Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಲಂಚಕ್ಕಾಗಿ ಬೇಡಿಕೆ : ಲೋಕಾಯುಕ್ತರ ಎದುರು ಕಣ್ಣೀರು*
ಇತ್ತೀಚಿನ ಸುದ್ದಿಗಳು

*ಲಂಚಕ್ಕಾಗಿ ಬೇಡಿಕೆ : ಲೋಕಾಯುಕ್ತರ ಎದುರು ಕಣ್ಣೀರು*

July 12, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.12 NEWS DESK : ಮಡಿಕೇರಿ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು.   ಸಾರ್ವಜನಿಕರೊಬ್ಬರು ಪೊನ್ನಂಪೇಟೆಯಲ್ಲಿ ಐದೂವರೆ ಸೆಂಟ್ ಜಾಗವಿದ್ದು, ಪೌತಿಖಾತೆ ಮಾಡಲು 50 ಸಾವಿರ ರೂ. ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದರು. ನಾನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ವಯಸ್ಸಾಗಿದೆ. ಪೊನ್ನಂಪೇಟೆಗೆ ಹೋಗಿ ಬರಲು ತುಂಬಾ ತೊಂದರೆಯಾಗಿದೆ. ಮಗಳ ಮದುವೆ ಮಾಡಬೇಕಿದ್ದು, ತುಂಬಾ ತೊಂದರೆಯಾಗಿದೆ. ಎರಡು ವರ್ಷದಿಂದ ಪೌತಿಖಾತೆ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ನಿಮ್ಮ ಕೆಲಸ ಕಾಲ ಮಿತಿಯಲ್ಲಿ ಆದ್ಯತೆ ಮೇಲೆ ಮಾಡಿಸಿಕೊಡಲಾಗುವುದು ಎಂದು ಅವರು ತಿಳಿಸಿದರು. ಮತ್ತೊಬ್ಬ ಮಹಾಲಕ್ಷ್ಮಿ ಅವರು ಜಾಗದ ಖಾತೆ ಮಾಡಿಕೊಡದೆ ಒಂದುವರೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ಜಾಗದ ಖಾತೆ ಮಾಡಿಸಿಕೊಡುವಂತೆ ಲೋಕಾಯುಕ್ತರಲ್ಲಿ ಮನವಿ ಮಾಡಿದರು. ಈ ಬಗ್ಗೆ ಪೌರಾಯುಕ್ತರಾದ ವಿಜಯ್ ಅವರು ಹೊಸದಾಗಿ ಖಾತೆ ಆಗಬೇಕಿದೆ. ಶೀಘ್ರ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು. ಮತ್ತೊಬ್ಬರು ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದ ವಸಂತ ಪಿ.ಕೆ. ಅವರು ಜಾಗವನ್ನು ದುರಸ್ತಿ ಮಾಡಿಕೊಡುವಂತೆ ಹಲವು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಮನವಿ ಮಾಡಿದರೂ ಸಹ ಕೆಲಸಗಳು ಆಗಿಲ್ಲ. ಈ ಸಂಬAಧ ಕೆಲಸ ಮಾಡಿಸಿಕೊಡುವಂತೆ ಲೋಕಾಯುಕ್ತ ಡಿವೈಎಸ್‌ಪಿ ಅವರಲ್ಲಿ ಮನವಿ ಮಾಡಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಅವರು ಹೇಳಿದರು. ಮತ್ತೊಬ್ಬ ಮನವಿದಾರರು ಜಾಗದ ಖಾತೆ ಬದಲಾವಣೆ ಮಾಡಿಕೊಡಬೇಕಿದ್ದು, ಈ ಸಂಬಂಧ ಎಷ್ಟೇ ಮನವಿ ಮಾಡಿದರೂ ಸಹ ಇನ್ನೂ ಕೆಲಸವಾಗಿಲ್ಲ ಎಂದು ದೂರಿದರು. ತಮ್ಮ ಕೆಲಸವನ್ನು ಕಾಲಮಿತಿಯಲ್ಲಿ ಮಾಡಿಸಿಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುವುದು ಕಡಿಮೆಯಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಬದಲಾವಣೆಯಾಗುತ್ತಿರುವುದು ಕಂಡುಬರುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣ ಮಾಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಸ್ಪಂದಿಸಬೇಕು ಎಂದು ಮನವಿ ಮಾಡಿದರು.  ಒಳ್ಳೆಯ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಹಕರಿಸಬೇಕು ಎಂದರು. ಕಚೇರಿಯಲ್ಲಿ ಹಾಜರಾತಿ ಬಯೋಮೆಟ್ರಿಕ್ ಅಳವಡಿಸಬೇಕು. ಚಲನವಲನ ವಹಿಯನ್ನು ದಾಖಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಪವನ್‌ಕುಮಾರ್ ಅವರು ಹೇಳಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗರಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ ಉದ್ಘಾಟನೆ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಸೂಚನೆ*
Next Article *ಕಾರ್ಮಿಕರ ಮತ್ತು ಚಾಲಕರ ಸಂಘದ ಕೊಡಗು ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಜಿ.ಕುಮಾರ್ ಆಯ್ಕೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.