Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿರ್ಬಂಧವಿದ್ದರೂ ಭಾರೀ ತೂಕದ ವಾಹನಗಳ ಸಂಚಾರ : ಹದಗೆಟ್ಟ ಗ್ರಾಮೀಣ ರಸ್ತೆಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿರ್ಬಂಧವಿದ್ದರೂ ಭಾರೀ ತೂಕದ ವಾಹನಗಳ ಸಂಚಾರ : ಹದಗೆಟ್ಟ ಗ್ರಾಮೀಣ ರಸ್ತೆಗಳು*

ಜುಲೈ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 NEWS DESK : ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಇಂದಿಗೂ ಗ್ರಾಮೀಣ ರಸ್ತೆಗಳಲ್ಲಿ ಭಾರೀ ವಾಹನಗಳಲ್ಲಿ ಮರಗಳ ಸಾಗಾಟ ನಿರಾತಂಕವಾಗಿ ನಡೆಯುತ್ತಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬೆಳೆಗಾರ ಮಂಞ್ಞೀರ ಉಮೇಶ್ ಅಪ್ಪಣ್ಣ ಮಾತನಾಡಿ, ಮುಂಗಾರಿನ ಅವಧಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರು ಕುಂಬಳದಾಳು ಗ್ರಾಮ ವ್ಯಾಪ್ತಿಯ ಬಿಳಿಗೇರಿ ರಸ್ತೆಯಲ್ಲಿ ಟಿಪ್ಪರ್‍ಗಳ ಮೂಲಕ ಭಾರೀ ಪ್ರಮಾಣದ ಕಲ್ಲು, ಮಣ್ಣು, ಮರಳು ಸಾಗಾಟವಾಗುತ್ತಿದೆ. ಮತ್ತೊಂದೆಡೆ ಭಾರೀ ವಾಹನಗಳಲ್ಲಿ ಸಿಲ್ವರ್ ಓಕ್ಸ್ ಮತ್ತು ಇತರೆ ಮರಗಳ ಸಾಗಾಟ ನಡೆಯುತ್ತಿದೆ ಎಂದು ಆರೋಪಿಸಿದರು.
ಬಿಳಿಗೇರಿ ಗ್ರಾಮಕ್ಕೆ ತೆರಳಲು ಉತ್ತಮವಾಗಿದ್ದ ರಸ್ತೆ ಭಾರೀ ವಾಹನಗಳ ಸಂಚಾರದಿಂದ ಹದಗೆಡಲಾರಂಭಿಸಿದೆ. ಹಲವೆಡೆ ರಸ್ತೆ ಬದಿ ಹಾಳಾಗಿದ್ದರೆ, ವಿವಿಧೆಡೆ ಗುಂಡಿಗಳು ನಿರ್ಮಾಣವಾಗಿದೆ. ಕಡಿದ ಮರಗಳನ್ನು ಎಳೆಯಲು ಜೆಸಿಬಿ ಮತ್ತು ಕ್ರೈನ್‍ಗಳನ್ನು ಬಳಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
::: ಶಾಸಕರ ಮಾತಿಗೆ ಬೆಲೆ ಇಲ್ಲ :::
ಶಾಸಕ ಎ.ಎಸ್.ಪೊನ್ನಣ್ಣ ಅವರು ಜಿಲ್ಲಾಡಳಿತದ ಮೂಲಕ ಮುಂಗಾರಿನ ಅವಧಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ. ಆದರೆ, ಶಾಸಕರ ಆದೇಶಕ್ಕೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತನ್ನು ನೀಡದೆ ಭಾರೀ ವಾಹನಗಳ ಮೂಲಕ ಮರಗಳ ಸಾಗಾಟ, ಕಲ್ಲು, ಮಣ್ಣಿನ ಸಾಗಾಟ ನಡೆಯುತ್ತಿದೆ ಎಂದರು.
ಗ್ರಾಮೀಣ ರಸ್ತೆಯಲ್ಲೆ ಭಾರೀ ವಾಹನಗಳನ್ನು ನಿಲ್ಲಿಸಿಕೊಂಡು ಮರಗಳನ್ನು ತುಂಬುವ, ಸಾಗಾಟ ಮಾಡುವ ಕೆಲಸ ನಡೆಯುತ್ತಿದೆ. ಇದನ್ನು ಪ್ರಶ್ನಿಸಲು ಸಾಧ್ಯವಾಗದ ಆತಂಕದ ವಾತಾವರಣವಿದೆ ಎಂದು ಉಮೇಶ್ ಅಪ್ಪಣ್ಣ ಕಳವಳ ವ್ಯಕ್ತಪಡಿಸಿದರು.
ಕಿರಿದಾದ ಗ್ರಾಮೀಣ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರದಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಮರಗಳ ಸಾಗಾಟದಿಂದ ರಸ್ತೆಯಲ್ಲಿ ಏರ್ಪಟ್ಟ ಹೊಂಡ ಗುಂಡಿಗಳಿಂದ ದ್ವಿಚಕ್ರ ವಾಹನ ಚಾಲನೆ ಅಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ವಾಹನ ಸಂಚಾರ ನಿರ್ಬಂಧs ಕಟ್ಟುನಿಟ್ಟಾಗಿ ಪಾಲನೆಯಾಗಬೇಕು ಮತ್ತು ಶೀಘ್ರ ಗಾಮೀಣ ರಸ್ತೆಯನ್ನು ದುರಸ್ತಿ ಪಡಿಸಬೇಕೆಂದು ಒತ್ತಾಯಿಸಿದರು.
ಬೆಳೆಗಾರರು ತೋಟದ ಮರಗಳನ್ನು ಸ್ವಂತ ಬಳಕೆಗೆ ಕಡಿಯಬೇಕಾದರೆ ಪರವಾನಗಿ ಪಡೆಯುವ ಸಂದರ್ಭ, ಮರಗಿಡಗಳನ್ನು ನೆಟ್ಟು ಬೆಳೆಸುವ ಮುಚ್ಚಳಿಕೆ ಬರೆದು ಕೊಡಬೇಕಾಗುತ್ತದೆ. ಆದರೆ, ಪ್ರಸ್ತುತ ಟಿಂಬರ್ ಲಾಬಿಗಳು ಮನಬಂದಂತೆ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದು, ಇವರಿಗೆ ಅಂತಹ ಮುಚ್ಚಳಿಕೆ ಇಲ್ಲವೆ ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಳಿಗೇರಿ ಗ್ರಾಮದ ಬೆಳೆಗಾರರಾದ ತುಂತಜೆ ತಿಮ್ಮಯ್ಯ, ಪರ್ಲಕೋಟಿ ಮಾಚಯ್ಯ ಹಾಗೂ ಕೋಟೇರ ಶರಿ ಮುದ್ದಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಸರಬರಾಜಿನಲ್ಲಿ…

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.