Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ವಾಡಿಕೆಯಂತೆ ಸರಾಸರಿ ಮಳೆ : ಅಗತ್ಯ ಮುನ್ನೆಚ್ಚರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ವಾಡಿಕೆಯಂತೆ ಸರಾಸರಿ ಮಳೆ : ಅಗತ್ಯ ಮುನ್ನೆಚ್ಚರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಜುಲೈ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 NEWS DESK : ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬಂಧ ಮಾಹಿತಿ ಪಡೆಯುವುದರ ಜೊತೆಗೆ, ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸೂಚಿಸಿದರು.
ತಹಶೀಲ್ದಾರರು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಹವಾಮಾನ ಮುನ್ಸೂಚನೆ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ಹಂಚಿಕೊಳ್ಳಬೇಕು. ತಮ್ಮ ಹಾಗೂ ತಾಪಂ.ಇಒ ಹಂತದಲ್ಲಿ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಹಾಗೆಯೇ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ಸಭೆಗಳನ್ನು ಮಾಡಿ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಬೇಕು ಎಂದರು.
ಹೆಚ್ಚಿನ ಮಳೆಯಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆಗೆ ಸಂಬಂಧಿಸಿದಂತೆ ಡಿಡಿಪಿಐ ಅವರಿಗೆ ಮಾಹಿತಿ ನೀಡಬೇಕು. ಡಿಡಿಪಿಐ ಅವರು ರಜೆ ಘೋಷಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಕ್ರಮವಹಿಸಬೇಕು ಎಂದರು.
ಪ್ರಾಕೃತಿಕ ವಿಕೋಪ ಎದುರಿಸುವ ಸಂಬಂಧ ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ ಇತರರ ಜೊತೆಗೂಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ‘ಪ್ರಾತ್ಯಕ್ಷಿಕೆ’ ಏರ್ಪಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಎಚ್ಚರವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಅತೀವೃಷ್ಟಿ ಉಂಟಾಗದಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.
ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕು ಎಂದು ಮಾಹಿತಿ ಇರಬೇಕು. ಅಂತಹ ಸಮಯದಲ್ಲಿ ಹೆಚ್ಚಿನ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ಎಚ್ಚರವಹಿಸಬೇಕು. ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಸದಾ ಎಚ್ಚರವಹಿಸಬೇಕು. ಈ ಬಗ್ಗೆ ಜಲಾಶಯಗಳು, ನದಿಗಳಿಗೆ ಯಾರೂ ಸಹ ತೆರಳದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಅಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು. ಮಾಹಿತಿ ಫಲಕ ಅಳವಡಿಸಬೇಕು ಎಂದು ವೆಂಕಟ್ ರಾಜಾ ಅವರು ಹೇಳಿದರು.
ಕಳೆದ 2018 ರಿಂದ ಮೂರು ವರ್ಷದ ಅವಧಿಯಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಕರೆ ಮಾಡಿದಾಗ ಸ್ವೀಕರಿಸಬೇಕು. ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ ತಹಶೀಲ್ದಾರರು ಕಾಲ ಕಾಲಕ್ಕೆ ಮಾಹಿತಿ ನೀಡುವುದು ಸಹ ಅತೀ ಮುಖ್ಯವಾಗಿದೆ ಎಂದರು.
ರಸ್ತೆ ಬದಿಗೆ ಮರ ಹಾಗೂ ವಿದ್ಯುತ್ ಕಂಬ ಬಿದ್ದಲ್ಲಿ ಸಕಾಲದಲ್ಲಿ ತೆರವುಗೊಳಿಸುತ್ತಿದ್ದಾರೆ. ಹಾಗೆಯೇ ಬರೆ ಕುಸಿತ ಉಂಟಾದಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಸಾರಿಗೆ ಸಂಪರ್ಕ ಮತ್ತಿತರ ವ್ಯತ್ಯಯಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕಾರ್ಯವಾಗಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜುಲೈ ಅಂತ್ಯದೊಳಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕೆಡಿಪಿ ಸಭೆಗೆ ಸಿದ್ಧತೆ ಕೈಗೊಂಡಿರುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.