Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಕ ಅಳುವಾರದಲ್ಲಿ ಪತ್ರಿಕಾ ದಿನಾಚರಣೆ : ಸಮಸ್ಯೆಗಳನ್ನು ಪ್ರತಿಬಿಂಬಿಸುವುದಕ್ಕಿಂತ ಪರಿಹಾರದ ಕಡೆಗೆ ಹೆಚ್ಚು ಆದ್ಯತೆ ಇರಲಿ : ಪ್ರೊ.ಅಶೋಕ ಸಂಗಪ್ಪ ಆಲೂರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಕ ಅಳುವಾರದಲ್ಲಿ ಪತ್ರಿಕಾ ದಿನಾಚರಣೆ : ಸಮಸ್ಯೆಗಳನ್ನು ಪ್ರತಿಬಿಂಬಿಸುವುದಕ್ಕಿಂತ ಪರಿಹಾರದ ಕಡೆಗೆ ಹೆಚ್ಚು ಆದ್ಯತೆ ಇರಲಿ : ಪ್ರೊ.ಅಶೋಕ ಸಂಗಪ್ಪ ಆಲೂರ ಕರೆ*

ಜುಲೈ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.9 NEWS DESK : ಯಾವುದೇ ಸಮಸ್ಯೆಗಳನ್ನು ಹೆಚ್ಚಾಗಿ ಪ್ರತಿಬಿಂಬಿಸುವುದಕ್ಕಿಂತ ಅವುಗಳ ಪರಿಹಾರದ ಕಡೆಗೆ ಹೆಚ್ಚು ಆದ್ಯತೆ ಕೊಡುವ ವರದಿಗಳನ್ನು ಮಾಡುವುದು ಹೆಚ್ಚು ಸಮಾಜಮುಖಿಯಾದ ಕೆಲಸವಾಗುತ್ತದೆ ಎಂದು ಕೊಡಗು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಹಾಗೂ ಕೊಡಗು ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ವಿಶ್ವ ವಿದ್ಯಾಲಯದ ಜ್ಞಾನ ಕಾವೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ನಾಲ್ಕು ಆಧಾರಗಳೆನಿಸಿದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವಿಶೇಷವಾಗಿ ಪತ್ರಿಕಾ ರಂಗ ಸಮಾಜದ ಆಗು ಹೋಗುಗಳನ್ನು ವಿಭಿನ್ನತೆಯಿಂದ ನೋಡಿ ಸ್ಪಷ್ಟತೆಯಿಂದ ವರದಿ ಮಾಡಬೇಕೆಂದು ಸಲಹೆ ನೀಡಿದರು.
ಕೊಡಗಿನ ಪತ್ರಕರ್ತರು ಪ್ರಮಾಣಿಕತೆ ಅಧ್ಯಯನಶೀಲತೆ ಮತ್ತು ಸ್ಪಷ್ಟತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮುಂಬರುವ ದಿನಗಳಲ್ಲೂ ಈ ಪರಂಪರೆ ಮುಂದುವರೆಯಲಿ ಎಂದು ಆಶಿಸಿ, ಕೊಡಗು ವಿಶ್ವ ವಿದ್ಯಾಲಯದಲ್ಲಿ ವಿಜ್ಞಾನ ವಿಷಯಗಳ ಮತ್ತು ಇತ್ತೀಚಿನ ಸಂಶೋಧನೆಗಳ ಕುರಿತು ವರದಿಗಾರಿಕೆಯ ಬಗ್ಗೆ ವಿಶೇಷ ಕಾರ್ಯಾಗಾರವನ್ನು ಆಯೋಜಿಸುವುದಾಗಿ ಘೋಷಿಸಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ವಿಶ್ವ ವಿದ್ಯಾಲಯದಲ್ಲಿ ಬಿ.ಸಿ.ಎ, ಎಂ.ಸಿ.ಎ ಹಾಗೂ ಎಂ.ಬಿ.ಎ ನೂತನ ಕೋರ್ಸ್‍ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಿಶ್ವ ವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಮಾತನಾಡಿ ಖಡ್ಗಕ್ಕಿಂತ ಲೇಖನಿ ಹರಿತ ಎಂಬ ಮಾತನ್ನು ನಾವೆಲ್ಲರೂ ಕೇಳಿದ್ದೇವೆ. ಕೊಡಗಿನಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡುವ ಪತ್ರಕರ್ತರ ಪಡೆಯೇ ಇರುವುದು ಹೆಮ್ಮೆಯ ವಿಚಾರ. ಯಾವುದೇ ವಿಷಯವನ್ನು ಅಥವಾ ಸರ್ಕಾರವನ್ನು ಉಳಿಸುವ ಇಲ್ಲವೇ ಅಳಿಸುವ ಶಕ್ತಿಯನ್ನು ಪತ್ರಕರ್ತರ ಲೇಖನಿ ಹೊಂದಿದೆ ಎಂದು ಅವರು ವಿಶ್ಲೇಷಿಸಿದರು.
