Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಕೀಲರಿಗೆ ಗೌರವ ಸಮರ್ಪಣೆ, ಹಿರಿಯರಿಗೆ ಬಟ್ಟೆ ವಿತರಣೆ : ಡಾ.ಅಂಬೇಡ್ಕರ್ ಅವರು ಮಹಾನ್ ಶಕ್ತಿ : ನಿರಂಜನ್ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಕೀಲರಿಗೆ ಗೌರವ ಸಮರ್ಪಣೆ, ಹಿರಿಯರಿಗೆ ಬಟ್ಟೆ ವಿತರಣೆ : ಡಾ.ಅಂಬೇಡ್ಕರ್ ಅವರು ಮಹಾನ್ ಶಕ್ತಿ : ನಿರಂಜನ್ ಬಣ್ಣನೆ*

ಜುಲೈ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.16 NEWS DESK : ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲಿ, ಅವರೊಬ್ಬ ಮಹಾನ್ ಶಕ್ತಿ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನದ ಮೂಲಕ ಅವರು ನೀಡಿರುವ ಕೊಡುಗೆ ಮರೆಯುವಂತ್ತಿಲ್ಲವೆಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಬಣ್ಣಿಸಿದ್ದಾರೆ.
ಜಿಲ್ಲಾ ಬುದ್ಧ ಪ್ರತಿಷ್ಠಾಪನ ಶಾಖೆ ವತಿಯಿಂದ ಮಡಿಕೇರಿಯ ಶಕ್ತಿ ವೃದ್ಧಾಶ್ರಮದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರು ವಕೀಲ ವೃತ್ತಿಗೆ ಸೇರ್ಪಡೆಗೊಂಡ ದಿನದ ಅಂಗವಾಗಿ ಜಿಲ್ಲೆಯ ವಕೀಲರುಗಳಿಗೆ ಗೌರವ ಸಮರ್ಪಣೆ ಹಾಗೂ ಬುದ್ಧ ಪೂರ್ಣಿಮೆ ಪ್ರಯುಕ್ತ ನಗರದ ಶಕ್ತಿ ಆಶ್ರಮದ ಹಿರಿಯ ನಾಗರಿಕರಿಗೆ ಬಟ್ಟೆ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಅಂಬೇಡ್ಕರ್ ಅವರು ವ್ಯಕ್ತಿಯಲ್ಲ, ದೊಡ್ಡ ಶಕ್ತಿ. ಅವರು ವಕೀಲರಾಗಿ ಮಾಡಿದ ಕೆಲಸ, ಪ್ರಜಾತಂತ್ರ ವ್ಯವಸ್ಥೆಗೆ ನೀಡಿದ ಸಂವಿಧಾನದ ಕೊಡುಗೆ ಯಾರೂ ಮರೆಯುವಂತಿಲ್ಲ. ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆ ಇನ್ನೂ ಸಕಾರಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಿರಿಯರನ್ನು ಹಾಗೂ ಪೋಷಕರನ್ನು ಗೌರವಿಸುವ ಮತ್ತು ಪ್ರೀತಿಸುವ ಗುಣ ಮೈಗೂಡಿಸಿಕೊಳ್ಳಬೇಕು. ಪೋಷಕರನ್ನು ಆಶ್ರಮದಲ್ಲಿರಿಸಿದರೆ ಮುಂದಿನ ದಿನಗಳಲ್ಲಿ ಆ ಪರಿಸ್ಥಿತಿ ನಮಗೂ ಬರಬಹುದು ಎಂಬ ಪರಿಜ್ಞಾನ ಇರಬೇಕು. ಆಧುನಿಕ ಜೀವನಕ್ಕೆ ಹೊಂದಿಕೊಳ್ಳುವ ವೇಗದಲ್ಲಿ ಮೌಲ್ಯ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ. ಅವಿಭಕ್ತ ಕುಟುಂಬ ವ್ಯವಸ್ಥೆ ಮರೆಯಾಗುತ್ತಿರುವುದು ವಿಷಾದನೀಯ ಎಂದು ನಿರಂಜನ್ ಹೇಳಿದರು.

