Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯಾರ್ಥಿಗೊಂದು ಮರ, ಶಾಲೆಗೊಂದು ವನ : ಅರಣ್ಯ ಸಂರಕ್ಷಣೆಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯಾರ್ಥಿಗೊಂದು ಮರ, ಶಾಲೆಗೊಂದು ವನ : ಅರಣ್ಯ ಸಂರಕ್ಷಣೆಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*

ಜುಲೈ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.7 NEWS DESK :  ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ  ಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್,‌ ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕದ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ *ವನ ಮಹೋತ್ಸವ ಆಚರಣೆ* 2024 ಯ ಅಂಗವಾಗಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಅರಣ್ಯ ಸಸಿನೆಟ್ಟು ವನ ಸಂಭ್ರಮ* ವನ್ನು ಆಚರಿಸಲಾಯಿತು. ಶಾಲಾವರಣದಲ್ಲಿ ಗಿಡನೆಟ್ಟು ವನ ಮಹೋತ್ಸವ ಆಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ರಾಷ್ಟ್ರೀಯ ಹಸಿರು ಪಡೆಯ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್,  ವನ ಮಹೋತ್ಸವ ಅಥವಾ ಅರಣ್ಯ ಉತ್ಸವವು ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಜುಲೈ ತಿಂಗಳಲ್ಲಿ ಆಚರಿಸಲಾಗುವ ವಾರ್ಷಿಕ ಗಿಡ ನೆಟ್ಟು ಬೆಳೆಸುವ ಹಬ್ಬವಾಗಿದ್ದು, ಇದರಲ್ಲಿ ದೇಶದಾದ್ಯಂತ ಸಾವಿರಾರು ಮರಗಳನ್ನು ನೆಡಲಾಗುತ್ತದೆ. ಅರಣ್ಯ ಸಂರಕ್ಷಣೆಯ ಜಾಗೃತಿ ಮತ್ತು ಪರಿಸರವನ್ನು ಉಳಿಸಲು ಜುಲೈ 1 ರಿಂದ ಜುಲೈ 7 ರವರೆಗೆ ವನ ಮಹೋತ್ಸವ ಸಪ್ತಾಹವನ್ನು ಆಚರಿಸಲಾಗುತ್ತದೆ ಎಂದರು.       ಮನುಷ್ಯನ ಅತಿಯಾಸೆಯಿಂದ ಪರಿಸರದಲ್ಲಿ ಗಿಡ-ಮರಗಳ ಮಾರಣ ಹೋಮ ಹೆಚ್ಚುತ್ತಿರುವುದರಿಂದ ಅರಣ್ಯ ಸಂಪತ್ತು ಕ್ಷೀಣಿಸಿದ್ದು, ಇದರಿಂದಾಗಿ  ಬರಗಾಲ ಎದುರಿಸುವ ದುಃಸ್ಥಿತಿ ಬಂದೋದಗಿದೆ. ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕ್ಷೀಣಿಸುತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ, ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಅರಣ್ಯ ಸಂಪತ್ತು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿದರೆ, ಖಂಡಿತಾ ಬರಗಾಲ ಅಳಿಸಬಹುದಾಗಿದೆ.ಅರಣ್ಯ ಬೆಳೆಸಲು ನಾವು ನಮ್ಮ ಪಾಲಿನ ಕೆಲಸವನ್ನು ನಾವೂ ಮಾಡಬೇಕು ಎಂದರು. ಎಂದರು.     ಆದ್ದರಿಂದ, ನಾವೆಲ್ಲರೂ ನಮ್ಮ ಮನೆ, ಶಾಲೆ, ಕಛೇರಿಗಳು,, ರಸ್ತೆ ಬದಿ ಹಾಗೂ ನಮ್ಮ ಸುತ್ತಮುತ್ತಲಿನ  ಜಾಗಗಳಲ್ಲಿ ಅರಣ್ಯ ಗಿಡಗಳನ್ನು  ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದು ಪ್ರೇಮಕುಮಾರ್ ಹೇಳಿದರು. ವನ ಮಹೋತ್ಸವ ಆರಂಭದ ಕುರಿತು ಮಾತನಾಡಿದ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ  ಬಿ.ಡಿ.ರಮ್ಯ, ಅರಣ್ಯ ಗಿಡಗಳನ್ನು ನೆಡಲು ವಿದ್ಯಾರ್ಥಿಗಳು ಹಾಗೂ ಜನರನ್ನು ಪ್ರೋತ್ಸಾಹಿಸಲು ಸರ್ಕಾರವು ವಿವಿಧ ಹಂತಗಳಲ್ಲಿ ವಿವಿಧ ನೆಡುತೋಪು ಅಭಿಯಾನಗಳನ್ನು ಆಯೋಜಿಸುತ್ತಿದೆ. ಪ್ರತಿ ವಿದ್ಯಾರ್ಥಿಯು ಪ್ರಕೃತಿ ಮಾತೆಯಾದ ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು.  ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ವಿದ್ಯಾರ್ಥಿಗಳು  ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಉತ್ತಮ ಪರಿಸರ ನಿರ್ಮಾಣಕ್ಕೆ ಪಣ ತೊಡಬೇಕು ಎಂದರು. ಶಾಲೆಯ ಶಿಕ್ಷಕರಾದ‌ ಎಸ್.ಎಂ.ಗೀತಾ, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಅರಣ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ವಿದ್ಯಾರ್ಥಿಗಳು ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಪ್ರಚುರಪಡಿಸಿದರು. ಹಸಿರೇ ಉಸಿರು, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟ್ರದ ಸಂಪತ್ತು,  ಮಳೆಗಾಗಿ ಅರಣ್ಯ, ನೀರಿಗಾಗಿ ಅರಣ್ಯ ಸಂರಕ್ಷಣೆ ಮುಂತಾದ ಘೋಷವಾಕ್ಯಗಳನ್ನು ವಿದ್ಯಾರ್ಥಿಗಳು ಪ್ರಚುರಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.