Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿವೇಶನಕ್ಕಾಗಿ ಆಗ್ರಹಿಸಿ ಪ್ರತಿಭಟನೆ : ನಿರಂತರ ಹೋರಾಟದ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿವೇಶನಕ್ಕಾಗಿ ಆಗ್ರಹಿಸಿ ಪ್ರತಿಭಟನೆ : ನಿರಂತರ ಹೋರಾಟದ ಎಚ್ಚರಿಕೆ*

ಜುಲೈ 3, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.3 NEWS DESK : ಬುಡಕಟ್ಟು ಜನಾಂಗದ ಕುಟುಂಬಗಳನ್ನು ಲೈನ್ ಮನೆಗಳಿಂದ ಮುಕ್ತಗೊಳಿಸಬೇಕು ಮತ್ತು ಸ್ವಂತ ವಸತಿಗಾಗಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹೊಸೂರು ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸಿತು.
ಮಳೆಯ ನಡುವೆ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕರು ಪ್ರತಿಭಟನೆ ನಡೆಸಿ ಲೈನ್ ಮನೆ ಜೀವನ ಬೇಡ, ಸ್ವಂತಮನೆ ನಿರ್ಮಿಸಿಕೊಳ್ಳಲು ಸರ್ಕಾರ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.
ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡುವಿನಲ್ಲಿ ನಿವೇಶನ ರಹಿತರಿಗೆ ವಿತರಿಸಲು ಭೂಮಿ ಲಭ್ಯವಿದೆ. ಈ ಭೂಮಿಯನ್ನು ಹೊಸೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ಗಪ್ಪು ಮಾತನಾಡಿ, ಕಾಫಿತೋಟಗಳ ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕಳೆದ 9 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಾ ಬರಲಾಗಿದೆ. ಆದರೆ ಕೇವಲ ಆಶ್ವಾಸನೆ ನೀಡುತ್ತಾ ಬಂದಿರುವ ಅಧಿಕಾರಿಗಳು ನಮ್ಮ ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಿವೇಶನದ ಬೇಡಿಕೆ ಈಡೇರುವವರೆಗೂ ನಿರಂತರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಸಂಘಟನೆಯ ಪ್ರಮುಖರಾದ ಭವ್ಯ ಮಾತನಾಡಿ, ಬುಡಕಟ್ಟು ಕುಟುಂಬಗಳಿಗೆ ನಿವೇಶನಕ್ಕಾಗಿ ಆಗ್ರಹಿಸಿ ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಕಚೇರಿ ಎದುರು ಈ ಹಿಂದೆ 8 ತಿಂಗಳ ಕಾಲ ಅಹೋರಾತ್ರಿ ಧರಣಿ ನಡೆಸಿದ ಸಂದರ್ಭ ಅಧಿಕಾರಿಗಳು ನಿವೇಶನ ಒದಗಿಸುವ ಭರವಸೆ ನೀಡಿದ್ದರು, ಆದರೆ ಇಲ್ಲಿಯವರೆಗೆ ಭರವಸೆ ಈಡೇರಿಲ್ಲ ಎಂದು ಆರೋಪಿಸಿದರು.
ಪೊನ್ನಂಪೇಟೆ ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ನಿವೇಶನದ ಹಕ್ಕು ಪತ್ರ ಮತ್ತು ವಸತಿ ಮಂಜೂರು ಆಗುವವರೆಗೆ ನಿರಂತರ ಹೋರಾಟ ನಡೆಸಲಾಗುವುದು ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.