ಕುಟುಂಬದಿಂದ ದೂರವಾದ ಹಿರಿಯರಿಗೆ ಸುಸಜ್ಜಿತ ವ್ಯವಸ್ಥೆಯೊಂದಿಗೆ ನೆಮ್ಮದಿಯ ಬದುಕು ರೂಪಿಸಲು ಶಕ್ತಿ ಆಶ್ರಮ ನೀಡುತ್ತಿರುವ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು ಮಾತನಾಡಿ, ತಂದೆ-ತಾಯಿಯರನ್ನು ದೂರ ಇಡುವವರಿಗೆ ಕಾಲವೇ ಪಾಠ ಕಲಿಸಲಿದೆ. ಮುಂದೊಂದು ದಿನ ತಿರುಗುಬಾಣವಾಗಿ ಪರಿಣಮಿಸುವುದು ನಿಶ್ಚಿತ. ಎಲ್ಲರು ಇದ್ದು ಇಲ್ಲದಂತೆ ಇರುವುದು ಅತ್ಯಂತ ಬೇಸರ ತರುವ ವಿಚಾರ. ನೊಂದವರಿಗೆ ಆಶ್ರಮ ಆಸರೆಯಾಗಿರುವುದು ಅಷ್ಟೇ ನೆಮ್ಮದಿಯ ವಿಷಯ ಎಂದರು.
ಡಾ.ಅಂಬೇಡ್ಕರ್ ಅವರ ಜೀವನವೇ ಹೋರಾಟದಿಂದ ಕೂಡಿತ್ತು. ನೋವುಂಡು ಸಮಾಜಕ್ಕೆ ಒಳಿತು ಬಯಸಿದ ಆದರ್ಶ ವ್ಯಕ್ತಿ ಅವರು ಎಂದು ಬಣ್ಣಿಸಿದರು.
ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದ ವಕೀಲ ಕೆ.ಆರ್.ವಿದ್ಯಾಧರ್ ಗೌತಮ ಬುದ್ಧ ಎಲ್ಲವನ್ನೂ ಬಿಟ್ಟು ನೆಮ್ಮದಿಯ ಬದುಕು ಕಟ್ಟಿಕೊಂಡಿದಲ್ಲದೆ ಸಮಾಜದ ಹಿತ ಕಾಯುವ ನಿಟ್ಟಿನಲ್ಲಿ ಧರ್ಮ ಸ್ಥಾಪಿಸಿ ಸಾಂಘಿಕ ಬದುಕು ರೂಪಿಸುವ ಮಹತ್ತರ ಹೆಜ್ಜೆ ಇಟ್ಟರು. ಯುದ್ಧದಿಂದ ಶಾಂತಿ ಸಾಧ್ಯವಿಲ್ಲ ಎಂಬ ಪ್ರತಿಪಾದನೆಯೊಂದಿಗೆ ಸಮಾಜಕ್ಕೆ ದಾರಿದೀಪವಾಗಿದ್ದ ಅವರ ಆದರ್ಶ ಇಂದಿಗೂ ಜೀವಂತ ಎಂದು ಅಭಿಪ್ರಾಯಪಟ್ಟರು.
ಡಾ.ಅಂಬೇಡ್ಕರ್ ಅವರು ಅಸ್ಪೃಶ್ಯತೆ ವಿರುದ್ಧ ಹೋರಾಡಿ ಸಮಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಂವಿಧಾನವೇ ನಮ್ಮೆಗೆಲ್ಲರಿಗೂ ಶ್ರೇಷ್ಠ ಗ್ರಂಥ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬುದ್ಧ ಪ್ರತಿಷ್ಠಾನದ ಜಿಲ್ಲಾ ಧಮ್ಮಾಚಾರಿ ಹೆಚ್.ಪಿ.ಶಿವಕುಮಾರ್, ಸಮಾಜದ ಪರಿವರ್ತನೆಯಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ಸಾಮಾಜಿಕ ಚಿಂತನೆಗಳಡಿ ಪ್ರತಿಷ್ಠಾನ ಕಾರ್ಯೋನ್ಮುಖಗೊಂಡಿದ್ದು, ಕಳೆದ 27 ವರ್ಷಗಳಿಂದ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ವಕೀಲರುಗಳಾದ ಕೆ.ಆರ್.ವಿದ್ಯಾಧರ್, ನಾಗೇಶ್ ಕುಮಾರ್, ಬಿ.ಇ.ಜಯೇಂದ್ರ, ಹೆಚ್.ಎನ್.ಜಾನಕಿ, ದಿವ್ಯ ನಂಜಪ್ಪ ಹಾಗೂ ತುಳಸಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಆಶ್ರಮದಲ್ಲಿ ನೆಲೆಸಿರುವ 29 ವಯೋವೃದ್ಧರಿಗೆ ಬಟ್ಟೆಯನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರಮುಖ ಪಳನಿ ಪ್ರಕಾಶ್, ಶಕ್ತಿ ವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್, ಬುದ್ಧ ಪ್ರತಿಷ್ಠಾನದ ರವಿ, ರವೀಂದ್ರ, ನಾಗಪ್ಪ, ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.