Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಸೂಚನೆ*

ಜುಲೈ 9, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜು.9 NEWS DESK : ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ 320 ಕಿ.ಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.

ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ, ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು.

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು.

ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಪ್ರವಾಸೋದ್ಯಮ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಸೂಚನೆ : ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಹೇಳಿದರು.

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ : ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು*

ಸಚಿವ ಹೆಚ್.ಕೆ.ಪಾಟೀಲ್ ಅವರ ಪ್ರಸ್ತಾವನೆ : ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್ ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್್ ಪ್ಲಾನ್ ಮಾಡಿ, ಬಜೆಟ್ ಪ್ಲಾನ್ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. ನಿಮ್ಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ ಗೆ ಹಣಕಾಸು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.

ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆಗೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.