Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಹಾಮಳೆಯಿಂದ ಹಾನಿ : ಕೊಡಗು ಜಿಲ್ಲೆಗೆ ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನ : ಉಸ್ತುವಾರಿ ಸಚಿವರ ಭರವಸೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಹಾಮಳೆಯಿಂದ ಹಾನಿ : ಕೊಡಗು ಜಿಲ್ಲೆಗೆ ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನ : ಉಸ್ತುವಾರಿ ಸಚಿವರ ಭರವಸೆ

ಜುಲೈ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.20 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಶನಿವಾರ ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಬಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಹಾಗೆಯೇ ಕೊಯನಾಡು ಬಳಿ ಮಳೆಯಿಂದ ಹಾನಿಯಾಗಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿಗೆ ಸಂಬಂಧಿಸಿದಂತೆ ಇಲ್ಲಿನ ಸ್ಥಳೀಯರೊಂದಿಗೆ ಸಮಾಲೋಚಿಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಸ್ಥಳೀಯರು ಮಾತನಾಡಿ ಗುಡ್ಡದ ಮಣ್ಣನ್ನು ರಸ್ತೆಗೆ ಸಾಗಿಸುತ್ತಿದ್ದು, ಈ ಕೆಲಸ ಮೊದಲು ಸ್ಥಗಿತವಾಗಬೇಕು ಎಂದು ಸಚಿವರ ಗಮನಕ್ಕೆ ತಂದರು. 2018 ರ ನಂತರ ಗುಡ್ಡದ ಮಣ್ಣು ಕುಸಿಯುತ್ತಿದೆ. ಅದಕ್ಕೂ ಮೊದಲು ಸಮಸ್ಯೆ ಇರಲಿಲ್ಲ. ರಸ್ತೆ ಅಗಲೀಕರಣವಾದಂತೆ ಸಮಸ್ಯೆಗಳು ಹೆಚ್ಚಾದವು ಎಂದು ಸ್ಥಳೀಯರೊಬ್ಬರು ತಿಳಿಸಿದರು‌.     ಸದ್ಯ ಇರುವ ರಸ್ತೆಯನ್ನು ಸರಿಪಡಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ಸಾಧ್ಯವಾದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ಎಲ್ಲರಿಗೂ ತೊಂದರೆ ಆಗಲಿದೆ ಎಂದು ಸ್ಥಳೀಯರು ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಹೆದ್ದಾರಿ ವಿಭಾಗದ ಎಂಜಿನಿಯರ್ ಗಿರೀಶ್ ಅವರು ಗುಡ್ಡದ ಮಣ್ಣನ್ನು ಬೇರೆಡೆ ಸ್ಥಳಾಂತರಿಸುತ್ತಿಲ್ಲ ಎಂದು ಮಾಹಿತಿ ನೀಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದ್ದು, ಈ ಸಂಬಂಧ  ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಶಾಶ್ವತ ಸೂರು ಕಲ್ಪಿಸಲಾಗುವುದು, ಹಾಗೆಯೇ ರಸ್ತೆ, ವಿದ್ಯುತ್, ಬೆಳೆಹಾನಿ, ಮನೆ ಹಾನಿ… ಹೀಗೆ ನಷ್ಟದ ಅಂದಾಜು ಮಾಡಿ, ಸ್ಥಳೀಯ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ವಿವರಿಸಿದರು.     ಮಳೆಯಿಂದ ಉಂಟಾಗಿರುವ ನಷ್ಟದ ಸಂಬಂಧ ಕಂದಾಯ ಸಚಿವರಿಗೂ ಮಾಹಿತಿ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು. ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ತ್ವರಿತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಹಿರಿಯ ಎಂಜಿನಿಯರ್ ಗಳ ಜತೆ ಚರ್ಚಿಸಲಾಗುವುದು ಎಂದರು. ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಜನಜೀವನಕ್ಕೆ ಅಸ್ತವ್ಯಸ್ತ ಉಂಟಾಗಿತ್ತು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಾಗುವುದು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶ ಸೇರಿದಂತೆ ಹಲವು ಕಡೆಗೆ ಭೇಟಿ ನೀಡಿ, ಮಾಹಿತಿ ಪಡೆಯಲಾಗಿದೆ ಎಂದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಕೊಲ್ಯದ ಗಿರೀಶ್ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.