Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ರಂಗ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ವ್ಯವಸ್ಥೆ ಕಲ್ಪಿಸಿ : ಅಲ್ಲಾರಂಡ ವಿಠಲ ಮನವಿ*
  • *ವಿಶ್ವ ರಂಗಭೂಮಿ ದಿನಾಚರಣೆ : ರಂಗಭೂಮಿ ಕಲಾವಿದಗೆ ಪ್ರೋತ್ಸಾಹದ ಅಗತ್ಯವಿದೆ : ಕಲಿಯಂಡ ಸರಸ್ವತಿ ಅಭಿಮತ*
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಬ್ಬಾಲೆ ದೇವರಪುರ ದೇವರಕಾಡಿನಲ್ಲಿ ಕೊಡವ ರೈಡರ್ಸ್ ಕ್ಲಬ್ 5ನೇ ವರ್ಷದ ವನಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಬ್ಬಾಲೆ ದೇವರಪುರ ದೇವರಕಾಡಿನಲ್ಲಿ ಕೊಡವ ರೈಡರ್ಸ್ ಕ್ಲಬ್ 5ನೇ ವರ್ಷದ ವನಮಹೋತ್ಸವ*

ಜುಲೈ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.7 NEWS DESK : ಕೊಡವ ರೈಡರ್ಸ್ ಕ್ಲಬ್ 6ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ 5ನೇ ವರ್ಷದ ವನಮಹೋತ್ಸವವನ್ನು ಹೆಬ್ಬಾಲೆ ದೇವರಪುರ ದೇವರ ಕಾಡುವಿನಲ್ಲಿ ಹಮ್ಮಿಕೊಳ್ಳಲಾಯಿತು.  ಹೆಬ್ಬಾಲೆ ದೇವರಪುರ ಶ್ರೀ ಭದ್ರಕಾಳಿ ಹಾಗೂ ಅಯ್ಯಪ್ಪ ದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಇಲ್ಲಿನ ದೇವರಕಾಡುವಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇಲ್ಲಿನ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕಮುಖ್ಯಸ್ಥರು ಹಾಗೂ ಗ್ರಾಮಸ್ಥರು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ  ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾವು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಜ್ಞಾನವನ್ನು ಪಡೆದುಕೊಂಡರು. ತಿತಿಮತಿ ಅರಣ್ಯ ಇಲಾಖೆ ಹಾಗೂ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದಿಂದ ವಿವಿಧ ಕಾಡು ಜಾತಿಯ ಗಿಡಗಳು ಹಾಗೂ ಹಣ್ಣಿನ ಗಿಡಗಳನ್ನು ತಂದು ನೆಡಲಾಯಿತು. ಸುಮಾರು ಒಂದು ಸಾವಿರಕ್ಕೂ ಅಧಿಕ ಗಿಡಗಳು ಕೆಲವೇ ಗಂಟೆಗಳಲ್ಲಿ ನೆಟ್ಟು ಮುಗಿಸಿದ ವಿಧ್ಯಾರ್ಥಿಗಳು ಇನ್ನು ನೆಡಬೇಕು ಎಂಬ ತವಕದಲ್ಲಿದ್ದದ್ದು ವಿಶೇಷ ಎನ್ನಬಹುದು. ಈ ಬಾರಿ ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಯಿಂದ ಕೂಡ ವಿಧ್ಯಾರ್ಥಿಗಳು ಆಗಮಿಸಿ ವನಮಹೋತ್ಸವದಲ್ಲಿ ಪಾಲ್ಗೊಂಡರು. ಕೊಡವ ರೈಡರ್ಸ್ ಕ್ಲಬ್ ತಂಡದೊಂದಿಗೆ ತಿತಿಮತಿ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು, ಜಿಲ್ಲೆಯ ಬಾಂಡಿಂಗ್ ಬ್ಲೂಮ್ ತಂಡದ ಸದಸ್ಯರು, ಯೋಗ ಟ್ರೈಬ್ ಸದಸ್ಯರು, ಗೋಣಿಕೊಪ್ಪ ಕಾವೇರಿ ಕಾಲೇಜಿನ ಪದವಿ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಇಲ್ಲಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು, ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆ, ಕೂರ್ಗ್ ಪಬ್ಲಿಕ್ ಸ್ಕೂಲ್ (ಕಾಪ್ಸ್), ದೇವರಪುರ ರಾಜೇಶ್ವರಿ ವಿದ್ಯಾಸಂಸ್ಥೆ, ಪೊನ್ನಂಪೇಟೆ ಸಾಯಿ ಶಂಕರ್ ವಿದ್ಯಾಸಂಸ್ಥೆ, ವಿರಾಜಪೇಟೆಯ ತ್ರಿವೇಣಿ ಸ್ಕೂಲ್ ಸೇರಿದಂತೆ ಮೈಸೂರಿನ ಫೋನಿಕ್ಸ್ ಇಂಟರ್ನ್ಯಾಷನಲ್ ಅಕಾಡೆಮಿ ಸ್ಕೂಲ್, ಬೆಂಗಳೂರಿನ ಟ್ರವೆಂಡರ್ ಸಂಸ್ಥೆಯ ಸದಸ್ಯರ ತಂಡ, ಮೈಸೂರಿನ ಎಸ್ ವೈ ಫೊಟೋಗ್ರಾಫಿ ಸದಸ್ಯರ ತಂಡ, ಯೂನಿಬಿಕ್ಸ್ ಸ್ನ್ಯಾಕ್ಸ್ ಸದಸ್ಯರ ತಂಡ ಸೇರಿದಂತೆ ಕೊಡವ ರೈಡರ್ಸ್ ಕ್ಲಬ್ ತಂಡ ಭಾಗವಹಿಸಿದರು. ಇದಕ್ಕೂ ಮೊದಲು ನಡೆದ ವೇದಿಕೆ ಸಮಾರಂಭದಲ್ಲಿ ಇಲ್ಲಿನ ಊರು ತಕ್ಕರಾದ ಸಣ್ಣುವಂಡ ವಸಂತ್ ಕುಶಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಯ ಜಿಲ್ಲಾ ಸಂಘ ಚಾಲಕ್ ಚಕ್ಕೇರ ಮನು, ನಾಗರಹೊಳೆ ಎಸಿಎಫ್ ಕಂಬೇಯಂಡ ಗೋಪಾಲ್, ತಿತಿಮತಿ ಆರ್ ಎಫ್ ಓ ಹೆಚ್ ಎಸ್ ಗಂಗಾಧರ್, ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ಕೋಣೆರೀರ ನಾಣಯ್ಯ, ಸಮಾಜ ಸೇವಕರಾದ ಅಜ್ಜಿಕುಟ್ಟೀರ ಶಾಂತು ಚಿಣ್ಣಪ್ಪ, ಚಕ್ಕೇರ ಬಿಪಿನ್ ಅಚ್ಚಯ್ಯ ಹಾಗೂ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಉಪಸ್ಥಿತರಿದ್ದು ಮಾತನಾಡಿದರು. ಕಾರ್ಯಕ್ರಮದ ಮೊದಲಿಗೆ ಅಜ್ಜಮಾಡ ಪ್ರಮೀಳಾ ಕರುಂಬಯ್ಯ ಹಾಗೂ ಚೊಟ್ಟೆಯಂಡಮಾಡ ಸವಿತಾ ಪ್ರಾರ್ಥಿಸಿದರೆ. ಚಮ್ಮಟೀರ ಪ್ರವೀಣ್ ಉತ್ತಪ್ಪ ಸ್ವಾಗತಿಸಿ, ಸಣ್ಣುವಂಡ ದರ್ಶನ್ ಕಾವೇರಪ್ಪ ವಂದಿಸಿ, ಚೆನ್ನಪ್ಪಂಡ ಕಲ್ಪನ ತಿಮ್ಮಯ್ಯ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ರಂಗ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ವ್ಯವಸ್ಥೆ ಕಲ್ಪಿಸಿ : ಅಲ್ಲಾರಂಡ ವಿಠಲ ಮನವಿ*

ಮಾರ್ಚ್ 28, 2026

*ವಿಶ್ವ ರಂಗಭೂಮಿ ದಿನಾಚರಣೆ : ರಂಗಭೂಮಿ ಕಲಾವಿದಗೆ ಪ್ರೋತ್ಸಾಹದ ಅಗತ್ಯವಿದೆ : ಕಲಿಯಂಡ ಸರಸ್ವತಿ ಅಭಿಮತ*

ಮಾರ್ಚ್ 28, 2026

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ವಿಶ್ವ ರಂಗಭೂಮಿ ದಿನಾಚರಣೆ : ರಂಗಭೂಮಿ ಕಲಾವಿದಗೆ ಪ್ರೋತ್ಸಾಹದ ಅಗತ್ಯವಿದೆ : ಕಲಿಯಂಡ ಸರಸ್ವತಿ ಅಭಿಮತ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.28 NEWS DESK : ಅಲ್ಲಾರಂಡ ರಂಗಚಾವಡಿಯ ವತಿಯಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ ನಗರದ ಪತ್ರಿಕ…

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.