Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ*

ಜುಲೈ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ನಡೆಯಿತು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಯು.ಚೇತನ್ ಹಾಗೂ ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಯು.ಚೇತನ್, ಮಾತನಾಡಿ 1987ರ ಜುಲೈ 11 ರಂದು ವಿಶ್ವ ಜನಸಂಖ್ಯೆ 500 ಕೋಟಿ ತಲುಪಿದ ಕಾರಣ ಈ ದಿನ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ.
ಮದುವೆಯಾಗಲು ಗಂಡಿಗೆ 21 ವರ್ಷ ಮತ್ತು ಹೆಣ್ಣಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು. ಮದುವೆಯ ನಂತರ ಕನಿಷ್ಠ 2 ವರ್ಷಗಳವರೆಗೂ ಮೊದಲನೇ ಮಗುವನ್ನು ಪಡೆಯಬಾರದು. ಎರಡು ಮಕ್ಕಳ ನಡುವೆ ಕನಿಷ್ಠ 3 ವರ್ಷಗಳ ಅಂತರವಿರಬೇಕು. 2 ಮಕ್ಕಳನ್ನು ಹೊಂದಿರುವ ದಂಪತಿಗಳು ಶಾಶ್ವತ ಕುಟುಂಬ ಕಲ್ಯಾಣ ವಿಧಾನವನ್ನು ಅಳವಡಿಸಿಕೊಳ್ಳಬೇಕು. ಎಲ್ಲಾ ಅರ್ಹ ದಂಪತಿಗಳು ಕುಟುಂಬ ಕಲ್ಯಾಣ ವಿಧಾನವನ್ನು ಅನುಸರಿಸಿ ಚಿಕ್ಕ ಕುಟುಂಬವನ್ನು ರೂಪಿಸಿಕೊಳ್ಳುವುದು. ಪೋಷಕರು ತಮ್ಮ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ಕೊಡಬೇಕು. ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಪುರುಷರ ಸಹಭಾಗಿತ್ವ ಬಹಳ ಪ್ರಾಮುಖ್ಯವಾದದ್ದು ಎಂದು ತಿಳಿಸಿದರು. ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ದಯಾನಂದ ಮಾತನಾಡಿ, ವಿಶ್ವ ಜನಸಂಖ್ಯಾ ದಿನಾಚರಣೆಯ ಉದ್ದೇಶ, ಇತಿಹಾಸ, ಜನಸಂಖ್ಯಾ ಸ್ಪೋಟದಿಂದ ಉಂಟಾಗುವ ಪರಿಣಾಮಗಳು, ವಸತಿ ಮತ್ತು ಆಹಾರ ಸಮಸ್ಯೆ, ನಿರುದ್ಯೋಗ, ಬಡತನ, ಹಸಿವು, ಆರ್ಥಿಕ ಅಸಮಾನತೆ, ಅನಕ್ಷರತೆ, ನೈಸರ್ಗಿಕ ಸಂಪನ್ಮೂಲಗಳ ಕೊರತೆ, ಅನೈರ್ಮಲ್ಯತೆಗೆ ಕಾರಣವಾಗುತ್ತದೆ ಎಂದು ಅಂಕಿ ಅಂಶಗಳ ಮೂಲಕ ಸವಿವರವಾಗಿ ತಿಳಿಸಿಕೊಟ್ಟರು.
ಜನಸಂಖ್ಯಾ ಹೆಚ್ಚಳದಿಂದ ಆರ್ಥಿಕ ಅಭಿವೃದ್ದಿ, ಉದ್ಯೋಗ, ಆದಾಯದ ಹಂಚಿಕೆ, ಬಡತನ ಸಾಮಾಜಿಕ ರಕ್ಷಣೆಯ ಮೇಲೆ ಪರಿಣಾಮ ಬೀರುತ್ತದೆ. ಗ್ರಾಮೀಣ ಭಾಗದಲ್ಲಿ ಗಂಡು ಮಗುವೆ ವಂಶೋದ್ಧಾರಕ, ಗಂಡು ಮಗು ಇಲ್ಲದಿದ್ದರೆ ಮೋಕ್ಷ ಸಿಗುವುದಿಲ್ಲ, ಗಂಡು ಮಗು ಜನಿಸುವವರೆಗೂ ಮಕ್ಕಳನ್ನು ಪಡೆಯಬೇಕು ಎಂಬ ಮೂಢ ನಂಬಿಕೆಯಿಂದ ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಮಾತನಾಡಿ, ಜನಸಂಖ್ಯಾ ನಿಯಂತ್ರಣಕ್ಕೆ ಸರ್ಕಾರ, ಎನ್‍ಜಿಒ ಹಾಗೂ ಸಮುದಾಯ ಸಂಸ್ಥೆಗಳ ವತಿಯಿಂದ ಜಾಗೃತಿ ಅಭಿಯಾನಗಳು, ವಿಶ್ವ ವಿದ್ಯಾನಿಲಯಗಳ ಸಹಕಾರದಿಂದ ಸಾರ್ವಜನಿಕ ಉಪನ್ಯಾಸಗಳು, ಚರ್ಚೆಗಳು, ಆರೋಗ್ಯ ಶಿಬಿರಗಳು, ಸಮುದಾಯದ ಸಜ್ಜುಗೊಳಿಸುವಿಕೆ ಸಹಕಾರದಿಂದ ಸಾರ್ವಜನಿಕರಿಗೆ ಕುಟುಂಬ ಕಲ್ಯಾಣ ಯೋಜನೆಗಳು, ಸಂತಾನೋತ್ಪತ್ತಿ, ಆರೋಗ್ಯ ಸಂಬಂಧಿತ ಸುಸ್ಥಿರ ಅಭಿವೃದ್ದಿ ಗುರಿಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಜನಸಂಖ್ಯಾ ನಿಯಂತ್ರಣಕ್ಕೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಾಥ್ ನಿರೂಪಿಸಿದರು ಹಾಗೂ ವಂದಿಸಿದರು. ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ದೇಚಮ್ಮ ಹಾಗೂ ನಗರ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಮತ್ತು ತಾಲ್ಲೂಕು ಆಶಾ ಮೆಂಟರ್ ಹಾಗೂ ತಾಲ್ಲೂಕು ಮಟ್ಟದ ಆಶಾಕಾರ್ಯಕರ್ತೆಯರು ಭಾಗವಹಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.