Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ : ಹಲವು ಮನೆಗಳಿಗೆ ಹಾನಿ : ತುಂಬಿ ಹರಿಯುತ್ತಿರುವ ನದಿ ತೊರೆಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ : ಹಲವು ಮನೆಗಳಿಗೆ ಹಾನಿ : ತುಂಬಿ ಹರಿಯುತ್ತಿರುವ ನದಿ ತೊರೆಗಳು*

ಜುಲೈ 15, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಮಳೆ ತೀವ್ರತೆಯನ್ನು ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 48 ಇಂಚು ಮಳೆಯಾಗಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಅತಿಹೆಚ್ಚು 74 ಇಂಚು ಮಳೆಯಾಗಿದೆ. ಎರಡು ದಿನಗಳ ಧಾರಾಕಾರ ಮಳೆಯಿಂದ ಹಲವೆಡೆ ಹಾನಿಯಾಗಿದೆ.
ಜಿಲ್ಲೆಯಲ್ಲಿನ ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಶಾಂತಳ್ಳಿ, ಭಾಗಮಂಡಲ, ಸೋಮವಾರಪೇಟೆ, ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಶನಿವಾರಸಂತೆ, ಶ್ರೀಮಂಗಲ, ಸಂಪಾಜೆ, ಹೀಗೆ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ವಿವಿಧೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮರ, ಬರೆ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯುಂಟಾಗಿದೆ.
ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಹಾನಿಯಾಗಿದ್ದು, ನಗರಸಭೆ ಪೌರಾಯುಕ್ತ ವಿಜಯ್ ಹಾನಿ ಆಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮರಗೋಡು ಗ್ರಾಮದ ಎಂ.ಕೆ.ಅಣ್ಣು ಅವರ ವಾಸದ ಮನೆಯು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಪ್ರವೀಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ವೀಕ್ಷಿಸಿದರು. ಕುಟುಂಬವನ್ನು ಬೇರೊಂದು ಮನೆಗೆ ಸ್ಥಳಾಂತರಿಸಿದರು.
ಸೋಮವಾರಪೇಟೆ ಹೋಬಳಿಯ ನೇಗಳ್ಳಿ ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಎಂಬವರ ಮನೆಯ ಮೇಲೆ ಮರ ಬಿದ್ದು ಮೇಲ್ಚಾವಣಿ ಮತ್ತು ಗೋಡೆ ಪೂರ್ಣ ಹಾನಿಯಾಗಿದೆ.
ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.
ಮಾದಾಪಟ್ಟಣ ಗ್ರಾಮದ ನಿವಾಸಿ ಬಸವರಾಜು ಅವರ ವಾಸದ ಮನೆಯ ಗೋಡೆ ಹಾನಿ ಹಾನಿಯಾಗಿದೆ. ಈ ಸಂಬಂಧ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಕಂದಾಯ ಪರಿವೀಕ್ಷಕರು ಸ್ಥಳ ಪರಿಶೀಲನೆ ಮಾಡಿದರು. ಕುಶಾಲನಗರ ಹೋಬಳಿಯ ಹೆಗ್ಗಡಳ್ಳಿ ಗ್ರಾಮದ ಲಕ್ಷ್ಮಿ ಎಂಬವರ ಮನೆಯ ಗೋಡೆ ಭಾಗವು ಹಾನಿಯಾಗಿದ್ದು, ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಬೆಟ್ಟತ್ತೂರು ಗ್ರಾಮದ ದೇವರಕೊಲ್ಲಿ ಎಂಬಲ್ಲಿ ಕುಡಿಯರ ಗೌರಮ್ಮ ಕರುಂಬಯ್ಯ ಅವರ ಮನೆ ಮೇಲೆ ಮರ ಬಿದ್ದು ಹೆಚ್ಚಿನ ಹಾನಿಯಾಗಿದೆ.
ನೀರಿನ ಮಟ್ಟ ಏರಿಕೆ : ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ನದಿಯ ನೀರಿನ ಹರಿವು ಹೆಚ್ಚಿರುವುದರಿಂದ ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಕಟ್ಟಡ ಕಾಮಗಾರಿ ಪರಿಶೀಲನೆ : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಮಿಕರು ಕೆಲಸದ ಸಮಯದಲ್ಲಿ ಸುರಕ್ಷಿತಾ ಕ್ರಮಗಳನ್ನು ಕೈಗೊಂಡು, ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಎಚ್ಚರಿಗೆ ವಹಿಸುವಂತೆ ತಿಳಿವಳಿಕೆ ನೀಡಿದರು. ಹಾಗೆಯೇ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ತಹಶೀಲ್ದಾರರಾದ ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ರಾಮಚಂದ್ರ, ಪೌರಾಯುಕ್ತ ವಿಜಯ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಇತರರು ತಮ್ಮ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಳೆಗಾಲದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಕಾರ್ಮಿಕರಿಗೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಅವರು ಸಲಹೆ ನೀಡಿದರು.
::: ಮಳೆ ವಿವರ :::
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 58.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1188.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 575.20 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 88.25 ಮಿ.ಮೀ. ಕಳೆದ ವರ್ಷ ಇದೇ ದಿನ 15.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1739.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1089.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1221.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 464.71 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1132.69 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 394.44 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1036.01 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 484.81 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 811.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 442.95 ಮಿ.ಮೀ. ಮಳೆಯಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.