Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೆನ್ನಿರ ಮೈನಾ ವಿರುದ್ಧ ಕಾನೂನು ಕ್ರಮಕ್ಕೆ ಮಡಿಕೇರಿ ನಗರ ಬಿಜೆಪಿ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೆನ್ನಿರ ಮೈನಾ ವಿರುದ್ಧ ಕಾನೂನು ಕ್ರಮಕ್ಕೆ ಮಡಿಕೇರಿ ನಗರ ಬಿಜೆಪಿ ಆಗ್ರಹ*

ಜೂನ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.29 NEWS DESK : ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ತೆನ್ನಿರ ಮೈನಾ ಎಂಬ ವ್ಯಕ್ತಿ ನಿರಂತರವಾಗಿ ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಮಡಿಕೇರಿ ನಗರ ಮಂಡಲ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ, ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ತೆನ್ನಿರಾ ಮೈನಾ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಅವಹೇಳನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನು ಹೆಂಡ ಕುಡಿದ ಕೋತಿಗಳು ಎಂದು ತೇಜೋವಧೆ ಮಾಡಿದ್ದು, ಇದರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಮುಜುಗರವಾಗಿದೆ ಮತ್ತು ಅವಮಾನವಾಗಿದೆ. ತೆನ್ನಿರ ಮೈನಾ ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಇವರ ಮೊಬೈಲ್ ಫೋನ್ ವಶಕ್ಕೆ ಪಡೆದಿಲ್ಲ ಎಂದು ಆರೋಪಿಸಿದರು.
ಕಳೆದ ಚುನಾವಣೆ ಸಂದರ್ಭ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಕಾಂಗ್ರೆಸ್‍ನ ಮೈನಾ ಅವರು ಸಮಾಜದಲ್ಲಿ ಅಶಾಂತಿ ಮೂಡಿಸುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದರು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಬಿಜೆಪಿಗೊಂದು ಕಾನೂನು ಕಾಂಗ್ರೆಸ್‍ಗೆ ಒಂದು ಕಾನೂನು ಇದೆಯೇ ಎಂದು ಉಮೇಶ್ ಸುಬ್ರಮಣಿ ಪ್ರಶ್ನಿಸಿದರು.
ಪ್ರಚೋದನಾಕಾರಿ ಸಂದೇಶ ರವಾನಿಸುತ್ತಿರುವ ತೆನ್ನಿರ ಮೈನಾ ಅವರ ವಿರುದ್ಧ ಸೈಬರ್ ಅಪರಾಧ ಪ್ರಕರಣ ದಾಖಲಿಸಿಕೊಳ್ಳಬೇಕು ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದರು.
::: ಮಗುವನ್ನು ಚಿವುಟಿದ್ದಾರೆ :::
ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮಗುವನ್ನು ಚಿವುಟಿ ಸಮಾಧಾನಪಡಿಸುವ ಯತ್ನ ಮಾಡಿದ್ದಾರೆ. ಶಾಸಕರ ಕುಮ್ಮಕ್ಕಿನಿಂದಲೇ ಕಾಂಗ್ರೆಸಿಗರು ಬಿಜೆಪಿ ಕಾರ್ಯಕರ್ತರ ತೇಜೋವಧೆ ಮಾಡಿದ್ದಾರೆ. ಅಲ್ಲದೆ, ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ಪೊಲೀಸರು ವಿನಾಕರಣ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ಪೂರ್ಣಗೊಳಿಸಲಿ ಎಂದು ಶಾಸಕರು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ. ಪೊಲೀಸರೇ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿರುವುದರಿಂದ ಸರ್ಕಾರವೇ ಇದನ್ನು ಸುಖಾಂತ್ಯಗೊಳಿಸಬೇಕೆ ಹೊರತು ಪೊಲೀಸರಿಂದ ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡಿರುವ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿರುವುದು ಖಂಡನೀಯ ಎಂದು ಉಮೇಶ್ ಸುಬ್ರಮಣಿ ಹೇಳಿದರು.
ಕಾಂಗ್ರೆಸ್‍ನ ಬೆದರಿಕೆ ತಂತ್ರಗಳಿಗೆ ಬಿಜೆಪಿ ಎಂದಿಗೂ ಮಣಿಯುವುದಿಲ್ಲ. ಬಿಜೆಪಿಯ ಜನಪರ ಹೋರಾಟ ಇನ್ನು ಮುಂದೆಯೂ ಮುಂದುವರೆಯಲಿದೆ ಎಂದರು.
ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ಲೋಕಸಭೆ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದನ್ನು ಸಹಿಸದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್ ಹಾಗೂ ಹಾಲಿನ ಬೆಲೆಯನ್ನು ಏರಿಕೆ ಮಾಡಿ ಜನರ ಮೇಲೆ ಗದಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿದರು.
ಬೆಲೆ ಏರಿಕೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ, ಸರ್ಕಾರ ತನ್ನ ಧೋರಣೆಯನ್ನು ಬದಲಾಯಿಸಿಕೊಳ್ಳದಿದ್ದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುವುದು. ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದ್ದು, ಮುಖ್ಯಮಂತ್ರಿಗಳು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ, ಯುವ ಮೋರ್ಚಾ ಅಧ್ಯಕ್ಷ ಪಾಂಡಿರ ಪೂಣಚ್ಚ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪಿ.ಜಿ.ಗಜೇಂದ್ರ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿ.ಬಿ.ಸೌಮ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ. 22: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ…

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.