Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಧಾರಾಕಾರ ಮಳೆ : ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಧಾರಾಕಾರ ಮಳೆ : ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಜುಲೈ 19, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.19 NEWS DESK : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಮಾತನಾಡಿದ ಅವರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಾರ್ವಜನಿಕರ ರಕ್ಷಣೆ ಮಾಡುವುದು ಅತಿಮುಖ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ತಾಕೀತು ಮಾಡಿದರು.
ಜಿಲ್ಲೆಯ 103 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್‍ಪೋರ್ಸ್ ಸಮಿತಿಯನ್ನು ರಚಿಸಿ ಪ್ರವಾಹ, ಬರೆಕುಸಿತ ಮತ್ತಿತರ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು.
ಪ್ರಾಕೃತಿಕ ವಿಕೋಪ ಸಂಬಂಧ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ಹಂತದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪ್ರವಾಹ ಪೀಡಿತ ಪ್ರದೇಶದವರನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರ ತೆರೆಯಬೇಕು. ಕಾಳಜಿ ಕೇಂದ್ರದಲ್ಲಿ ವಿದ್ಯುತ್, ಶೌಚಾಲಯ, ಇತರ ಮೂಲ ಸೌಲಭ್ಯಗಳು ಇರುವಂತೆ ಗಮನಹರಿಸಬೇಕು ತಹಶೀಲ್ದಾರರು, ತಾ.ಪಂ.ಇಒಗಳು ಇತರರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಕಾಳಜಿ ಕೇಂದ್ರದಲ್ಲಿ ಆರೋಗ್ಯ ಸೇವೆ ಕಲ್ಪಿಸಬೇಕು. ಆಂಬ್ಯುಲೆನ್ಸ್ ಸೇವೆ ಸಿದ್ಧವಾಗಿರಬೇಕು. ಸಂತ್ರಸ್ತರಿಗೆ ತಕ್ಷಣವೇ ಸ್ಪಂದಿಸುವ ಕಾರ್ಯ ಆಗಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆಗಳು ಇವೆ ಎಂದು ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಸೂಚಿಸಿದರು.
ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಬೇಕು. ಜಿಲ್ಲಾಡಳಿತದಿಂದ ಕಾಲಕಾಲಕ್ಕೆ ಹೊರಡಿಸುವ ಆದೇಶವನ್ನು ಚಾಚುತಪ್ಪದೆ ಪಾಲಿಸಬೇಕು. ಸುಳ್ಯ ಕಡೆಯಿಂದ ಬರುವ ವಾಹನಗಳಿಗೆ ಮಾಹಿತಿ ಫಲಕ ಅಳವಡಿಸಬೇಕು ಎಂದು ಹೆದ್ದಾರಿ ವಿಭಾಗದ ಎಂಜಿನಿಯರ್‍ಗೆ ಸೂಚಿಸಿದರು.
ಬರೆಕುಸಿತ, ರಸ್ತೆಗೆ ಮಣ್ಣು ಬೀಳುವುದು, ಮರ ಬೀಳುವುದು, ವಿದ್ಯುತ್ ಕಂಬ ಬೀಳುವುದು ಇಂತವನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದರು.
ಶಾಲಾ-ಕಾಲೇಜು ರಜೆ ಇದೆ ಎಂದು ಸಿಬ್ಬಂದಿಗಳು ಗೈರು ಆಗಬಾರದು. ಸಿಬ್ಬಂದಿಗಳು ಶಾಲಾ-ಕಾಲೇಜಿಗೆ ಹಾಜರಾಗಬೇಕು. ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಡೆಂಗ್ಯೂ ಪ್ರಕರಣ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಪ್ರಾಕೃತಿಕ ವಿಕೋಪ ಜೊತೆ ಡೆಂಗ್ಯೂ ನಿಯಂತ್ರಣ ಬಗ್ಗೆ ಗಮನಹರಿಸಬೇಕು. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಂಡು, ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಹೆದ್ದಾರಿಯಲ್ಲಿ ಸಾರಿಗೆ ಸಂಪರ್ಕಕ್ಕೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾ.ಪಂ.ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತ ಜೊತೆ ಸದಾ ಕೈಜೋಡಿಸಲಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಪ್ರವಾಹ ಪೀಡಿತ ಸಂತ್ರಸ್ತರ ಆರೋಗ್ಯ ಕಾಳಜಿ ಬಗ್ಗೆ ಗಮನಹರಿಸಲಾಗಿದೆ. ಹಾಗೆಯೇ ಸರ್ಕಾರದ ನಿರ್ದೇಶನದಂತೆ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ ಎಂದು ಹೇಳಿದರು.
ತಾ.ಪಂ.ಇಒಗಳಾದ ಶೇಖರ್ ಮತ್ತು ಅಪ್ಪಣ್ಣ ಮಾತನಾಡಿ, ಗ್ರಾ.ಪಂ.ಮಟ್ಟದಲ್ಲಿ ತುರ್ತು ಸಭೆಯನ್ನು ನಡೆಸಿ ಸ್ಥಳೀಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಹಾಗೆಯೇ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‍ಪೋರ್ಸ್ ಸಭೆಯನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ತಹಶೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ ಅವರು ಸ್ಥಳೀಯ ಮಟ್ಟದಲ್ಲಿ ಕಾಳಜಿ ಕೇಂದ್ರ ತೆರೆಯುವುದು, ಆಹಾರ ಕಿಟ್‍ಗಳ ವಿತರಣೆಗೆ ಕ್ರಮ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು, ಇತರರು ವಿಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದರು.
ವಿಡಿಯೊ ಸಂವಾದ ಬಳಿಕ ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಶಾಲಾ ಕಟ್ಟಡಗಳ ಸ್ಥಿತಿಗತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರಿಂದ ಮಾಹಿತಿ ಪಡೆದರು.
ಬಳಿಕ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಜತೆ ನಡೆದ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡು ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಪ್ರವಾಹ ಪೀಡಿತ ಸಂತ್ರಸ್ತರ ಸ್ಥಳಾಂತರ, ಕಾಳಜಿ ಕೇಂದ್ರ ಸ್ಥಾಪನೆ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.