Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ : ಹಲವು ಸಮಸ್ಯೆ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ : ಹಲವು ಸಮಸ್ಯೆ ಅನಾವರಣ*

ಜುಲೈ 5, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಾವದಾನದಿಂದ ಸಂವಾದ ನಡೆಸಿದರು.
ಆರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾತನಾಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತುಂಬಾ ದೂರವಿದ್ದು, ಬಸ್ ಸೌಲಭ್ಯ ಸಮರ್ಪಕವಾಗಿಲ್ಲದೆ ಕಠಿಣ ಪರಿಸ್ಥಿತಿಯನ್ನು ಪ್ರತಿನಿತ್ಯ ಎದುರಿಸುತ್ತಿದ್ದು, ಈ ಸಂಬಂಧ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಅಂತರ್ಜಾಲ ಸಂಪರ್ಕವಿಲ್ಲದೆ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ತುಂಬಾ ತೊಂದರೆಯಾಗಿದೆ. ಈಗಿರುವ ವೈಫೈ ಸೇವೆ ಒಂದು ಅಥವಾ ಎರಡು ಕೊಠಡಿಗೆ ಸಾಲುವುದಿಲ್ಲ. ಆದ್ದರಿಂದ ಟವರ್ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಆರ್.ಶರಣಪ್ರಕಾಶ ಪಾಟೀಲ ಅವರು ಸದ್ಯ ವೈಪೈ ಸೇವೆಯನ್ನು ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಸೌಲಭ್ಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುಡ್ಡಗಾಡು ಪ್ರದೇಶವಾಗಿರುವುದರಿಂದ ಕೆಲವೊಂದು ಕೊರತೆಗಳನ್ನು ಎದುರಿಸಬೇಕಿದ್ದು, ಸಾಧ್ಯವಾದಷ್ಟು ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದರು.
ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಟದ ಮೈದಾನ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಯೊಬ್ಬರು ಗಮನ ಸೆಳೆದರು.
ಜಾಗ ವಿಶಾಲವಾಗಿ ಇರದಿರುವುದರಿಂದ ಸದ್ಯ ಬಾಸ್ಕೇಟ್ ಬಾಲ್, ವಾಲಿಬಾಲ್, ಇಂತಹ ಆಟಗಳನ್ನು ಆಡಲು ಅಗತ್ಯ ಜಾಗ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಲೇಜಿನ ಆವರಣದಲ್ಲಿ ಕನಿಷ್ಠ 100*100 ಆಟದ ಮೈದಾನ ನಿರ್ಮಾಣ ಮಾಡಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ವೈದ್ಯಕೀಯ ಕಾಲೇಜಿನಲ್ಲಿ ಕುಡಿಯುವ ನೀರಿನ ಸಂಪರ್ಕ ಸಮರ್ಪಕವಾಗಿಲ್ಲ. ಬೇಸಿಗೆ ಸಂದರ್ಭದಲ್ಲಂತೂ ತುಂಬಾ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬರು ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವುದರಿಂದ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಸದ್ಯ ಹೊಸ ಬೋರ್‍ವೆಲ್ ಅನ್ನು ನಾಳೆಯೇ ಕೊರೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ಮಾತನಾಡಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು. ವಿದ್ಯಾರ್ಥಿ ನಿಲಯ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.
ಹಾಗೆಯೇ ನರ್ಸಿಂಗ್ ಶಿಕ್ಷಣದಲ್ಲಿ ಬೋಧಕರ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಬೇಕು ಎಂದು ವಿದ್ಯಾರ್ಥಿಯೊಬ್ಬರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಆವರಣದಲ್ಲಿ ಪ್ರಾವಿಜನ್ ಸ್ಟೋರ್ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿಯೊಬ್ಬರು ಗಮನ ಸೆಳೆದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರು ಕೆಎಂಎಫ್ ಮಳಿಗೆ ತೆರೆಯಲು ಅವಕಾಶ ಮಾಡುವಂತೆ ಸೂಚಿಸಿದರು.
ಎನ್‍ಎಚ್‍ಎಂನಡಿ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವೈದ್ಯರೊಬ್ಬರು ಸಚಿವರ ಗಮನಕ್ಕೆ ತಂದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸುಜಾತಾ ರಾಥೋಡ್ ಅವರು ವೇತನ ಪಾವತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನದಲ್ಲಿ 29 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ನೀಟ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳ ಜೊತೆ ಯಾರೂ ಸಹ ಚೆಲ್ಲಾಟ ಆಡಬಾರದು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಪ್ರತಿಯೊಬ್ಬರದ್ದಾಗಿದೆ. ಈ ಹಿಂದೆ ರಾಜ್ಯದಲ್ಲಿ ಸಿಇಟಿ ಮೂಲಕ ಇಡೀ ದೇಶದಲ್ಲಿಯೇ ಮಾದರಿಯಾಗಿ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಕೇಂದ್ರದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಒಂದೇ ಪರೀಕ್ಷೆ ಮಾಡಲಾಗುತ್ತಿದೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಸೂಕ್ತ ಬಂದೋ ಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು. ಉತ್ತಮ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಂವಾದಕ್ಕೂ ಮೊದಲು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಚಿವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನಲ್ಲಿ ಬೋಧನೆ, ಗ್ರಂಥಾಲಯ ವ್ಯವಸ್ಥೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ‘ಔಷಧಿಯ ಸಸ್ಯವನ’ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಗ್ರಾ.ಪಂ.ಸದಸ್ಯರಾದ ಜಾನ್ಸನ್ ಪಿಂಟೋ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕರಾದ ವಿಶಾಲ್ ಕುಮಾರ್, ಡಾ.ನಂಜುಂಡಯ್ಯ, ಡಾ.ಸತೀಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.