Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಳೆಯ ಆರ್ಭಟಕ್ಕೆ ಕೊಡಗು ತತ್ತರ : ಹಲವು ಕುಟುಂಬಗಳ ಸ್ಥಳಾಂತರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಳೆಯ ಆರ್ಭಟಕ್ಕೆ ಕೊಡಗು ತತ್ತರ : ಹಲವು ಕುಟುಂಬಗಳ ಸ್ಥಳಾಂತರ*

ಜುಲೈ 19, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.19 NEWS DESK : ಎಡೆಬಿಡದೆ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಕೊಡಗು ತತ್ತರಗೊಂಡಿದೆ. ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬರೆಗಳು ಜರಿಯುತ್ತಿವೆ, ರಸ್ತೆಗಳು ಜಲಾವೃತಗೊಳ್ಳುತ್ತಿವೆ. ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಪಾಯದಂಚಿನ ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಾಂತರ ::: ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬದವರಿಗೆ ಪ್ರವಾಹ ಭೀತಿ ಇರುವುದರಿಂದ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರರಾದ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತರರು ಭೇಟಿ ನೀಡಿ ವೀಕ್ಷಿಸಿದರು. ಕುಂಜಿಲ ಗ್ರಾಮದ ಖದಿಸಮ್ಮ ಎಂಬುವವರ ವಾಸದ ಮನೆ ಹಾನಿಯಾಗಿದ್ದು, ಮನೆಯು ಬೀಳುವ ಸ್ಥಿತಿಯಲ್ಲಿದೆ. ಈ ಹಿನ್ನೆಲೆ ಕುಟುಂಬದವರನ್ನು ಸ್ಥಳಾಂತರಿಸಲಾಗಿದೆ. ಮಡಿಕೇರಿ ಮೂರ್ನಾಡು ಮುಖ್ಯ ರಸ್ತೆಯ ಕಗ್ಗೊಡ್ಲು ಗ್ರಾಮದ ಮುತ್ತಪ್ಪ ಎಂಬುವರ ಅಂಗಡಿ ಮತ್ತು ಮನೆಗೆ ಹೆಚ್ಚಿನ ಮಳೆಯಿಂದಾಗಿ ಹೊಳೆ ತುಂಬಿ ನೀರು ಹರಿದು ಜಲಾವೃತವಾಗಿದೆ. ಈ ಕುಟುಂಬದವರನ್ನು ಸ್ಥಳಾಂತರಿಸಲು ಕ್ರಮವಹಿಸಲಾಗಿದೆ.
ಕುಶಾಲನಗರ ಹೋಬಳಿ ನೆಲ್ಯ ಹುದಿಕೇರಿ ಗ್ರಾಮದ ಕಾವೇರಿ ನದಿ ಪಾತ್ರದ ಬಳಿ ವಾಸವಾಗಿದ್ದ ರಾಜು ಎಂಬರ ಮನೆಗೆ ನೀರು ನುಗ್ಗಿದ್ದು. ಈ ಕುಟುಂಬಕ್ಕೆ ಕುಶಾಲನಗರ ತಹಸೀಲ್ದಾರ್ ಆಹಾರ ಕಿಟ್ ನೀಡಿ, ಕುಟುಂಬವನ್ನು ಸ್ಥಳಾಂತರಿಸಲಾಗಿದೆ.
ಕುಶಾಲನಗರ ತಾಲ್ಲೂಕು ಕುಶಾಲನಗರ ಹೋಬಳಿ ನೆಲ್ಯಹುದಿಕೇರಿ ಗ್ರಾಮದ ಕಾವೇರಿ ನದಿ ಪಾತ್ರದಲ್ಲಿ ವಾಸವಾಗಿದ್ದ ಅಕ್ಕಣ್ಣಿ ಕರ್ಪ ಅವರ ಮನೆಗೆ ಕಾವೇರಿ ನದಿ ನೀರು ನುಗ್ಗಿದ್ದು. ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರು ಆಹಾರ ಕಿಟ್ ವಿತರಿಸಿದರು. ಈ ಕುಟುಂಬದವರನ್ನು ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ಹೋಬಳಿ ಅಂಬಟ್ಟಿ ಗ್ರಾಮದ ನಿವಾಸಿ ಕೆ ಅಲೀಮಾ ರವರ ವಾಸದ ಮನೆಯ ಹಿಂಭಾಗದಲ್ಲಿ ಬರೆ ಕುಸಿಯುತ್ತಿದ್ದು, ಈ ಸಂಬAಧ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕುಟುಂಬದವರನ್ನು ಸ್ಥಳಾಂತರಿಸಿದ್ದಾರೆ. ಚೇಲವಾರ ಗ್ರಾಮದ ಚೆಟ್ಟಿಯಪ್ಪ ಎಂಬುವವರ ವಾಸದ ಮನೆಯ ಹಿಂಭಾಗದಲ್ಲಿ ಗೋಡೆ ಕುಸಿದಿದೆ. ಮನೆಯು ಸಂಪೂರ್ಣವಾಗಿ ಕುಸಿದು ಬೀಳುವ ಸಾಧ್ಯತೆಯಿದ್ದು, ಕುಟುಂಬದವರ ಸ್ಥಳಾಂತರಕ್ಕೆ ತಾಲ್ಲೂಕು ಆಡಳಿತ ಕ್ರಮವಹಿಸಿದೆ.