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಹಾಗೂ ಸತ್ಯವನ್ನು ಜನರ ಮುಂದಿಡುವ ಪತ್ರಕರ್ತರಿಗೆ ಕಾನೂನಿನ ರಕ್ಷಣೆ ಇಲ್ಲ. ಪತ್ರಿಕಾ ವೃತ್ತಿ ಹಿಂದೆಂದಿಗಿಂತಲೂ ಹೆಚ್ಚು ಸವಾಲಿನಂತಾಗಿದ್ದು, ಇತ್ತೀಚೆಗೆ ತಾಂತ್ರಿಕತೆ ಬೆಳೆದಿರುವ ಹಿನ್ನೆಲೆಯಲ್ಲಿ ಮುದ್ರಣಾ ಮಾಧ್ಯಮಕ್ಕೆ ಪೆಟ್ಟು ಬೀಳುವ ಆತಂಕ ಎದುರಾಗಿದೆ ಎಂದು ಹೇಳಿದರು.
ಜೂನಿಯರ್ ಅಲೂಮಿನಿ ಕ್ಲಬ್‍ನ ವಲಯಾಧ್ಯಕ್ಷರಾದ ಎಂ.ಡಿ. ರಂಗಸ್ವಾಮಿ ಮಾತನಾಡಿ ವಿದ್ಯಾರ್ಥಿಗಳು ಪರಿಸರ ಸ್ವಚ್ಛತೆ ಹಾಗೂ ಸಹಾಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್ ಮಾತನಾಡಿ ಕೊಡಗಿನಲ್ಲಿ ವಿಶ್ವ ವಿದ್ಯಾಲಯ ಆರಂಭಗೊಂಡಿರುವುದು ಹೆಮ್ಮೆಯ ವಿಚಾರ. ನಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಪದವಿ ಕಾಲೇಜುಗಳಿಗೆ ಅವಕಾಶ ಕಷ್ಟವಿತ್ತು. ಆದರೆ ಈಗ ಕೊಡಗಿನಲ್ಲೇ ಉನ್ನತ ಶಿಕ್ಷಣ ದೊರಕುತ್ತಿರುವುದು ಹರ್ಷದಾಯಕ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ಹೇಳಿದರು.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪುಲಿಯಂಡ ರಾಮ್ ದೇವಯ್ಯ ಅವರು ತಮ್ಮ ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಹೊಸ ದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ ಅವರಿಗೆ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿ ಅಮೃತ್‍ರಾಜ್ ಪ್ರಾರ್ಥಿಸಿದರು. ಕೊಡಗು ಜಿಲ್ಲಾ ಸಂಘದ ನಿರ್ದೇಶಕ ಡಿ.ಪಿ. ಲೋಕೇಶ್ ಸನ್ಮಾನಿತರನ್ನು ಪರಿಚಯಿಸಿದರು. ಉಪನ್ಯಾಸಕ ಜಮೀರ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿ, ಸಂಘದ ಖಜಾಂಚಿ ನವೀನ್ ಕುಮಾರ್ ವಂದಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.