Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಕ್ಕಬ್ಬೆಯಲ್ಲಿ ಸಿಎನ್‍ಸಿಯಿಂದ ಜನಜಾಗೃತಿ ಮಾನವ ಸರಪಳಿ : ವಾಣಿಜ್ಯ ದುರುದ್ದೇಶಕ್ಕೆ ಕೊಡವ ಲ್ಯಾಂಡ್ ದುರ್ಬಳಕೆ : ಎನ್.ಯು.ನಾಚಪ್ಪ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಕ್ಕಬ್ಬೆಯಲ್ಲಿ ಸಿಎನ್‍ಸಿಯಿಂದ ಜನಜಾಗೃತಿ ಮಾನವ ಸರಪಳಿ : ವಾಣಿಜ್ಯ ದುರುದ್ದೇಶಕ್ಕೆ ಕೊಡವ ಲ್ಯಾಂಡ್ ದುರ್ಬಳಕೆ : ಎನ್.ಯು.ನಾಚಪ್ಪ ಆರೋಪ*

ಜುಲೈ 1, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.1 NEWS DESK : ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ವಾಣಿಜ್ಯ ದುರುದ್ದೇಶಕ್ಕಾಗಿ ಆದಿಮಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಕಪ್ಪು ಹಣ ಚಲಾವಣೆಯಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ.
ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್‍ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ವಿಶ್ವದಾದ್ಯಂತ ಇರುವ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡಲು ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ರೆಸಾರ್ಟ್ ವ್ಯವಹಾರ ದೊಡ್ಡ ಮಟ್ಟದಲ್ಲಿ ನಡೆಯದಿದ್ದರೂ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಾಡಲಾಗುತ್ತಿದೆ. ನಷ್ಟ ತೋರಿಸುವುದಕ್ಕಾಗಿ ರೆಸಾರ್ಟ್‍ಗಳನ್ನು ನಿರ್ಮಿಸುತ್ತಿದ್ದು, ಕಪ್ಪು ಹಣವನ್ನು ಚಲಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಅಕ್ರಮ ದಂಧೆಕೋರ ಬಂಡವಾಳಶಾಹಿ ಕಂಪೆನಿಗಳು ಕಾನೂನು ದುರುಪಯೋಗ ಪಡಿಸಿಕೊಂಡು ರಾತೋರಾತ್ರಿ ಪ್ರಭಾವ ಬೀರಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗಾಗಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ದಂಧೆಕೋರರಿಗೆ ಮಾರ್ಗ ತೋರಿಸುತ್ತಿದೆ. ಜಮೀನನ್ನು ಒಟ್ಟಾಗಿ ಖರೀದಿಸದೆ ಬಿಡಿ ಬಿಡಿಯಾಗಿ ಬೇನಾಮಿ ಹೆಸರಿನಲ್ಲಿ ಖರೀದಿಸಿ ನಂತರ ಭೂಪರಿವರ್ತನೆ ಮಾಡಿಸಿಕೊಳ್ಳುತ್ತಿದ್ದಾರೆ. ವಾಣಿಜ್ಯ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್ ಗಳಿಂದ ಸುಲಭವಾಗಿ ಸಾಲ ಪಡೆಯುವ ಬಂಡವಾಳಶಾಹಿಗಳು ರೆಸಾರ್ಟ್, ವಿಲ್ಲಾಗಳನ್ನು ನಿರ್ಮಿಸುತ್ತಿದ್ದಾರೆ. ಆದರೆ ಸ್ಥಳೀಯರು ಕೇವಲ ಸ್ವಂತ ಮನೆ ಕಟ್ಟಲು ಅನುಮತಿಗಾಗಿ ಕಚೇರಿಯಿಂದ ಕಚೇರಿಗೆ ವರ್ಷಗಟ್ಟಲೆ ಅಲೆಯಬೇಕಾಗಿದೆ. ಜಿಲ್ಲೆಯ ಇತರೆಡೆಯಂತೆ ಕಕ್ಕಬ್ಬೆ ನಾಲಡಿ ಭಾಗದಲ್ಲಿ 300 ಎಕರೆ ಜಾಗವನ್ನು ಭೂಪರಿವರ್ತನೆ ಮಾಡಲು ಹುನ್ನಾರ ನಡೆದಿದೆ. ಜನರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರೂ ದೆಹಲಿ ಮತ್ತು ಮುಂಬೈ ಭಾಗದ ರಾಜಕೀಯ ಸಂಕುಲಗಳು ಭೂಮಾಫಿಯಾದ ಪರವಾಗಿ ರೆಸಾರ್ಟ್ ನಿರ್ಮಾಣದ ಅನುಮತಿಗೆ ಪ್ರಭಾವ ಬೀರುತ್ತಿದ್ದಾರೆ. ಮರಂದೋಡು ಗ್ರಾಮದ ಭತ್ತದ ಗದ್ದೆ ಮತ್ತು ಪರ್ವತ ಕೊರೆದು ಟೌನ್ ಶಿಪ್ ಗಾಗಿ ಭೂಪರಿವರ್ತನೆಯಾಗುತ್ತಿದ್ದು, ಕೊಡವ ಲ್ಯಾಂಡ್ ನ ಕಾವೇರಿ ಒಡಲು ನಾಶವಾಗುತ್ತಿದೆ ಎಂದು ನಾಚಪ್ಪ ಆರೋಪಿಸಿದರು.
ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ.
ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾಟ್ರ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಸೇರಿದಂತೆ ವಾಣಜ್ಯ ಉದ್ದೇಶದ ಯೋಜನೆಗಳು ತಯಾರಾಗುತ್ತಿದೆ. ಇದು ಪವಿತ್ರ ಕೊಡವ ಲ್ಯಾಂಡ್ ನ ನಾಶಕ್ಕೆ ಕಾರಣವಾಗಬಹುದು.
ಕಾನೂನಿನ ಚೌಕಟ್ಟಿನಿಂದ ತಪ್ಪಿಸಿಕೊಳ್ಳಲು ಕಾಫಿ ತೋಟವನ್ನು ಸಂಪೂರ್ಣವಾಗಿ ಖರೀದಿಸಿ ನಿವೇಶನಗಳನ್ನಾಗಿ ಮಾರಾಟ ಮಾಡಿದ ನಂತರ ಭೂಪರಿರ್ತನೆಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಇಡೀ ಕಾಫಿ ತೋಟದ ಭೂಪರಿವರ್ತನೆಗೆ ಮುಂದಾದರೆ ಕಾನೂನಿನ ಅಡ್ಡಿ ಮಾತ್ರವಲ್ಲ ಹೋರಾಟಗಳು ನಡೆಯುತ್ತವೆ ಎನ್ನುವ ಆತಂಕ ಭೂಮಾಪಿಯಾಗಳಿಗಿದೆ.
ಸರ್ಕಾರಗಳು ಡಾ.ಸ್ವಾಮಿನಾಥನ್ ಸಮಿತಿಯ ವರದಿಯನ್ನು ಉಲ್ಲಂಘಿಸಿವೆ. ಸ್ವಾಮಿನಾಥನ್ ತಮ್ಮ ವರದಿಯಲ್ಲಿ ಕೃಷಿಭೂಮಿಯನ್ನು ಹಾಗೆಯೇ ಉಳಿಸಿಕೊಳ್ಳಲು ಶಿಫಾರಸ್ಸು ಮಾಡಿದ್ದಾರೆ. ಲಭ್ಯವಿರುವ ಕೃಷಿಭೂಮಿಯ ಪ್ರಮಾಣ ಕಡಿಮೆಯಾದಂತೆ ಗ್ರಾಹಕರಿಗೆ ಲಭ್ಯವಿರುವ ಆಹಾರದ ಗುಣಮಟ್ಟ ಕಡಿಮೆಯಾಗುತ್ತದೆ. ಇದು ಆರ್ಥಿಕತೆಗೆ ಮಾತ್ರವಲ್ಲದೆ ಆರೋಗ್ಯದ ಮೇಲೆ ಹಾನಿ ಮಾಡುತ್ತದೆ. ಆರ್ಟಿಕಲ್ 51(ಎ), 51ಎ (ಎಫ್) – ನಮ್ಮ ಸಂಸ್ಕøತಿಯ ಶ್ರೀಮಂತ ಪರಂಪರೆಯನ್ನು ಮೌಲ್ಯೀಕರಿಸಲು ಮತ್ತು ಸಂರಕ್ಷಿಸಲು, 51ಎ(ಜಿ)-ಕಾಡುಗಳು, ಸರೋವರಗಳು, ನದಿಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡಂತೆ ನೈಸರ್ಗಿಕ ಆರ್ಥಿಕತೆಯನ್ನು ಮೌಲ್ಯೀಕರಿಸಲು, ರಕ್ಷಿಸಲು, ಸುಧಾರಿಸಲು ಮತ್ತು ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಲು, 51ಎ(ಎನ್)-ವೈಜ್ಞಾನಿಕ ಮನೋಭಾವ, ಮಾನವತಾವಾದ, ವಿಚಾರಣೆ ಮತ್ತು ಸುಧಾರಣೆಯ ಮನೋಭಾವವನ್ನು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ.
ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಕುಟ್ಟ-ಶ್ರೀಮಂಗಲದಲ್ಲಿ ಉದ್ದೇಶಿತ ಪಟ್ಟಣಗಳು ಮತ್ತು ಆರ್ಥಿಕ ಕಾರಿಡಾರ್‍ಗಳಿಗಾಗಿ ಭೂಮಿಯನ್ನು ಜೂಜಾಟದ ರೀತಿಯಲ್ಲಿ ಖರೀದಿಸಲಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೈ, ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಮತ್ತು ರಾಜಕೀಯ ಸಂಯೋಜಿತ ಗುಂಪುಗಳು ಈ ಕಾರ್ಯದಲ್ಲಿ ತೊಡಗಿವೆ. ಶ್ರೀಮಂಗಲ ಮತ್ತು ಕುಟ್ಟ ಭಾಗದಲ್ಲಿ ಗಡಿ ಜಿಲ್ಲೆ ಹಾಗೂ ಗಡಿರಾಜ್ಯದ ಮತ ಬ್ಯಾಂಕ್ ಗಳನ್ನು ಸೆಳೆಯುವ ದೊಡ್ಡ ಷಡ್ಯಂತ್ರವೂ ನಡೆಯುತ್ತಿದೆ ಎಂದು ನಾಚಪ್ಪ ಆರೋಪಿಸಿದರು.
ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವೆಂದು ತಿಳಿಸಿದರು.
ನಮ್ಮ ಅನುವಂಶಿಕ ಭೂಮಿಯನ್ನು ಉಳಿಸಿಕೊಳ್ಳಲು, ಮಾತೃಭೂಮಿ, ಶಾಶ್ವತವಾದ ದೀರ್ಘಕಾಲಿಕ ಜಲಸಂಪನ್ಮೂಲಗಳು, ನಯನ ಮನೋಹರ ಪರಿಸರ, ಭೂಗೋಳವನ್ನು ನೈಸರ್ಗಿಕವಾಗಿ ವಿಹಂಗಮ ಪರ್ವತಗಳು, ಬೆಟ್ಟಗಳು, ನಿತ್ಯಹರಿದ್ವರ್ಣದ ಸಸ್ಯ ಮತ್ತು ಪ್ರಾಣಿ ಸಂಕುಲಗಳು ಜೈವಿಕ ವೈವಿಧ್ಯತೆ, ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಜಾನಪದ ಪರಂಪರೆ ಮತ್ತು ಭೂಮಿಯೊಂದಿಗೆ ಬೆಸೆದುಕೊಂಡಿರುವ ಕೊಡವರ ಯೋಧರ ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ. ಈ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಗಾಗಿ ಸ್ವಯಂ-ಆಡಳಿತವನ್ನು ಸಂವಿಧಾನದ ವಿಧಿ 244, 371 ಆರ್/ಡಬ್ಲ್ಯೂ 6 ಮತ್ತು 8ನೇ ಶೆಡ್ಯೂಲ್ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳು ವಿಶ್ವ ರಾಷ್ಟ್ರ ಸಂಸ್ಥೆ ಹೊರಡಿಸಿರುವ ಆದಿಮಸಂಜಾತ ಜನಾಂಗದ ಹಕ್ಕುಗಳ ಅಂತರಾಷ್ಟ್ರೀಯ ಕಾನೂನಿನಂತೆ ಜಾರಿಯಾಗುವ ಅಗತ್ಯವಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಅಗತ್ಯವಾಗಿದ್ದು, ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.
