Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆ : ವಿದ್ಯುತ್ ಕಂಬ, ಮನೆ, ಕಾರುಗಳಿಗೆ ಹಾನಿ : ಹಸು ಸಾವು : ಶಾಲಾ ಕಾಲೇಜುಗಳಿಗೆ ರಜೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆ : ವಿದ್ಯುತ್ ಕಂಬ, ಮನೆ, ಕಾರುಗಳಿಗೆ ಹಾನಿ : ಹಸು ಸಾವು : ಶಾಲಾ ಕಾಲೇಜುಗಳಿಗೆ ರಜೆ

ಜುಲೈ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.14 NEWS DESK  : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಸುಮಾರು ಆರು ಕಾರುಗಳು ಜಖಂಗೊಂಡಿವೆ. ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ, ಮರಗಳು, ವಿದ್ಯುತ್ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಬಿದ್ದು ಹಸುವೊಂದು ಮೃತಪಟ್ಟಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.15 ರಂದು ರಜೆ ಘೋಷಿಸಲಾಗಿದೆ. ಕಳೆದೆರಡು ದಿನಗಳಿಂದ ಶಾಂತವಾಗಿದ್ದ ಮಳೆ ಭಾನುವಾರದಿಂದ ಮತ್ತೆ ತೀವ್ರತೆಯನ್ನು ಪಡೆದುಕೊಂಡಿದೆ. ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಟ್ಟಗುಡ್ಡದ ಮೇಲೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಮಡಿಕೇರಿ ನಗರದಿಂದ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಆರು ಕಾರುಗಳು ಜಖಂಗೊಂಡಿರುವ ಘಟನೆ ಸೋಮವಾರಪೇಟೆಯ ರೆಸಾರ್ಟ್ವೊಂದರ ಸಮೀಪ ನಡೆದಿದೆ. ಪ್ರವಾಸಿಗರು ಹಾಗೂ ಟ್ಯಾಕ್ಸಿ ಚಾಲಕರು ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆಗೊಳಿಸಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸ್ಥಳದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ವಿದ್ಯುತ್ ಪ್ರವಹಿಸಿ 3 ತಿಂಗಳ ಗಬ್ಬದ ಹಸು ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸುರೇಶ್ ಎಂಬುವವರಿಗೆ ಸೇರಿದ ಹಸು ಇದಾಗಿದೆ. ಶನಿವಾರಸಂತೆ ಹೋಬಳಿಯ ಗೌಡಳ್ಳಿ ಗ್ರಾ.ಪಂ ವ್ಯಾಪ್ತಿಯ ಚನ್ನಾಪುರ ಗ್ರಾಮದ ನಿವಾಸಿ ಲಕ್ಷ್ಮೀ ಎಂಬುವವರಿಗೆ ಸೇರಿದ ಮನೆಗೆ ಮಳೆಯಿಂದ ಭಾಗಶಃ ಹಾನಿಯಾಗಿದೆ. ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಅತ್ತೂರು ಗ್ರಾಮದಲ್ಲಿ ಜನಾರ್ಧನ್ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದೆ. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಗುಡ್ಡೆಹೊಸೂರು ಗ್ರಾ.ಪಂ ಅಧಿಕಾರಿ ಸುಮೇಶ್, ಕಂದಾಯ ನಿರೀಕ್ಷಕ ಸಂತೋಷ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
::: ಸ್ಥಳಾಂತರ :::
ಸಂಪಾಜೆ ಹೋಬಳಿಯ ಮೇಕೇರಿ ಗ್ರಾಮದ ಆಯಿಷಾ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಉಳಿದ ಭಾಗ ಬಿರುಕು ಬಿಟ್ಟಿದೆ. ಇಲ್ಲಿ ವಾಸ ಇದ್ದವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಗ್ರಾಮಗಳು ವಿದ್ಯುತ್ ಕೊರತೆ ಎದುರಿಸುತ್ತಿವೆ.ಅತಿಹೆಚ್ಚು ಮಳೆಯಾಗುವ ಕಾವೇರಿಯ ಉಗಮ ಸ್ಥಾನ ತಲಕಾವೇರಿ, ಭಾಗಮಂಡಲ ಮತ್ತು ನಾಪೋಕ್ಲು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಯಾವುದೇ ಹಾನಿಗಳು ಸಂಭವಿಸಿಲ್ಲ ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನಿಧಾನವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮಡಿಕೇರಿ ನಗರ, ಗಾಳಿಬೀಡು, ಕಾಲೂರು, ಮುಕ್ಕೋಡ್ಲು, ಬೆಟ್ಟಗೇರಿ, ಬಿಳಿಗೇರಿ, ಕರಿಕೆ, ಪೆರಾಜೆ, ಸಂಪಾಜೆ, ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ, ಸುಂಟಿಕೊಪ್ಪ, ಕುಶಾಲನಗರ, ಹಾರಂಗಿ, ಕೂಡಿಗೆ, ಸೋಮವಾರಪೇಟೆ, ಮಾದಾಪುರ, ಶಾಂತಳ್ಳಿ ಮತ್ತು ಶ್ರೀಮಂಗಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಐದೂವರೆ ಇಂಚಿಗೂ ಅಧಿಕ ಮಳೆಯಾಗಿದೆ. ನಾಪೋಕ್ಲುವಿನಲ್ಲಿ ಮೂರೂವರೆ ಇಂಚು ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ಮಂಜು ಸಹಿತ ಮೈಕೊರೆಯುವ ಚಳಿ ಇದ್ದು, ನಿರಂತರ ಗಾಳಿ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
::: ನದಿ, ಬೆಟ್ಟ ಪ್ರದೇಶದಲ್ಲಿ ಆತಂಕ :::
ಜಿಲ್ಲೆಯಲ್ಲಿ ನಿರತಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಬೆಟ್ಟಗುಡ್ಡ, ತಗ್ಗು ಪ್ರದೇಶ ಮತ್ತು ನದಿಯ ಆಸುಪಾಸಿನಲ್ಲಿರುವ ನಿವಾಸಿಗಳು ಆತಂಕಗೊAಡಿದ್ದಾರೆ. ಸ್ಥಳೀಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಎನ್‌ಡಿಆರ್ ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಆಡಳಿತ ಸನ್ನದ್ಧವಾಗಿರಬೇಕೆಂದು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.