Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*

ಜುಲೈ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.8 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಮೊದಲೇ ಪ್ರವಾಹ ಮುಂಜಾಗೃತಾ ಕ್ರಮವಾಗಿ ಸಂಜೆ ವೇಳೆ 1 ಸಾವಿರ ಕ್ಯುಸೆಕ್ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ ಬಿಡುಗಡೆ ಮಾಡಲಾಗಿದೆ.
ಕ್ರೆಸ್ಟ್ ಗೇಟ್ ತೆರೆಯುವ ವಿದ್ಯುತ್ ಚಾಲಿತ ಯಂತ್ರದ ಗುಂಡಿ ಒತ್ತುವ ಮೂಲಕ ನೀರನ್ನು ಬಿಡುಗಡೆ ಮಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ, ಮುಂದಿನ ಮಳೆಯ ಮುನ್ಸೂಚನೆ, ಒಳ ಹರಿವಿನ ಪ್ರಮಾಣ, ಪ್ರಸ್ತುತ ನದಿಗೆ ಹರಿ ಬಿಡಲಾಗುತ್ತಿರುವ ನೀರಿನ ಪ್ರಮಾಣ ಮತ್ತಿತ್ತರ ವಿಚಾರಗಳ ಕುರಿತು ಹಾರಂಗಿ ಜಲಾಶಯದ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳಿAದ ಮಾಹಿತಿ ಪಡೆದರು.
ಉತ್ತಮ ಮಳೆಯಿಂದ ಕಾವೇರಿ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹರಿಸುವ ನೀರಿನಿಂದ ಪ್ರವಾಹ ಪರಿಸ್ಥಿತಿ ಉಂಟಾಗದAತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಶಾಸಕರು ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಲಾಶಯದ 4 ಕ್ರೆಸ್ಟ್ ಗೇಟ್‌ಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಬಳಿಕ ಕ್ರೆಸ್ಟ್ ಗೇಟ್ ತೆರೆಯುವ ವಿದ್ಯುತ್ ಚಾಲಿತ ಯಂತ್ರದ ಗುಂಡಿ ಒತ್ತುವ ಮೂಲಕ ಶಾಸಕ ಡಾ.ಮಂತರ್ ಗೌಡ ನದಿ ಪಾತ್ರಕ್ಕೆ ನೀರನ್ನು ಬಿಡುಗಡೆ ಮಾಡಿದರು.
::: ಮುನ್ನೆಚ್ಚರಿಕೆ ವಹಿಸಿ :::
ಹಾರಂಗಿ ಜಲಾನಯನ ಪ್ರದೇಶಗಳಾದ ಮಡಿಕೇರಿ ನಗರ, ಗಾಳಿಬೀಡು, ವಣಚಲು, ಕಾಲೂರು, ಸೂರ್ಲಬ್ಬಿ ಮತ್ತಿತ್ತರ ಗ್ರಾಮಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹಾರಂಗಿ ಜಲಾಶಯದ ನೀರಿನ ಮೂಲಗಳಾದ ಹಟ್ಟಿಹೊಳೆ ಮತ್ತು ಮಾದಾಪುರ ಹೊಳೆಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ. ಈ ನದಿಗಳ ನೀರು ಹಾರಂಗಿ ಹಿನ್ನೀರಿಗೆ ಸೇರುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣ ಸಹಜವಾಗಿಯೇ ಏರಿಕೆಯಾಗುತ್ತಿದೆ. ಮಾತ್ರವಲ್ಲದೇ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ. ಇದರಿಂದಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ. ಜಲಾಶಯ ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಅವರು ಕೋರಿದ್ದಾರೆ.
ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸದಸ್ಯ ಕಿರಣ್ ಕುಮಾರ್, ಕುಶಾಲನಗರ ಪುರಸಭಾ ನಾಮ ನಿರ್ದೇಶಿತ ಸದಸ್ಯ ಶಿವ ಶಂಕರ್, ಹರೀಶ್, ಕೂಡಿಗೆ ಗ್ರಾ.ಪಂ ಸದಸ್ಯ ಟಿ.ಪಿ ಹಮೀದ್, ತೊರೆನೂರು ನೀರು ಬಳಕೆದಾರರ ಸಂಘದ ಅಧ್ಯಕ್ಷ ಪಾಂಡುರAಗ, ಕಾವೇರಿ ನೀರಾವರಿ ನಿಗಮದ ಮೇಲ್ವಿಚಾರಕ ಕೆ.ಕೆ.ರಘುಪತಿ, ಹಾರಂಗಿ ಜಲಾಶಯದ ಕಾರ್ಯಪಾಲಕ ಅಭಿಯಂತರ ಐ.ಕೆ.ಪುಟ್ಟಸ್ವಾಮಿ, ಕಿರಿಯ ಅಭಿಯಂತರ ಸಿದ್ದರಾಜು ಸೌಮ್ಯ, ಪ್ರಮುಖರಾದ ಕೃಷ್ಣೇಗೌಡ, ಶಿವಕುಮಾರ್, ಆದಂ, ಚಂದ್ರಶೇಖರ್, ಚೇತನ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
ಹಾರಂಗಿ ಜಲಾಶಯ ವಿವರ:
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 2848.76 ಅಡಿಗಳಷ್ಟು ನೀರಿನ ಸಂಗ್ರಹವಿದೆ. ಸೋಮವಾರ ಬೆಳಗಿನ 8.30ರ ದಾಖಲೆಗಳ ಪ್ರಕಾರ ಜಲಾಶಯಕ್ಕೆ 2394 ಕ್ಯುಸೆಕ್ ನೀರಿನ ಒಳಹರಿವು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನದಿಗೆ 1 ಸಾವಿರ ಕ್ಯುಸೆಕ್ ನೀರನ್ನು ಹರಿಯ ಬಿಡಲಾಗಿದ್ದರೆ, ಕಳೆದ ವರ್ಷ ಇದೇ ದಿನ ನದಿಗೆ 50 ಕ್ಯುಸೆಕ್ ಮತ್ತು ನಾಲೆಗೆ 20 ಕ್ಯುಸೆಕ್ ನೀರನ್ನು ಹರಿಸಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.