::: ಭಾಗಮಂಡಲ ಜಲಾವೃತ :::
ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಆರು ಇಂಚಿಗೂ ಅಧಿಕ ಮಳೆಯಾಗಿದೆ. ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಎತ್ತರ ಪ್ರದೇಶ ಮತ್ತು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮ ಪಂಚಾಯಿತಿ ಈಗಾಗಲೇ ಸೂಚನೆ ನೀಡಿದೆ. ವಿರಾಜಪೇಟೆ ಪಟ್ಟಣದ ಮುಖ್ಯ ರಸ್ತೆಗಳಿಗೆ ಪ್ರವಾಹದ ರೂಪದಲ್ಲಿ ನೀರು ನುಗ್ಗಿ ವರ್ತಕರು ಹಾಗೂ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಮನೆ ಮತ್ತು ಅಂಗಡಿಗಳಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ.
::: ಮನೆಗಳಿಗೆ ಹಾನಿ :::
ಹೆಚ್ಚಿನ ಮಳೆಯಿಂದ ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಮದೆ ಗ್ರಾಮದ ಮನೋಹರಿ ಹಾಗೂ ಸಂಪಾಜೆ ಗ್ರಾಮದ ಬಂಡನ ಸರೋಜನಿ ಎಂಬುವರ ಮನೆಯ ಮುಂದಿನ ಬರೆ ಕುಸಿದಿದ್ದು, ಸೋಮವಾರಪೇಟೆ ತಾಲೂಕಿನ ಬಿಳಕಿಕೊಪ್ಪ ಗ್ರಾಮದ ಸರಸ್ವತಿ ಎಂಬವರ ಮನೆ ಮೇಲೆ ತೀವ್ರ ಮಳೆಯಿಂದ ಮರ ಬಿದ್ದು ಮನೆ ಹಾನಿಯಾಗಿದೆ. ಕೊಡ್ಲಿಪೇಟೆ ಹೋಬಳಿ ಅವರೇದಾಳು ಗ್ರಾಮದ ಮೀನಾಕ್ಷಿ ರಂಗಯ್ಯ, ಯಾವಕಪಾಡಿ ಕಾಲೋನಿಯ ಕಾವೇರಿ, ಶ್ರೀಮಂಗಲ ಹೋಬಳಿ ಕೆ.ಬಾಡಗ ಗ್ರಾಮದ ಚಂದನಕೆರೆ ಹಾಡಿಯ ನಿವಾಸಿ ಮಧು, ಸೋಮವಾರಪೇಟೆ ಹೋಬಳಿಯ ನೇಗಳ್ಳಿ ಕರ್ಕಳ್ಳಿ ಗ್ರಾಮದ ಮುನಿಯಮ್ಮ, ಕೊಡ್ಲಿಪೇಟೆ ಹೋಬಳಿ ದೊಡ್ಡಕುಂದ ಗ್ರಾಮದ ಮೈಮುನ, ಕುಶಾಲನಗರ ತಾಲೂಕಿನ ಕುಶಾಲನಗರ ಹೋಬಳಿಯ ಬಸವನತ್ತೂರು ಗ್ರಾಮದ ಲಕ್ಷಿ÷್ಮ ಮಣಿ ಎಂಬುವರ ಮನೆ ಮೇಲ್ಚವಣಿ ಮುರಿದು ಬಿದ್ದಿದೆ. ಸೋಮವಾರಪೇಟೆ ಹೋಬಳಿ ಮೂವತ್ತೋಕ್ಲು ಗ್ರಾಮದ ಜಾನು ಬೇಡು ಅವರ ಮನೆ ಗೋಡೆ ವ್ಯಾಪಕ ಮಳೆಯಿಂದ ಕುಸಿದಿದೆ. ಕುಶಾಲನಗರ ಹೋಬಳಿ ಮಾದಾಪಟ್ಟಣ ಗ್ರಾಮದ ನಿವಾಸಿ ಜಯಮ್ಮ ಅವರ ವಾಸದ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಹಾನಿಯಾಗಿದೆ. ಸೋಮವಾರಪೇಟೆ ಹೋಬಳಿಯ ದೊಡ್ಡಬೂರು ಗ್ರಾಮದ ಗೌರಿ ರಾಜು ಅವರ ವಾಸದ ಮನೆಯು ಭಾರಿ ಮಳೆ- ಗಾಳಿಗೆ ಮನೆಯ ಗೋಡೆ ಕುಸಿದಿದೆ. ಮೇಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಕತ್ತೂರು ವಿರಾಜಪೇಟೆ ಮಡಿಕೇರಿಯ ಮುಖ್ಯ ರಸ್ತೆಯಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು ಮಹಮ್ಮದ್ ಹಾಗೂ ಮೂಸಾ ಎಂಬುವರ ಮನೆಗೆ ಸ್ವಲ್ಪ ಪ್ರಮಾಣ ನೀರು ಹರಿದು ಬಂದಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ ಚರಂಡಿಯನ್ನು ಸ್ವಚ್ಛಗೊಳಿಸಲಾಗಿದೆ. ಶನಿವಾರಸಂತೆ ಹೋಬಳಿಯ ಆಲೂರು ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಹಾರೋಹಳ್ಳಿ ಗ್ರಾಮದಲ್ಲಿ ರಸ್ತೆಯ ಎರೆಡು ಭಾಗದಲ್ಲಿ ಬರೆ ಕುಸಿದಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.
ರಸ್ತೆ ಕುಸಿಯುವ ಭೀತಿ ಹಿನ್ನೆಲೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಬಂದ್ ಮಾಡಲಾಗಿದ್ದು, ಬದಲಿ ರಸ್ತೆಯಲ್ಲಿ ಸಂಚಾರ ಕಲ್ಪಿಸಲಾಗಿದೆ. ಕಗ್ಗೊಡ್ಲು ಬಿಳಿಗೇರಿ ರಸ್ತೆಯಲ್ಲಿ ಬಾಯಂಡಾ ಮನೆ ಹತ್ತಿರ ಸೇತುವೆಯ ಒಂದು ಬದಿ ಮಣ್ಣು ಕುಸಿಯುತ್ತಿದೆ. ಈ ಸಂಬಂಧ ಮುಂಜಾಗ್ರತ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಬದಲಿ ರಸ್ತೆಯಾಗಿ ಮೇಕೇರಿ ಬಿಳಿಗಿರಿ ರಸ್ತೆ ಲಭ್ಯವಿದೆ. ಶ್ರೀಮಂಗಲ ಹೋಬಳಿ ಟಿ – ಶೆಟ್ಟಿಗೇರಿ ಗ್ರಾಮದಲ್ಲಿ ಪ್ರವಾಹದ ತೀವ್ರತೆ ಹೆಚ್ಚಾದ ಕಾರಣ ಪೊನ್ನಂಪೇಟೆ ತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಈ ಭಾಗದಲ್ಲಿ ನಡೆಯತ್ತಿದ್ದ ರ‍್ಯಾಫ್ಟಿಂಗ್ ನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಸೂಚನೆ ನೀಡಿದರು. ನೀರಿನ ಮಟ್ಟ ಏರಿಕೆ : ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಟ್ಟ, ಹರಿಹರ, ಇರ್ಪು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಲಕ್ಷ÷್ಮಣ ತೀರ್ಥ ನದಿ ಭರ್ತಿಯಾಗಿ ಬಾಳೆಲೆ ಸಮೀಪ ನಿಟ್ಟೂರು ಸೇತುವೆಯ ಪಕ್ಕದಲ್ಲಿ ನದಿಯ ಎರಡೂ ಬದಿಯ ಗದ್ದೆಗಳು ಮುಳುಗಡೆಯಾಗಿವೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.