಅಪಘಾತಗಳು ಸಂಭವಿಸಿದಲ್ಲಿ ದೂರುಗಳು ಕೇಳಿ ಬರುತ್ತದೆ. ಈ ಬಗ್ಗೆ ಮಾಹಿತಿ ಫಲಕಗಳನ್ನು ಅಳವಡಿಸಬೇಕು, ರಸ್ತೆಗಳನ್ನು ಸರಿಪಡಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ದಲಿತ ಸಂಘರ್ಷ ಸಮಿತಿಯಿಂದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ : ಡಾ.ಬಿ.ಸಿ.ನವೀನ್ ಕುಮಾರ್*
Next Article *ಜು.1 ರಂದು ಪತ್ರಿಕಾ ದಿನಾಚರಣೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.