ಅಪ್ಪಾರಂಡ ನಂದಿನಿ ನಂಜಪ್ಪ, ನಾಟೋಳಂಡ ಕಮಲಾ, ಅರೆಯಡ ಸವಿತಾ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಾಂಡಂಡ ನರೇಶ್, ಕೆಟೋಳಿರ ಸನ್ನಿ ಸೊಮಣ್ಣ, ಬಾಚಮಂಡ ರಾಜಾ ಪೂವಣ್ಣ, ಚೇನಂಡ ಸುರೇಶ್, ಅಪ್ಪಾರಂಡ ಶ್ರೀನಿವಾಸ್, ಉದಿಯಂಡ ಸುಭಾಷ್, ಅಪ್ಪಾರಂಡ ಪ್ರಕಾಶ್, ಕಲ್ಯಾಟಂಡ ರಘು, ಅರೆಯಡ ಗಿರೀಶ್, ಅಪ್ಪಾರಂಡ ಪ್ರಸಾದ್, ಅಪ್ಪಾರಂಡ ದೇವಯ್ಯ, ಅಪ್ಪಾರಂಡ ವಿಜು, ನಾಟೋಳಂಡ ನಂಜುಂಡ, ಕಲ್ಯಾಟಂಡ ಅರುಣ್, ಕಲ್ಯಾಟಂಡ ಸುಧಾ, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಪರದಂಡ ಕಸ್ತೂರಿ, ಅರೆಯಡ ಅಶೋಕ್, ಅಂಜಪರವಂಡ ರಂಜು, ನಾಟೋಳಂಡ ಶಂಬು, ಮಂಡೀರ ಮಿಥುನ್, ಅಯ್ಯನೆರವಂಡ ಬಾಬಿ, ಪಾಡಿಯಂಡ ಶರಣು, ಬಾಚಮಂಡ ಲವ, ಪೊನ್ನೊಲತಂಡ ರಘು, ಬಾಚಮಂಡ ಭರತ್, ಮಂಡೀರ ರಿಪನ್, ಕೋಡಿಮಣಿಯಂಡ ಕುಟ್ಟಪ್ಪ, ಕೋಡಿಮಣಿಯಂಡ ಶಂಭು, ಕಂಬೆಯಂಡ ಸುಬ್ರಮಣಿ, ಅಲ್ಲರಂಡ ಸತೀಶ್, ಅಲ್ಲರಂಡ ಕಾವೇರಪ್ಪ, ಕಲಿಯಂಡ ಡಾಲಿ, ಕೋಡಿಮಣಿಯಂಡ ಗಪ್ಪು, ಕಲಿಯಂಡ ರಾಜ, ಬಟ್ಟೀರ ರಮೇಶ್, ಕೋಟೆರ ಚಿಮ್ಮ, ಕೋಡಿಮಣಿಯಂಡ ರಮೇಶ್, ಪೊನ್ನೊಲತಂಡ ಬಿದ್ದಯ್ಯ, ಪಾಲೆಕಂಡ ಪ್ರತಾಪ್, ಚೋಯಮಾಡಂಡ ಹರಿ, ಮಾದಂಡ ಅಪ್ಪಯ್ಯ, ಅರೆಯಡ ಸೋಮಣ್ಣ, ಕಂಬೆಯಂಡ ದೊರೆ, ಬಾಚಮಂಡ ಬೆಲ್ಲು ಪೂವಪ್ಪ ಮತ್ತಿತರರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಹಾಗೂ ಕೊಡವ ಲ್ಯಾಂಡ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಜು.6 ರಂದು ಚೆಟ್ಟಳ್ಳಿ ಮತ್ತು ಜು.15 ರಂದು ಪೊನ್ನಂಪೇಟೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.